ಮೈಸೂರು: ಕೋವಿಡ್ನಿಂದ ಪ್ರಧಾನ ಮಂತ್ರಿ ಆವಾಸ್ ಯೋಜನೆ ಸೇರಿದಂತೆ ಇತರ ವಸತಿ ಯೋಜನೆಗಳು ಸ್ಥಗಿತಗೊಂಡಿದ್ದು, ಹೊಸ ಡಿಪಿಆರ್ಗಾಗಿ ಜನರು ಕಾಯುತ್ತಿದ್ದಾರೆ.
ಕೋವಿಡ್ನಿಂದ ಗ್ರಾಮಾಂತರ ಹಾಗೂ ನಗರ ಪ್ರದೇಶಗಳಲ್ಲಿ ಬಡವರಿಗಾಗಿ ಇರುವ ವಸತಿ ಯೋಜನೆಗಳು ಸ್ಥಗಿತಗೊಂಡಿದ್ದು, ಇದರಿಂದ ಬಡಪಾಯಿಗಳು ತೊಂದರೆ ಎದುರಿಸುತ್ತಿದ್ದಾರೆ. ಕೋವಿಡ್ನಿಂದ ಈ ಯೋಜನೆಗಳು ಹೊಸ ಅನುಮತಿಗಾಗಿ ಕಾಯುತ್ತಿವೆ. ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಗೆ ಬರುವ ಕೃಷ್ಣರಾಜ, ಚಾಮರಾಜ, ನರಸಿಂಹರಾಜ ಹಾಗೂ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ನಿವೇಶನಗಳು ಇದರ ಜೊತೆಗೆ ಮೈಸೂರು ಜಿಲ್ಲೆಯ ನಂಜನಗೂಡು, ತಿ.ನರಸೀಪುರ, ವರುಣ, ಕೆ.ಆರ್. ನಗರ, ಹುಣಸೂರು ಹಾಗೂ ಪಿರಿಯಾಪಟ್ಟಣ, ಹೆಚ್.ಡಿ. ಕೋಟೆಯ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ವಸತಿ ಯೋಜನೆಗಳು ಮುಖ್ಯವಾಗಿ ಪ್ರಧಾನ ಮಂತ್ರಿ ಆವಾಸ್ ಯೋಜನೆ, ಅಟಲ್ ಬಿಹಾರಿ ವಾಜಪೇಯಿ ಯೋಜನೆ, ಆಶ್ರಯ ಯೋಜನೆಗಳು ಕೋವಿಡ್ನಿಂದ ಸ್ಥಗಿತವಾಗಿವೆ.
ಈ ಯೋಜನೆಯಡಿ ಬಡವರಿಗೆ ಮನೆ ಕಟ್ಟಿಕೊಡಲು ಎಸ್ಸಿ/ಎಸ್ಟಿಗೆ 3.50 ಲಕ್ಷ, ಸಾಮಾನ್ಯ ವರ್ಗಕ್ಕೆ 1.50 ಲಕ್ಷ ಹಣವನ್ನು ಸರ್ಕಾರ ನೀಡುತ್ತಿತ್ತು. ಈಗ ಈ ಯೋಜನೆಗೆ ಹೊಸ ಡಿಪಿಆರ್ ಬಂದರೆ ಹೆಚ್ಚಿನ ಹಣ ನೀಡಬಹುದಾಗಿದ್ದು, ಸದ್ಯದ ಪರಿಸ್ಥಿತಿಯಲ್ಲಿ ಕೋವಿಡ್ನಿಂದ ಪ್ರಧಾನ ಮಂತ್ರಿ ಆವಾಸ್ ಯೋಜನೆ ಸೇರಿದಂತೆ ಇತರ ಎಲ್ಲಾ ವಸತಿ ಯೋಜನೆಗಳು ಸ್ಥಗಿತಗೊಂಡಿವೆ ಎಂದು ಮೈಸೂರು ಮಹಾನಗರ ಪಾಲಿಕೆಯ ಹೆಚ್ಚುವರಿ ಆಯುಕ್ತ ಎನ್.ಎಮ್. ಶಶಿಕುಮಾರ್ ತಿಳಿಸಿದ್ದಾರೆ.