ಮೈಸೂರು: ನಾನು ಜ್ಯೋತಿಷ್ಯಗಾರನಲ್ಲ, ನಾನೊಬ್ಬ ಆಶಾವಾದಿ ಎಂದು ಮಧ್ಯಂತರ ಚುನಾವಣೆಯ ಬಗ್ಗೆ ಕೇಳಿದ ಪ್ರಶ್ನೆಗೆ ಮಾರ್ಮಿಕವಾಗಿ ಮಾಜಿ ಸಚಿವ ಡಿ ಕೆ ಶಿವಕುಮಾರ್ ಹೇಳಿದ್ದಾರೆ.
ಇಂದು ಮೈಸೂರಿನ ವಕೀಲರ ಸಂಘಕ್ಕೆ ಆಗಮಿಸಿದ ಸಂದರ್ಭದಲ್ಲಿ ಮಾಧ್ಯಮಗಳ ಜೊತೆ ಮಾತಾನಾಡಿದ ಅವರು, ಅವಧಿಗೆ ಮುನ್ನ ಚುನಾವಣೆ ನಡೆಯುತ್ತಿದೆ ಎಂಬ ಬಗ್ಗೆ ಹಲವು ನಾಯಕರು ಮಾತಾನಾಡುತ್ತಿದ್ದಾರೆ. ಈ ಬಗ್ಗೆ ನಾನು ಮಾತಾನಾಡುವುದಿಲ್ಲ. ನಾನು ಜ್ಯೋತಿಷ್ಯಗಾರನಲ್ಲ, ನಾನೊಬ್ಬ ಆಶಾವಾದಿ. ರಾಜ್ಯಕ್ಕೆ ಒಳ್ಳೆಯದಾಗಲಿ ಎಂದು ಬಯಸುತ್ತೇನೆ. ಸ್ವಾರ್ಥ ಬಿಟ್ಟು ರಾಜ್ಯದ ವಿಚಾರದಲ್ಲಿ ಚಿಂತನೆ ಆಗಲಿದೆ. ರಾಜ್ಯಕ್ಕೆ ಗೌರವ ಸಿಗಬೇಕು. ಸಂವಿಧಾನಕ್ಕೆ ಗೌರವ ಸಿಗಬೇಕು. ಹಾಗೆ ರಾಜಕಾರಣಿಗಳಿಗೂ ಗೌರವ ಸಿಗಬೇಕು. ಆದರೆ, ಇತ್ತೀಚಿಗೆ ರಾಜಕಾರಣಿಗಳಿಗೆ ಗೌರವ ಸಿಗುತ್ತಿಲ್ಲ. ಅದು ಸಿಗಲಿ ಎಂದು ಬಯಸುತ್ತೇನೆ ಎಂದರು.
ಇನ್ನು, ತಾವು ಕಷ್ಟದಲ್ಲಿ ಇದ್ದಾಗ ತನ್ನ ಪರವಾಗಿ ನಿಂತ ಎಲ್ಲರಿಗೂ ಅಭಿನಂದನೆ ಸಲ್ಲಿಸಿದರು.