ETV Bharat / state

ಭಾರತ್​ ಜೋಡೋ ಯಾತ್ರೆ ರಾಜಕೀಯ ಲಾಭಕ್ಕಾಗಿ ಎಂಬ ಭ್ರಮೆಯಲ್ಲಿದ್ದಾರೆ : ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ - ಈಟಿವಿ ಭಾರತ ಕನ್ನಡ

ಕಾಂಗ್ರೆಸ್​ನವರು ಭಾರತ್ ಜೋಡೋ ಯಾತ್ರೆ ರಾಜಕೀಯ ಲಾಭಕ್ಕಾಗಿ ಎಂಬ ಭ್ರಮೆಯಲ್ಲಿದ್ದಾರೆ.ಅವರು ಭ್ರಮಯಲ್ಲೇ ಇರಲಿ ಬಿಡಿ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಹೇಳಿದ್ದಾರೆ.

congress-is-under-illusion-that-bharat-jodo-yatra-is-for-political-gain
ಭಾರತ್​ ಜೋಡೋ ಯಾತ್ರೆ ರಾಜಕೀಯ ಲಾಭಕ್ಕಾಗಿ ಎಂಬ ಭ್ರಮೆಯಲ್ಲಿದ್ದಾರೆ : ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
author img

By

Published : Sep 19, 2022, 3:42 PM IST

ಮೈಸೂರು : ಕಾಂಗ್ರೆಸ್ ನವರು ಭಾರತ್ ಜೋಡೋ ಯಾತ್ರೆ ರಾಜಕೀಯ ಲಾಭಕ್ಕಾಗಿ ಎಂಬ ಭ್ರಮೆಯಲ್ಲಿದ್ದಾರೆ. ಅದಕ್ಕೆ ನಾವು ಬೇಡ ಎನ್ನುವುದು ಯಾಕೆ. ಕಾಂಗ್ರೆಸ್ ನವರು ಆ ಭ್ರಮೆಯಲ್ಲಿ ಇರಲಿ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಹೇಳಿದ್ದಾರೆ.

ಕಾರ್ಯಕ್ರಮದಲ್ಲಿ ಭಾಗವಹಿಸಲು ನಗರಕ್ಕೆ ಆಗಮಿಸಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದರು. ಕಾಂಗ್ರೆಸ್ ನವರ ಭಾರತ್ ಜೋಡೋ ಯಾತ್ರೆ ರಾಜಕೀಯ ಲಾಭಕ್ಕಾಗಿ ಎಂಬ ಡಿ.ಕೆ ಹಾಗೂ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು ಕಾಂಗ್ರೆಸ್ ನವರು ಅಧಿಕಾರಕ್ಕೆ ಬರುತ್ತೇವೆ ಎಂಬ ಭ್ರಮೆಯಲ್ಲಿದ್ದಾರೆ. ಇದಕ್ಕೆ ನಾವು ಏನು ಮಾಡಲು ಸಾಧ್ಯ, ಅವರನ್ನು ಭ್ರಮೆಯಲ್ಲಿರಲು ಬಿಟ್ಟುಬಿಡಿ ಎಂದು ಹೇಳಿದರು.

ಕಾಂಗ್ರೆಸ್​ನವರು ಭಯ ಮತ್ತು ಭ್ರಮೆಯಲ್ಲಿ ಬದುಕುತ್ತಿದ್ದಾರೆ : ಇಷ್ಟು ದಿನ ಕಾಂಗ್ರೆಸ್ ನವರು ಜನರನ್ನು ಭ್ರಮೆಯಲ್ಲಿಟ್ಟಿದ್ದರು. ಈಗ ಅವರೇ ಭ್ರಮೆಯಲ್ಲಿದ್ದಾರೆ. ಕಾಂಗ್ರೆಸ್ ನವರು ಈಗ ಎಲ್ಲಿದ್ದಾರೆ ಏನು ಮಾಡುತ್ತಿದ್ದಾರೆ ಎನ್ನುವುದು ಎಲ್ಲರಿಗೂ ಗೊತ್ತು. ಮುಂದಿನ ಚುನಾವಣೆಯಲ್ಲಿ ಮತ್ತಷ್ಟು ಗೊತ್ತಾಗಲಿದೆ. ಕಾಂಗ್ರೆಸ್ ಎಂದಿಗೂ ದೇಶಕ್ಕಾಗಿ ವಿಚಾರ ಮಾಡಿಲ್ಲ. ನಕಲಿ ಗಾಂಧಿ ಕುಟುಂಬದವರು ಮತ್ತು ಅವರ ಕುಟುಂಬದವರ ಬಗ್ಗೆ ಮಾತ್ರ ಯೋಚನೆ ಮಾಡುತ್ತಾರೆ ಈ ದೇಶದ ಬಗ್ಗೆ ಅವರಿಗೆ ಏನು ಗೊತ್ತಿಲ್ಲ ಎಂದು ಟೀಕಿಸಿದರು.

ರಾಹುಲ್ ಗಾಂಧಿಯವರು ಡಿಕೆ ಶಿವಕುಮಾರ್ ಅವರಿಂದ ಜೈಲಿನ ಬಗ್ಗೆ ಮಾಹಿತಿ ಪಡೆದ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಯಾರು ತಪ್ಪು ಮಾಡುತ್ತಿದ್ದಾರೋ ಅವರಿಗೆ ಭಯವಿರುತ್ತದೆ. ಅಂತಹವರು ಮಾತ್ರ ಜೈಲಿನ ಬಗ್ಗೆ ವಿಚಾರಿಸುತ್ತಾರೆ. ನಮಗೆ ಅದರ ಭಯವಿಲ್ಲ. ಕಾಂಗ್ರೆಸ್ ಅವರು ಈಗ ಭಯ ಮತ್ತು ಭ್ರಮೆಯಲ್ಲಿ ಬದುಕುತ್ತಿದ್ದಾರೆ ಎಂದು ಹೇಳಿದರು.

ರಾಷ್ಟ್ರಪತಿ ಕಾರ್ಯಕ್ರಮಕ್ಕೆ ಹೆಚ್ಚು ಜನ ಬನ್ನಿ : ಭಾರತ ಸ್ವತಂತ್ರವಾದ ನಂತರ ಇದೇ ಮೊದಲ ಬಾರಿಗೆ ರಾಷ್ಟ್ರಪತಿಯೊಬ್ಬರು ಮೈಸೂರು ದಸರಾ ಉದ್ಘಾಟನೆಗೆ ಬರುತ್ತಿದ್ದಾರೆ. ಅವರು ದೈವ ಭಕ್ತರಾಗಿದ್ದು, ಈ ಕಾರ್ಯಕ್ರಮದ ಪೂರ್ವ ತಯಾರಿ ಬಗ್ಗೆ ಮತ್ತು ಕಾರ್ಯಕ್ರಮದ ಬಗೆಗಿನ ಚರ್ಚೆಗೆ ಬಂದಿದ್ದೇನೆ. ದಸರಾ ಉದ್ಘಾಟನೆಗೆ ಬರುವ ರಾಷ್ಟ್ರಪತಿ ಕಾರ್ಯಕ್ರಮಕ್ಕೆ ಹೆಚ್ಚು ಜನರು ಭಾಗವಹಿಸಿ ಎಂದು ಸಚಿವರು ಹೇಳಿದರು. ದಸರಾ ಉದ್ಘಾಟನೆಯ ನಂತರ ರಾಷ್ಟ್ರಪತಿಗಳಿಗೆ ಹುಬ್ಬಳ್ಳಿಯಲ್ಲಿ ಪೌರ ಸನ್ಮಾನ ಮಾಡಲಾಗುವುದು ಎಂದು ಇದೇ ವೇಳೆ ತಿಳಿಸಿದರು.

ಇದನ್ನೂ ಓದಿ : ಮೈಸೂರು ದಸರಾ 2022: ಪ್ರವಾಸಿಗರಿಗಾಗಿ ಕಾಂಬೋ ಟಿಕೆಟ್ ವ್ಯವಸ್ಥೆ ಜಾರಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.