ETV Bharat / state

ಕೊರೊನಾ ತಡೆಗಟ್ಟಲು ಜನಾಂದೋಲನ: ಮೈಸೂರು ಪೊಲೀಸ್ ಕಮಿಷನರ್ ಡಾ. ಚಂದ್ರಗುಪ್ತ

ನಗರದಲ್ಲಿ ಕೊರೊನಾ ಸಮಸ್ಯೆಯನ್ನು ಸಂಪೂರ್ಣ ತಡೆಗಟ್ಟಲು ಸಾರ್ವಜನಿಕರಲ್ಲಿ ಮತ್ತಷ್ಟು ಜಾಗೃತಿ ಕಾರ್ಯಕ್ರಮ ಅಗತ್ಯವಾಗಿದೆ. ಇದಕ್ಕಾಗಿ ಕೇಂದ್ರ ಸರ್ಕಾರ ಸೂಚಿಸಿರುವಂತೆ ಜನಾಂದೋಲನ ಕಾರ್ಯಕ್ರಮ ನಡೆಸಲಾಗುವುದು ಎಂದು ಮೈಸೂರು ಪೊಲೀಸ್ ಕಮಿಷನರ್ ಡಾ. ಚಂದ್ರಗುಪ್ತ ಹೇಳಿದ್ದಾರೆ.

Corona awareness program
ಪೊಲೀಸ್ ಕಮಿಷನರ್ ಡಾ. ಚಂದ್ರಗುಪ್ತ
author img

By

Published : Nov 3, 2020, 11:15 AM IST

ಮೈಸೂರು: ಕೊರೊನಾ ಪ್ರಕರಣಗಳನ್ನು ತಡೆಗಟ್ಟಲು ಕೇಂದ್ರ ಸರ್ಕಾರ ನೀಡಿರುವ ಸೂಚನೆಯಂತೆ ಸಾರ್ವಜನಿಕರಲ್ಲಿ ಕೊರೊನಾ ಜಾಗೃತಿ ಮೂಡಿಸುವ ಜನಾಂದೋಲನ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವುದಾಗಿ ನಗರ ಪೊಲೀಸ್ ಕಮಿಷನರ್ ಡಾ. ಚಂದ್ರಗುಪ್ತ ತಿಳಿಸಿದ್ದಾರೆ.

ಪೊಲೀಸ್ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಡಾ. ಚಂದ್ರಗುಪ್ತ, ಆರಂಭದ ದಿನಗಳಿಗೆ ಹೋಲಿಸಿದರೆ ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ಕಡಿಮೆಯಾಗಿವೆ. ಈ ಸಮಸ್ಯೆಯನ್ನು ಸಂಪೂರ್ಣವಾಗಿ ತಡೆಗಟ್ಟಲು ಕೇಂದ್ರ ಸರ್ಕಾರದ ಸೂಚನೆಯಂತೆ ಜನಾಂದೋಲನ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು. ಹಬ್ಬ ಹರಿದಿನಗಳಲ್ಲಿ ಹೆಚ್ಚಿನ ಜನಸಂದಣಿ ಉಂಟಾಗುವ ಸ್ಥಳಗಳನ್ನು ಮೊದಲೇ ಗುರುತಿಸಿ ಆ ಸ್ಥಳಗಳಿಗೆ ಆಯಾ ವ್ಯಾಪ್ತಿಯ ಇನ್ಸ್​​​​​​​​​​​​​​​​ಪೆಕ್ಟರ್ ಎಸ್​​ಒಪಿ ಅಳವಡಿಸಬೇಕು. ಪ್ರತಿದಿನ ಜನಸಂದಣಿ ಇರುವ ಭಾಗದಲ್ಲಿ 2 ಗಂಟೆಗಳ ಕಾಲ ಮಾಸ್ಕ್ , ಸ್ಯಾನಿಟೈಸರ್ ಹಾಗೂ ಸಾಮಾಜಿಕ ಅಂತರದ ಬಗ್ಗೆ ಅರಿವು ಮೂಡಿಸಬೇಕು ಎಂದು ಸೂಚಿಸಿದರು.

ಇಷ್ಟೇ ಅಲ್ಲ, ಸ್ಥಳೀಯ ಸಂಸ್ಥೆ , ಎನ್​ಜಿಒಗಳ ಜೊತೆ ಸೇರಿ ಕೋವಿಡ್ ವಿರುದ್ಧ ಕಾರ್ಯಾಗಾರ ಏರ್ಪಡಿಸುವುದು. ಪ್ರತಿದಿನ ಪೊಲೀಸ್​​​​​​​ ಠಾಣಾ ವ್ಯಾಪ್ತಿಯ ಸುಮಾರು 1000 ಜನರಿಗೆ ಜಾಗೃತಿ ಸಂದೇಶ ನೀಡುವಂತೆ ಕ್ರಮ‌ ಕೈಗೊಳ್ಳುವುದು. ಸ್ಥಳೀಯ ಕಲಾವಿದರನ್ನು ಬಳಸಿಕೊಂಡು ಕೊರೊನಾ ಜಾಗೃತಿ ಅಭಿಯಾನ ಕೈಗೊಳ್ಳುವುದು ಹಾಗೂ ಪೊಲೀಸ್​​​​​​​​​​​​​​​​​​​​​​​​​​​ ಠಾಣೆಯ ಬೀಟ್ ಕಮಿಟಿ ಸದಸ್ಯರ ಮೂಲಕ‌ ಬೀಟ್ ಮಟ್ಟದಲ್ಲಿ ಜಾಗೃತಿ ಮೂಡಿಸಲಾಗುವುದು. ಈ ನಿಟ್ಟಿನಲ್ಲಿ ಸಾರ್ವಜನಿಕರು ಪೊಲೀಸ್​​​​​​​​​​​​​ ಇಲಾಖೆಯೊಂದಿಗೆ ಸಹಕರಿಸಬೇಕೆಂದು ನಗರ ಪೊಲೀಸ್ ಕಮಿಷನರ್ ಡಾ. ಚಂದ್ರಗುಪ್ತ ಮನವಿ ಮಾಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.