ಮೈಸೂರು : ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ, ನಗರದ ದೇವರಾಜ ಮಾರುಕಟ್ಟೆಯ ವ್ಯಾಪಾರಿಗಳಿಗೆ ಮಹಾನಗರ ಪಾಲಿಕೆ ಕೊರೊನಾ ಪರೀಕ್ಷೆ ನಡೆಸುತ್ತಿದೆ.
ದೇವರಾಜ ಮಾರುಕಟ್ಟೆಯ ವರ್ತಕರು ಮತ್ತು ಸುತ್ತ ಮುತ್ತಲ ಬೀದಿ ಬದಿ ವ್ಯಾಪರಿಗಳಿಗೆ ಕೋವಿಡ್ ಟೆಸ್ಟ್ ಕಡ್ಡಾಯಗೊಳಿಸಿರುವ ಹಿನ್ನೆಲೆ, ಚಿಕ್ಕ ಗಡಿಯಾರದ ಬಳಿ ತೆರೆದಿರುವ ಪರೀಕ್ಷಾ ಕೇಂದ್ರದತ್ತ ಸ್ವಯಂ ಪ್ರೇರಿತರಾಗಿ ಬಂದು ಆ್ಯಂಟಿಜೆನ್ ಟೆಸ್ಟ್ ಕಿಟ್ಗಳ ಮೂಲಕ ಕೊರೊನಾ ಪರೀಕ್ಷೆಗೆ ಒಳಗಾಗುತ್ತಿದ್ದಾರೆ.
ಪ್ರತಿದಿನ 50 ಮಂದಿಗೆ ಕೋವಿಡ್ ಪರೀಕ್ಷೆ ಮಾಡಲಾಗ್ತಿದೆ. ನಗರ ಪಾಲಿಕೆಯ ನಿರ್ಧಾರಕ್ಕೆ ಪರ-ವಿರೋಧ ಅಭಿಪ್ರಾಯಗಳೂ ವ್ಯಕ್ತವಾಗಿದೆ.