ಮೈಸೂರು: ನಂಜನಗೂಡು ಪಟ್ಟಣದಲ್ಲಿ ಅತೀ ಹೆಚ್ಚು ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಈ ಹಿನ್ನೆಲೆಯಲ್ಲಿ ತೀವ್ರ ಕಟ್ಟೆಚ್ಚರ ವಹಿಸಿದ್ದು ಪೊಲೀಸರು ಜನರಲ್ಲಿ ಜಾಗೃತಿ ಮೂಡಿಸುವುದಕ್ಕಾಗಿ ಪಥ ಸಂಚಲನ ನಡೆಸಿದ್ರು.
ಯಾರೂ ಕೂಡಾ ಮನೆಯಿಂದ ಹೊರಬರಬೇಡಿ, ಸಾಮಾಜಿಕ ಅಂತರ ಕಾಯ್ದುಕೊಂಡು ಅಗತ್ಯ ವಸ್ತುಗಳನ್ನು ಖರೀದಿಸಿಕೊಳ್ಳಿ. ಹೊರಗಡೆ ಬರುವಾಗ ಕಡ್ಡಾಯವಾಗಿ ಮಾಸ್ಕ್ ಧರಿಸಿ ಹಾಗೂ ಪೋಲಿಸರಿಗೆ, ವೈದ್ಯಕೀಯ ಸಿಬ್ಬಂದಿಯೊಂದಿಗೆ ಸಹಕರಿಸಬೇಕು ಎಂದು ಧ್ವನಿವರ್ಧಕದ ಮೂಲಕ ಮನವಿ ಮಾಡಿದ್ರು.
ಲಾಕ್‌ಡೌನ್ ಉಲ್ಲಂಘಿಸಿ ವಾಹನಗಳಲ್ಲಿ ತಿರುಗಾಡುವ ಜನರ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸಿ, ವಾಹನವನ್ನು ಸೀಜ್ ಮಾಡಲಾಗುತ್ತದೆ ಎಂಬ ಎಚ್ಚರಿಕೆಯನ್ನು ಪೊಲೀಸರು ನೀಡಿದರು.
ಪಥ ಸಂಚಲನದಲ್ಲಿ ಡಿವೈಎಸ್ಪಿ ಪ್ರಭಾಕರ್ ರಾವ್ ಶಿಂಧೆ, ಪಿಎಸ್ಐ, ಪೊಲೀಸ್ ಸಿಬ್ಬಂದಿ ಸೇರಿದಂತೆ 10 ಸಂಚಾರಿ ವಾಹನಗಳು ಪಾಲ್ಗೊಂಡಿದ್ದವು.