ಮೈಸೂರು: ಮಹಾನಗರ ಪಾಲಿಕೆ ಮೇಯರ್ ಚುನಾವಣೆ ಅನಿರೀಕ್ಷಿತವಾಗಿ ಎದುರಾಗಿದೆ. ಅಭಿಪ್ರಾಯ ಸಂಗ್ರಹಕ್ಕೆ ಸಭೆ ಕರೆದಿದ್ದೆವು. ಮೇಯರ್ ಆಯ್ಕೆ ಸಂಬಂಧ ಪಕ್ಷದ ತೀರ್ಮಾನಕ್ಕೆ ನಾನು ಬದ್ಧ ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ.
ಮಹಾನಗರ ಪಾಲಿಕೆ ಮೇಯರ್ ಚುನಾವಣೆ ಹಿನ್ನೆಲೆ ಕಾರ್ಪೋರೇಟರ್‌ಗಳ ಸಭೆಯು ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು. ಬಳಿಕ ಮಾತನಾಡಿದ ಶಾಸಕರು, ಪಕ್ಷದ ವರಿಷ್ಠರ ತೀರ್ಮಾನದಂತೆ ನಾವು ನಡೆದುಕೊಳ್ಳುತ್ತೇವೆ ಎಂದು ಎಲ್ಲರೂ ಹೇಳಿದ್ದಾರೆ. ಇದರ ಬಗ್ಗೆ ನನಗೆ ಧ್ವನಿ ಇಲ್ಲ ಎಂದರು.
ಮೈತ್ರಿ ಸಂಬಂಧ ಪಕ್ಷವು ತೀರ್ಮಾನ ತೆಗೆದುಕೊಳ್ಳಲಿದೆ. ಶಾಸಕ ಸಾ.ರಾ. ಮಹೇಶ್ ಏನು ಷರತ್ತು ಹಾಕಿದ್ದಾರೋ ನನಗೆ ಗೊತ್ತಿಲ್ಲ. ಪಕ್ಷದ ತೀರ್ಮಾನದಂತೆ ನಾನು ನಡೆದುಕೊಳ್ಳುತ್ತೇನೆ ಎಂದು ಹೇಳಿದರು.