ಮೈಸೂರು: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ. ರಿಷ್ಯಂತ್ ಬಳಿಕ ನಗರ ಪೊಲೀಸ್ ಆಯುಕ್ತರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತಗೆ ಕೊರೊನಾ ಸೋಂಕು ತಗಲಿದ್ದು, ಎಸ್.ಪಿ ರಿಷ್ಯಂತ್ ಅವರೊಂದಿಗೆ ಪ್ರಾಥಮಿಕ ಸಂಪರ್ಕ ಹೊಂದಿದ್ದ ಕಮೀಷನರ್ ಹೋಂ ಕ್ವಾರಂಟೈನ್ ಆಗಿದ್ದಾರೆ.
ಎಸ್.ಪಿ. ನಂತರ ನಗರ ಪೊಲೀಸ್ ಆಯುಕ್ತರಿಗೆ ಕೊರೊನಾ ಆವರಿಸಿರುವುದು ಅಧಿಕಾರಿ ವರ್ಗಕ್ಕೆ ಆತಂಕವನ್ನುಂಟು ಮಾಡಿದೆ.