ಮೈಸೂರು: ಜಿಲ್ಲೆಯಲ್ಲಿ 2ನೇ ಹಂತದಲ್ಲಿ ಕೊರೊನಾ ಸೋಂಕಿತ ಪ್ರಕರಣಗಳು ಹೆಚ್ಚಾಗುತ್ತಿದೆ. ಇಂದು ಮತ್ತೆ ಹೊಸದಾಗಿ 35 ಮಂದಿಗೆ ಸೋಂಕು ಧೃಡಪಟ್ಟಿದ್ದು ,ಆಸ್ಪತ್ರೆಯಿಂದ 20 ಜನ ಡಿಸ್ಚಾರ್ಜ್ ಆಗಿದ್ದಾರೆ.
ಇದರಿಂದ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 372 ಕ್ಕೆ ಏರಿಕೆಯಾಗಿದೆ. ಅದರಲ್ಲಿ ಒಟ್ಟು 217 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು , ಇಂದು ಸಹ 20 ಮಂದಿ ಗುಣಮುಖರಾಗಿದ್ದಾರೆ.
ಜಿಲ್ಲೆಯಲ್ಲಿ 150 ಸಕ್ರೀಯ ಪ್ರಕರಣಗಳಿದ್ದು, ಚಿಕಿತ್ಸೆ ಮುಂದುವರೆದಿದೆ. ಇಲ್ಲಿಯವರೆಗೆ ಜಿಲ್ಲೆಯಲ್ಲಿ 4 ಮಂದಿ ಕೊರೊನಾಗೆ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಮಾಹಿತಿ ನೀಡಿದ್ದಾರೆ.