ಮೈಸೂರು: ರಾಜ್ಯದಲ್ಲಿ ಕೋವಿಡ್ ವೈರಸ್ ಅಟ್ಟಹಾಸ ಮುಂದುವರೆದಿದೆ. ಇಲ್ಲಿನ ಕೋರ್ಟ್ ಸಿಬ್ಬಂದಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಇಂದು ಕೋರ್ಟ್ ಕಲಾಪ ರದ್ದುಪಡಿಸಲಾಗಿದೆ.
ಮೈಸೂರಿನ ಹಳೆ ನ್ಯಾಯಾಲಯದಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಇಂದು ನ್ಯಾಯಾಲಯದಲ್ಲಿ ನಡೆಯಲಿರುವ ಎಲ್ಲಾ ಕಲಾಪಗಳನ್ನು ರದ್ದುಗೊಳಿಸಲಾಗಿದೆ.
ಜೊತೆಗೆ ಕೋರ್ಟ್ ಗೆ ಸ್ಯಾನಿಟೈಸರ್ ಸಿಂಪಡಿಸುವ ಉದ್ದೇಶದಿಂದ ಕೋರ್ಟ್ ಕಲಾಪಗಳನ್ನು ಸಂಪೂರ್ಣ ಬಂದ್ ಮಾಡಲಾಗಿದೆ ಹಾಗೂ ಹೊಸ ನ್ಯಾಯಾಲಯದಲ್ಲಿ ಎಂದಿನಂತೆ ಕಲಾಪಗಳು ನಡೆಯುತ್ತವೆ ಎಂದು ವಕೀಲರ ಸಂಘದ ಅಧ್ಯಕ್ಷ ಆನಂದ್ ಕುಮಾರ್ ತಿಳಿಸಿದ್ದಾರೆ.