ಮೈಸೂರು: ಜಿಲ್ಲೆಯಲ್ಲಿ ಶುಕ್ರವಾರ 702 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 32,275ಕ್ಕೆ ಏರಿಕೆಯಾಗಿದೆ.
10 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟಾರೆ 26,601 ಮಂದಿ ಸೋಂಕಿತರು ಗುಣಮುಖರಾಗಿದ್ದು, ಪ್ರಸ್ತುತ 5,499 ಸಕ್ರಿಯ ಪ್ರಕರಣಗಳಿವೆ. ಈವರೆಗೆ 715 ಮಂದಿ ಸಾವನ್ನಪ್ಪಿದ್ದಾರೆ.
ವೈದ್ಯಕೀಯ ಸಿಬ್ಬಂದಿ ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಮುಷ್ಕರ ನಡೆಸುತ್ತಿರುವುದರಿಂದ ಕೊರೊನಾ ಸೋಂಕಿತರ ಪತ್ತೆ ಹಾಗೂ ಗುಣಮುಖರು ಡಿಸ್ಚಾಜ್೯ ಮಾಡಲು ವಿಳಂಬವಾಗುತ್ತಿದೆ.