ಮೈಸೂರು: ಕಲುಷಿತ ಕುಡಿಯುವ ನೀರಿನ ತೊಂದರೆಯನ್ನು ನಿವಾರಿಸುವಲ್ಲಿ ವಿಫಲವಾಗಿರುವ ಸರ್ಕಾರದ ವಿರುದ್ಧ ಕೋಪಗೊಂಡ ಗ್ರಾಮಸ್ಥರು ಮತದಾನವನ್ನು ಬಹಿಷ್ಕರಿಸಲು ನಿರ್ಧರಿಸಿರುವ ಘಟನೆ ನಂಜನಗೂಡು ತಾಲೂಕಿನ ಅಳಗಂಚಿಪುರ ಗ್ರಾಮದಲ್ಲಿ ನಡೆದಿದೆ.
ಜಿಲ್ಲೆಯ ನಂಜನಗೂಡು ತಾಲೂಕಿನ ಅಳಗಂಚಿಪುರ ಗ್ರಾಮದ ಬಳಿ ಖಾಸಗಿ ಬಣ್ಣಾರಿಯಮ್ಮನ್ ಸಕ್ಕರೆ ಕಾರ್ಖಾನೆಯ ಡಿಸ್ಲರಿಯಿಂದ ಗ್ರಾಮದ ಕುಡಿಯುವ ನೀರು ಕಲುಷಿತವಾಗಿದೆ. ಇದನ್ನು ಸರಿಪಡಿಸುವಂತೆ ಜಿಲ್ಲಾಡಳಿತ, ತಾಲೂಕಾಡಳಿತ ಹಾಗೂ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು ಯಾವುದೇ ಪ್ರಯೋಜನವಾಗಿಲ್ಲ. ನಮಗೆ ಕುಡಿಯುವ ನೀರಿಗೂ ತೊಂದರೆಯಾಗಿದೆ. ಇದರಿಂದ ಲೋಕಸಭಾ ಚುನಾವಣೆಯ ಮತದಾನವನ್ನು ಬಹಿಷ್ಕಾರ ಮಾಡುವುದಾಗಿ ಗ್ರಾಮದ ದೇವಾಲಯದ ಬಳಿ ಸಭೆ ಸೇರಿ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಗ್ರಾಮಸ್ಥರು ತಿಳಿಸಿದರು.