ETV Bharat / state

ಕಳೆದ ವರ್ಷಕ್ಕಿಂತ ವೇಗವಾಗಿ ಕೊರೊನಾ ಹರಡುತ್ತಿದೆ: ಸಚಿವ ಎಸ್.ಟಿ.ಸೋಮಶೇಖರ್

ಕೋವಿಡ್‌ ಸಂಬಂಧ ಸರ್ಕಾರ ತೆಗೆದುಕೊಂಡ ಕ್ರಮಗಳು ಹಾಗು ಸಾರ್ವಜನಿಕರು ವಹಿಸಬೇಕಿರುವ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಸಚಿವ ಎಸ್‌.ಟಿ ಸೋಮಶೇಖರ್‌ ಮೈಸೂರಿನಲ್ಲಿ ಮಾತನಾಡಿದರು.

Corona is spreading faster than last year, Corona is spreading faster than last year in Mysore, Minister Somashekar, Minister ST Somashekar news, ಕಳೆದ ವರ್ಷಕ್ಕಿಂತ ವೇಗವಾಗಿ ಕೊರೊನಾ ಹರಡುತ್ತಿದೆ, ಮೈಸೂರಿನಲ್ಲಿ ಕಳೆದ ವರ್ಷಕ್ಕಿಂತ ವೇಗವಾಗಿ ಕೊರೊನಾ ಹರಡುತ್ತಿದೆ, ಸಚಿವ ಎಸ್​ಟಿ ಸೋಮಶೇಖರ್, ಸಚಿವ ಎಸ್​ಟಿ ಸೋಮಶೇಖರ್ ಸುದ್ದಿ,
ಕಳೆದ ವರ್ಷಕ್ಕಿಂತ ವೇಗವಾಗಿ ಕೊರೊನಾ ಹರಡುತ್ತಿದೆ ಎಂದ ಸಚಿವ
author img

By

Published : Apr 21, 2021, 8:40 AM IST

ಮೈಸೂರು: ಕಳೆದ ವರ್ಷಕ್ಕಿಂತ ಕೋವಿಡ್ ಪ್ರಕರಣಗಳು ವೇಗವಾಗಿ ಹರಡುತ್ತಿವೆ. ಆದರೆ ಜನರು ಇದನ್ನು ಗಂಭೀರವಾಗಿ ತೆಗೆದುಕೊಳ್ಳುತ್ತಿಲ್ಲ. ಸಭೆ, ಸಮಾರಂಭಗಳಲ್ಲಿ ಸೀಮಿತ ಸಂಖ್ಯೆಯ ಜನರು ಭಾಗವಹಿಸುವಂತೆ ಕಟ್ಟುನಿಟ್ಟಿನ ಕ್ರಮವಹಿಸಬೇಕು ಎಂದು ಸಚಿವ ಎಸ್‌.ಟಿ ಸೋಮಶೇಖರ್ ಹೇಳಿದರು.

ಸರ್ಕಾರಿ ಅತಿಥಿ ಗೃಹದಲ್ಲಿ ಉನ್ನತಾಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಮುಂದಿನ ಹತ್ತು ದಿನಗಳಲ್ಲಿ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಳವಾಗುವ ಸಾಧ್ಯತೆ ಇದೆ. ಹೀಗಾಗಿ ಬೆಡ್​ಗಳನ್ನು ಪಡೆದುಕೊಳ್ಳಲು ತೀರ್ಮಾನಿಸಲಾಗಿದೆ. ಆಕ್ಸಿಜನ್, ವೆಂಟಿಲೇಟರ್ ಮತ್ತು ಲಸಿಕೆಗಳ ಬಗ್ಗೆ ಸಂಪೂರ್ಣವಾಗಿ ಮಾಹಿತಿಯನ್ನು ಪಡೆದುಕೊಳ್ಳಲಾಗಿದೆ ಎಂದರು.

ಸಚಿವ ಎಸ್‌.ಟಿ.ಸೋಮಶೇಖರ್‌

ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಯಲ್ಲಿ ಪ್ರತಿದಿನ ಸಾಮಾನ್ಯ ಹಾಸಿಗೆ, ಆಕ್ಸಿಜನ್, ವೆಂಟಿಲೇಟರ್ ಲಭ್ಯತೆ ಮಾಹಿತಿಗಳನ್ನು ಪ್ರಕಟಿಸಿದರೆ ಜನರ ಆತಂಕ ಕಡಿಮೆಯಾಗುತ್ತದೆ. ಕೋವಿಡ್ ನಿರ್ವಹಣೆಗೆ ಸರ್ಕಾರದಿಂದ ಆಗಬೇಕಾದ ಕೆಲಸವನ್ನು ಮಾಡಿಸಿಕೊಡಲಾಗುವುದು. ಲಸಿಕೆ ಮತ್ತು ಇತರೆ ಸೌಲಭ್ಯಗಳನ್ನು ಒದಗಿಸಲಾಗುವುದು. ಕೋವಿಡ್ ನಿಯಂತ್ರಣಕ್ಕೆ ಜಿಲ್ಲಾಡಳಿತ ಸೂಕ್ತವಾದ ಎಲ್ಲಾ ಕ್ರಮಗಳನ್ನು ಕೈಗೊಂಡಿದ್ದು, ಈ ಬಗ್ಗೆ ಸಾರ್ವಜನಿಕರಿಗೆ ತಿಳಿಸಬೇಕು ಎಂದರು.

Corona is spreading faster than last year, Corona is spreading faster than last year in Mysore, Minister Somashekar, Minister ST Somashekar news, ಕಳೆದ ವರ್ಷಕ್ಕಿಂತ ವೇಗವಾಗಿ ಕೊರೊನಾ ಹರಡುತ್ತಿದೆ, ಮೈಸೂರಿನಲ್ಲಿ ಕಳೆದ ವರ್ಷಕ್ಕಿಂತ ವೇಗವಾಗಿ ಕೊರೊನಾ ಹರಡುತ್ತಿದೆ, ಸಚಿವ ಎಸ್​ಟಿ ಸೋಮಶೇಖರ್, ಸಚಿವ ಎಸ್​ಟಿ ಸೋಮಶೇಖರ್ ಸುದ್ದಿ,
ಸಚಿವರ ನೇತೃತ್ವದಲ್ಲಿ ನಡೆದ ಸಭೆ

ಮೈಸೂರು ಜಿಲ್ಲೆ ಹಾಗೂ ತಾಲ್ಲೂಕುಗಳಲ್ಲಿ ನಾಟಕ ಪ್ರದರ್ಶನಗಳು ಹೆಚ್ಚಾಗಿ ಮೂಡಿಬರುತ್ತಿದ್ದು, ಅನುಮತಿ ಪಡೆಯದೆ ಯಾರಾದರೂ ನಾಟಕಗಳನ್ನು ಮಾಡಿದರೆ ಅಂತಹ ವಾಹನಗಳನ್ನು ಜಪ್ತಿ ಮಾಡಲಾಗುವುದು ಎಂಬ ತೀರ್ಮಾನವನ್ನು ಕೈಗೊಳ್ಳಲಾಗಿದೆ ಎಂದು ಸಚಿವರು ತಿಳಿಸಿದರು.

ಸಭೆಯಲ್ಲಿ ಶಾಸಕ ಜಿ‌.ಟಿ.ದೇವೇಗೌಡ, ಸಂಸದ ಪ್ರತಾಪ್ ಸಿಂಹ, ಮೇಯರ್ ರುಕ್ಮಿಣಿ ಮಾದೇಗೌಡ, ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ, ಪೊಲೀಸ್ ಆಯುಕ್ತ ಡಾ. ಚಂದ್ರಗುಪ್ತ, ಜಿಲ್ಲಾ ಪೊಲೀಸ್ ಅಧೀಕ್ಷಕ ಸಿ.ಬಿ.ರಿಷ್ಯಂತ್, ವೈದ್ಯಕೀಯ ಕಾಲೇಜಿನ ಡೀನ್ ಡಾ. ನಂಜರಾಜ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಶಿವಪ್ರಸಾದ್, ಜಿಲ್ಲಾ ಆಯುಷ್ ಅಧಿಕಾರಿ ಡಾ. ಬಿ.ಎಸ್. ಸೀತಾಲಕ್ಷ್ಮಿ ಸೇರಿದಂತೆ ಮತ್ತಿತರರು ಹಾಜರಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.