ಮೈಸೂರು: ಜಿಲ್ಲೆಯಲ್ಲಿಂದು 826 ಜನರಿಗೆ ಕೊರೊನಾ ವೈರಸ್ ದೃಢವಾಗಿದ್ದು, 472 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಆದರೆ, 10 ಜನ ಸಾವಿಗೀಡಾಗಿದ್ದಾರೆ ಎಂದು ಜಿಲ್ಲಾಡಳಿತ ತಿಳಿಸಿದೆ.
ಕೋವಿಡ್ ಪ್ರಕರಣಗಳ ವಿವರ: ಇಂದು ಜಿಲ್ಲೆಯಲ್ಲಿ 826 ಸೋಂಕಿತ ಪ್ರಕರಣಗಳು ಸೇರಿದಂತೆ, ಒಟ್ಟು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 41,058ಕ್ಕೆ ಏರಿಕೆಯಾಗಿದೆ.
ಗುಣಮುಖ: ಜಿಲ್ಲೆಯಲ್ಲಿಂದು ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 472 ಆಗಿದ್ದು, ಒಟ್ಟು 32,729 ಮಂದಿ ಗುಣಮುಖರಾದಂತಾಗಿದೆ. ಇನ್ನು ಒಟ್ಟು 7,467 ಜನರು ವಿವಿಧ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮೃತರ ಮಾಹಿತಿ: ಇಂದು ಒಂದೇ ದಿನ ಜಿಲ್ಲೆಯಲ್ಲಿ ವೈರಸ್ನಿಂದ 10 ಜನ ಮೃತಪಟ್ಟಿದ್ದು, ಆ ಮೂಲಕ ಸಾವನ್ನಪ್ಪಿದವರ ಸಂಖ್ಯೆ 862ಕ್ಕೆ ತಲುಪಿದೆ.