ಮೈಸೂರು: ಕೊರೊನಾ ಎರಡನೇ ಅಲೆಯ ಆರ್ಭಟ ಹೆಚ್ಚಾಗುತ್ತಿರುವುದರಿಂದ ಹೆಚ್.ಡಿ.ಕೋಟೆ ತಾಲೂಕಿನ ಗಡಿ ಭಾಗದಿಂದ ಬರುವ ಕೇರಳ ಪ್ರವಾಸಿಗರಿಗೆ ಕೋವಿಡ್ -19 ಟೆಸ್ಟ್ ಕಡ್ಡಾಯ ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್ ಹೇಳಿದರು.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೈಸೂರು ಜಿಲ್ಲೆ ಸಂಪರ್ಕಿಸುವ ಎಲ್ಲಾ ಗಡಿಗಳ ಚೆಕ್ ಪೋಸ್ಟ್ಗಳಲ್ಲಿ ವಾಹನಗಳ ತಪಾಸಣೆ ಹಾಗೂ ವ್ಯಕ್ತಿಗಳ ಕೊರೊನಾ ವರದಿ ಕೇಳುತ್ತಿದ್ದೇವೆ. ಹೆಚ್.ಡಿ.ಕೋಟೆ ತಾಲೂಕಿನ ಬಾವಲಿ ಚೆಕ್ ಪೋಸ್ಟ್ನಲ್ಲಿ ಕೇರಳದಿಂದ ಬರುವ ಪ್ರವಾಸಿಗರಿಗೆ ಕಡ್ಡಾಯವಾಗಿ ಸ್ಥಳದಲ್ಲಿ ಆರ್ಟಿಪಿಸಿಆರ್ ಟೆಸ್ಟ್ ಮಾಡಲಾಗುತ್ತಿದೆ. ಈ ಸಂಬಂಧ ವಯನಾಡು ಎಸ್ಪಿ ಅರವಿಂದ ಅವರೊಂದಿಗೆ ಮಾತುಕತೆ ನಡೆಸಿದ್ದೇವೆ ಎಂದರು.
ಬೆಂಗಳೂರು, ಮಂಡ್ಯ, ಕೊಡಗು, ಹಾಸನ, ಚಾಮರಾಜನಗರ ಜಿಲ್ಲೆಗಳಿಂದ ಬರುವವರಿಗೆ ಯಾವುದೇ ನಿರ್ಬಂಧ ಹೇರಿಲ್ಲ. ಆಯಾ ಗಡಿ ಭಾಗದಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಇದನ್ನೂ ಓದಿ.. ಸಿಡಿ ಸೂತ್ರಧಾರ ನಾನಲ್ಲ.. ನನ್ನದೇನೂ ಪಾತ್ರವಿಲ್ಲ; ಆರೋಪಿ ಭವಿತ್