ಮೈಸೂರು: ಸಂಸದ ಸ್ಥಾನದಿಂದ ಅನಂತಕುಮಾರ್ ಹೆಗಡೆ ಅವರನ್ನ ಅಮಾನತು ಮಾಡಬೇಕೆಂದು ಒತ್ತಾಯಿಸಿ ಜಿಲ್ಲಾಧಿಕಾರಿಗಳಿಗೆ ನೀಡಿರುವ ಪತ್ರದಲ್ಲಿ ಲೋಕಸಭಾ ಸ್ಪೀಕರ್ಗೆ ಕಾಂಗ್ರೆಸ್ ನಿಯೋಗ ಒತ್ತಾಯ ಮಾಡಿದೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಅವರಿಗೆ ಕಾಂಗ್ರೆಸ್ನ ನಗರಾಧ್ಯಕ್ಷ ಆರ್.ಮೂರ್ತಿ, ಜಿಲ್ಲಾಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್, ವಕ್ತಾರ ಎಂ.ಲಕ್ಷ್ಮಣ್ ಹಾಗೂ ಇತರರು ಸಂಸದ ಅನಂತಕುಮಾರ್ ಹೆಗಡೆ ವಿರುದ್ಧ ಕ್ರಮ ಕೈಗೊಳ್ಳಲು ಸ್ಪೀಕರ್ಗೆ ಪತ್ರ ರವಾನೆ ಮಾಡಬೇಕು ಎಂದು ಮನವಿ ಮಾಡಿದರು. ಸಂಸದ ಅನಂತಕುಮಾರ್ ಹೆಗಡೆ ಅವರು ಗಾಂಧೀಜಿ ಅವರ ಹೋರಾಟದಿಂದ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿಲ್ಲ. ವೋಟಿಗಾಗಿ ಸಿದ್ದರಾಮಯ್ಯ ಬೂಟ್ ನೆಕ್ಕುತ್ತಾರೆ ಹೀಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಇಂತಹ ಸಂಸದರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಪತ್ರದ ಮೂಲಕ ಮನವಿ ಮಾಡಿದರು.