ಮೈಸೂರು: ವಿಧಾನ ಪರಿಷತ್ ಸದಸ್ಯ ಹಾಗೂ ನಿರ್ಮಾಪಕ ಸಂದೇಶ್ ನಾಗರಾಜ್ಗೆ ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆ ಅವರ ಕುಟುಂಬದವರು ಸ್ವಯಂ ಕ್ವಾರಂಟೈನ್ ಆಗಿದ್ದಾರೆ.
ವಿಧಾನ ಪರಿಷತ್ ಸದಸ್ಯ ಹಾಗೂ ಚಲನಚಿತ್ರ ನಿರ್ಮಾಪಕರಾಗಿರುವ ಸಂದೇಶ್ ನಾಗರಾಜ್ 3 ದಿನಗಳ ಹಿಂದೆ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಅವರ ಗಂಟಲು ದ್ರವದ ಪರೀಕ್ಷೆ ನಡೆಸಿದ ನಂತರ ಕೊರೊನಾ ಇರುವುದು ದೃಢಪಟ್ಟಿದ್ದು, ಪಾಸಿಟಿವ್ ವರದಿ ಬಂದ ಹಿನ್ನೆಲೆ ಇವರ ಮನೆಯವರೆಲ್ಲರೂ ಸ್ವಯಂ ಕ್ವಾರಂಟೈನ್ನಲ್ಲಿ ಇದ್ದಾರೆ ಎನ್ನಲಾಗಿದೆ.
ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆ ಸಂದೇಶ್ ನಾಗರಾಜ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.