ಮೈಸೂರು: ದಿನದಿಂದ ದಿನಕ್ಕೆ ಕೊರೊನಾ ಸೋಂಕಿತ ಪ್ರಕರಣಗಳು ಜಿಲ್ಲೆಯಲ್ಲಿ ಹೆಚ್ಚಾಗುತ್ತಿದ್ದು, ಇಂದು 230 ಹೊಸ ಸೋಂಕಿತ ಪ್ರಕರಣಗಳು ಪತ್ತೆಯಾಗಿದ್ದು, 5 ಜನ ಸಾವನ್ನಪ್ಪಿದಾರೆ.
ಆಯುರ್ವೇದಿಕ್ ವೈದ್ಯೆ, ಜೆ.ಕೆ. ಟಯರ್ಸ್ ನೌಕರ ಸೇರಿದಂತೆ 5 ಜನ ಮೃತಪಟ್ಟಿದ್ದಾರೆ. ಇಂದು 17 ಜನ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಮಾರ್ಚ್ 26 ರಿಂದ ಜುಲೈ 26 ರ ವರೆಗೆ 2,867 ಜನರಿಗೆ ಸೋಂಕು ಧೃಡಪಟ್ಟಿದೆ. ಅದರಲ್ಲಿ 823 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
1,932 ಸಕ್ರಿಯ ಪ್ರಕರಣಗಳಿದ್ದು, ಇಲ್ಲಿಯವರೆಗೆ 112 ಜನ ಸಾವನ್ನಪ್ಪಿದ್ದಾರೆ ಎಂದು ಜಿಲ್ಲಾಧಿಕಾರಿ ಅಭಿರಾಮ್ ಜಿ. ಶಂಕರ್ ತಿಳಿಸಿದ್ದಾರೆ.