ETV Bharat / state

ಕಾಂಗ್ರೆಸ್ ಎಂದರೆ ಶೇಮ್‌ಲೆಸ್ ಪಾರ್ಟಿ: ಬಿಜೆಪಿ ಶಾಸಕ ಯತ್ನಾಳ್

author img

By ETV Bharat Karnataka Team

Published : Nov 7, 2023, 11:53 AM IST

ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರು ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

MLA Basavanagowda Patil Yatnal
ಬಸವನಗೌಡ ಪಾಟೀಲ್ ಯತ್ನಾಳ್
ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಪ್ರತಿಕ್ರಿಯೆ

ಮೈಸೂರು: ''ಕಾಂಗ್ರೆಸ್ ಎಂದರೆ ಶೇಮ್‌ಲೆಸ್ ಪಾರ್ಟಿ'' ಎಂದು ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರು ರಾಜ್ಯದಲ್ಲಿ ಬಿಜೆಪಿ ಲೀಡರ್‌ಲೆಸ್ ಪಾರ್ಟಿ ಎಂದು ಟೀಕಿಸುತ್ತಿರುವ ಕಾಂಗ್ರೆಸ್ ನಾಯಕರಿಗೆ ಮೈಸೂರಿನಲ್ಲಿ ನಿನ್ನೆ (ಸೋಮವಾರ) ತಿರುಗೇಟು ನೀಡಿದರು.

ಚಾಮರಾಜನಗರದಲ್ಲಿ ಬರ ಅಧ್ಯಯನ ಪ್ರವಾಸ ಮುಗಿಸಿ ಮೈಸೂರಿಗೆ ಆಗಮಿಸಿ ಇಲ್ಲಿನ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ''ಬಿಜೆಪಿ ಪ್ರತಿಪಕ್ಷ ನಾಯಕನಿಲ್ಲದಿದ್ದರೂ ರಾಜ್ಯಾದ್ಯಂತ ಹೋರಾಟ ಮಾಡುತ್ತಿದೆ. ಸದನದ ಹೊರಗೆ ಹಾಗೂ ಒಳಗೆ ಹೋರಾಟ ಮಾಡುತ್ತಿದೆ. ಪ್ರತಿಪಕ್ಷ ನಾಯಕನ ಆಯ್ಕೆ ವಿಳಂಬವಾಗಿರುವುದನ್ನು ಒಪ್ಪಿಕೊಳ್ಳುತ್ತೇನೆ. ಮುಂದಿನ ದಿನಗಳಲ್ಲಿ ಪ್ರತಿಪಕ್ಷದ ನಾಯಕನ ಆಯ್ಕೆ ಆಗಬಹುದು. ಹಾಗೆಂದು ನಾವ್ಯಾರೂ ಸುಮ್ಮನೆ ಕುಳಿತಿಲ್ಲ. ಸರ್ಕಾರದ ವೈಫಲ್ಯದ ವಿರುದ್ಧ ಹೋರಾಟ ಮಾಡುತ್ತಿದ್ದೇವೆ'' ಎಂದರು.

ಅಸ್ಥಿರತೆ ಭೀತಿಯಲ್ಲಿ ಸಿದ್ದರಾಮಯ್ಯ ಸರ್ಕಾರ: ''ಬರ ಪರಿಸ್ಥಿತಿ ನಿರ್ವಹಣೆ ಮಾಡುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ. ರಾಜ್ಯಾದ್ಯಂತ ಭೀಕರ ಬರಗಾಲ ಉಂಟಾಗಿದೆ. ಇತ್ತ ಗಮನಹರಿಸದ ರಾಜ್ಯ ಸರ್ಕಾರ ಆಂತರಿಕ ಗೊಂದಲದಲ್ಲಿ ಮುಳುಗಿದೆ. ಸಿದ್ದರಾಮಯ್ಯನವರ ನೇತೃತ್ವದ ಸರ್ಕಾರ ಅಸ್ಥಿರತೆ ಭೀತಿಯಲ್ಲಿ ಮುನ್ನಡೆಯುತ್ತಿದೆ. ಸಿದ್ದರಾಮಯ್ಯಗೆ ತಮ್ಮನ್ನು ಸಿಎಂ ಸ್ಥಾನದಿಂದ ಕೆಳಗಿಳಿಸುತ್ತಾರೆ ಎಂಬ ಭೀತಿ ಕೂಡ ಕಾಡುತ್ತಿದೆ. ಇದರಿಂದ ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗಳಿಸಿ ತಮ್ಮ ಸ್ಥಾನವನ್ನು ಭದ್ರಗೊಳಿಸಲು ಮುಂದಾಗಿದ್ದಾರೆ. ಕಾಂಗ್ರೆಸ್ ಪಕ್ಷ ಆಂತರಿಕ ಕಲಹದಿಂದಲೇ ಸರ್ಕಾರ ಅಸ್ಥಿರತೆ ಎದುರಿಸುತ್ತಿದೆ" ಎಂದು ಯತ್ನಾಳ್ ಟೀಕಿಸಿದರು. ಮಂಗಳವಾರ ಮೈಸೂರು ಜಿಲ್ಲೆಯ ಹುಣಸೂರು ಮತ್ತು ಪಿರಿಯಾಪಟ್ಟಣ ತಾಲೂಕುಗಳಲ್ಲಿ ಬರ ಅಧ್ಯಯನ ಮಾಡಲಾಗುವುದು ಎಂದು ಇದೇ ವೇಳೆ ತಿಳಿಸಿದರು.

ಬಿಜೆಪಿ ವಿರುದ್ಧ ಸಚಿವ ಕೃಷ್ಣ ಬೈರೇಗೌಡ ಕಿಡಿ: "ಸರ್ಕಾರವನ್ನು ಅಲುಗಾಡಿಸಲು ಹಿಂದೆ ಹೇಗೆ ಆಪರೇಷನ್​ ಕಮಲ ಮಾಡಿದ್ದಾರೋ ಮತ್ತದೇ ರೀತಿ ಆಲೋಚನೆ ಹಾಗೂ ಪ್ರಯತ್ನ ಇರಬಹುದು ಎಂದು ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆಯಿಂದ ತಿಳಿದುಕೊಳ್ಳಬಹುದು" ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ. ಸೋಮವಾರ ಬಾಗಲಕೋಟೆಯ ನವನಗರದಲ್ಲಿರುವ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಸಿದ್ದರಾಮಯ್ಯ ಎಷ್ಟು ದಿನ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತಾರೆ ಎಂದು ತಿಳಿದಿಲ್ಲ. ಸಿಎಂ, ಡಿಸಿಎಂ ಸೇರಿ ರಾಜ್ಯ ಲೂಟಿ ಮಾಡ್ತಿದ್ದಾರೆ ಎಂಬ ಮೋದಿ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, "ಮೋದಿ ಅವರ ಪ್ರಯತ್ನ ಈಡೇರುವುದಿಲ್ಲ. ನಮ್ಮ ಪಕ್ಷದಲ್ಲಿ ಸಹಮತವಿದೆ. ನಾವೆಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡುತ್ತಿದ್ದೇವೆ" ಎಂದರು.

ಇದನ್ನೂ ಓದಿ: ಕಾರವಾರ: ಸಂಶಯಾಸ್ಪದ ಸ್ಪಿರಿಟ್ ಲಾರಿ ಜಪ್ತಿ: ಶಾಸಕ ಸತೀಶ್ ಸೈಲ್-ಅಬಕಾರಿ ಅಧಿಕಾರಿಗಳ ನಡುವೆ ಮಾತಿನ ಚಕಮಕಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.