ಮೈಸೂರು: ಕೊರೊನಾ ಸೋಂಕಿತರ ಸಂಖ್ಯೆ ಹಾಗೂ ಸಕ್ರಿಯ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಕುಸಿಯುತ್ತಿರುವುದರಿಂದ ಸಾಂಸ್ಕೃತಿಕ ನಗರಿ ಜನ ನಿಟ್ಟುಸಿರು ಬಿಡುವಂತೆ ಮಾಡಿದೆ.
ಮೈಸೂರಿನಲ್ಲಿಂದು 168 ಮಂದಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 48,224ಕ್ಕೇರಿದೆ. ಗುಣಮುಖರಾದ 228 ಮಂದಿ ವಿವಿಧ ಆಸ್ಪತ್ರೆಗಳಿಂದ ಡಿಸ್ಚಾಜ್೯ ಆಗಿದ್ದು, ಈವರೆಗೆ 45,886 ಮಂದಿ ಕೊರೊನಾ ಮುಕ್ತರಾಗಿದ್ದಾರೆ.
ಜಿಲ್ಲೆಯಲ್ಲಿ ಇನ್ನೂ 1,374 ಸಕ್ರಿಯ ಪ್ರಕರಣಗಳಿವೆ. ಇಂದು 3 ಮಂದಿ ಕೊರೊನಾಗೆ ಬಲಿಯಾಗಿದ್ದು, ಇದುವರೆಗೆ 964ಮಂದಿ ಮೃತಪಟ್ಟಿದ್ದಾರೆ.