ಮೈಸೂರು: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಹಾಗೂ ಸಾರ್ವಜನಿಕ ಉದ್ಯಮಗಳ ಖಾಸಗೀಕರಣ ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ಮೈಸೂರಿನಲ್ಲಿ ಕೇಂದ್ರ ಸರ್ಕಾರದ ಅಣಕು ಶವಯಾತ್ರೆಯ ಪ್ರತಿಭಟನೆ ನಡೆಸಿದರು.
ನಗರದ ಪಾಠಶಾಲೆ ವೃತ್ತದಿಂದ ಚಾಮುಂಡಿ ಬೆಟ್ಟದ ತಪ್ಪಲಿನ ಸ್ಮಶಾನದವರೆಗೆ ಮಾಜಿ ಶಾಸಕ ಎಂ.ಕೆ. ಸೋಮಶೇಖರ್ ನೇತೃತ್ವದಲ್ಲಿ ಶವಯಾತ್ರೆ ಮಾಡುವ ಮೂಲಕ ಪ್ರತಿಭಟನೆ ನಡೆಸಲಾಯಿತು.
ಎಲ್ಐಸಿ, ಬೆಮಲ್, ಭಾರತೀಯ ರೈಲ್ವೆ, ಎಚ್ಎಎಲ್, ಬ್ಯಾಂಕುಗಳು, ಬಿಎಸ್ಎನ್ಎಲ್ ಸೇರಿದಂತೆ ಅನೇಕ ಕಂಪನಿಗಳು ಮತ್ತು ಕಾರ್ಖಾನೆಗಳ ಪ್ರತಿಕೃತಿಗಳಿಗೆ ಚಟ್ಟ ಕಟ್ಟಿ ಹೊತ್ತುಕೊಂಡು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಕಾರ್ಯಕರ್ತರು ಕಿಡಿಕಾರಿದರು.