ETV Bharat / state

ಕೋವಿಡ್ ನೆಗೆಟಿವ್ ಇದ್ದರೆ ಮಾತ್ರ ಜಿಲ್ಲೆಗೆ ಪ್ರವೇಶ: ಸಚಿವ ಎಸ್.ಟಿ.ಸೋಮಶೇಖರ್

author img

By

Published : Aug 7, 2021, 5:54 PM IST

Updated : Aug 7, 2021, 6:00 PM IST

ಕೇರಳ ಗಡಿಯಿಂದ ಜನರು ಮೈಸೂರು ಜಿಲ್ಲೆಗೆ ಪ್ರವೇಶಿಸುವವರು ಕಡ್ಡಾಯವಾಗಿ ಕೋವಿಡ್ ನೆಗೆಟಿವ್ ರಿಪೋರ್ಟ್ ಹೊಂದಿರಲೇಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ. ಸೋಮಶೇಖರ್ ತಿಳಿಸಿದ್ದಾರೆ.

bavali checkpost
ಜಿಲ್ಲಾ ಉಸ್ತುವಾರಿ ಸಚಿವರು ಚೆಕ್​​ಪೋಸ್ಟ್​​ಗೆ ಭೇಟಿ

ಮೈಸೂರು: ಕೇರಳ ಗಡಿಯಿಂದ ಜನರು ಮೈಸೂರು ಜಿಲ್ಲೆಗೆ ಬರಬೇಕೆಂದರೆ ಕೋವಿಡ್ ನೆಗೆಟಿವ್ ರಿಪೋರ್ಟ್ ಕಡ್ಡಾಯವಾಗಿ ತರಬೇಕು ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ. ಸೋಮಶೇಖರ್ ಹೇಳಿದರು.

ಇಂದು ಮೈಸೂರು ಜಿಲ್ಲೆಯ ಗಡಿಭಾಗ ಬಾವಲಿ ಚೆಕ್​​ಪೋಸ್ಟ್​​ಗೆ ಭೇಟಿ ನೀಡಿ ಮಾತನಾಡಿ, ನಿನ್ನೆ ಚಾಮರಾಜನಗರದಲ್ಲಿ ಕೋವಿಡ್ ಸಭೆ ನಡೆಸಿ, ಅಲ್ಲಿನ ಗಡಿ ಭಾಗಕ್ಕೂ ಭೇಟಿ ನೀಡಿ ಪರಿಶೀಲಿಸಿದ್ದೇನೆ ಎಂದರು.

ಕೋವಿಡ್ 2ನೇ ಅಲೆಯ ಸಂದರ್ಭದಲ್ಲಿ ಬಾವಲಿ ಚೆಕ್‌ಪೋಸ್ಟ್‌ಗೆ ಭೇಟಿ ನೀಡಿದಾಗ, ಇಲ್ಲಿನ ಸಮಸ್ಯೆಗಳನ್ನು ಮನಗಂಡು ಶೆಡ್ ನಿರ್ಮಿಸುವಂತೆ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚಿಸಿದ್ದ ಫಲವಾಗಿ ವೈದ್ಯರಿಗಾಗಿ ಶೆಡ್ ನಿರ್ಮಿಸಲಾಗಿದೆ ಎಂದು ಹೇಳಿದರು.

ಕೋವಿಡ್ 3ನೇ ಅಲೆ ಬರಬಹುದೆಂಬ ದೃಷ್ಟಿಯಿಂದ ಚೆಕ್​ಪೋಸ್ಟ್​ಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಸರ್ಕಾರದಿಂದ ಆದೇಶ ಬಂದ ಹಿನ್ನೆಲೆ ಜಿಲ್ಲೆ ಗಡಿಭಾಗದ ಚೆಕ್ ಪೋಸ್ಟ್​​ಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಮೈಸೂರು ಜಿಲ್ಲೆಯಲ್ಲಿ ಕೋವಿಡ್ ಟೆಸ್ಟ್ ಅನ್ನು ಕಡಿಮೆ ಮಾಡಿಲ್ಲ. ನಿತ್ಯ 10 ಸಾವಿರ ಕೋವಿಡ್ ಟೆಸ್ಟ್ ನಡೆಯುತ್ತಿದೆ ಎಂದರು.

ಜಿಲ್ಲೆಯಲ್ಲಿ ವ್ಯಾಕ್ಸಿನೇಷನ್​ಗೆ ಸಂಬಂಧಪಟ್ಟಂತೆ ಯಾವುದೇ ಕೊರತೆ ಇಲ್ಲ. ಜಿಲ್ಲೆಯ ಗಡಿಭಾಗದ ಹಳ್ಳಿಗಳಲ್ಲಿ ವ್ಯಾಕ್ಸಿನೇಷನ್ ಅನ್ನು ಶೇ.100 ರಷ್ಟು ನೀಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ವೀಕೆಂಡ್ ಕರ್ಫ್ಯೂಗೆ ಸಂಬಂಧಿಸಿದಂತೆ ಸಭೆ ನಡೆಸಿ ಸಾರ್ವಜನಿಕರಿಗೆ ಹಾಗೂ ವ್ಯಾಪಾರಿಗಳಿಗೆ ತೊಂದರೆಯಾಗದಂತೆ ಮುಂದಿನ ತೀರ್ಮಾನವನ್ನು ಕೈಗೊಂಡು ತಿಳಿಸಲಾಗುವುದು ಎಂದರು.

ಕಳೆದ ಬಾರಿ ಲಾಕ್​​ಡೌನ್​ನಿಂದ ಜನಸಾಮಾನ್ಯರಿಗೆ ಹಾಗೂ ಉದ್ಯಮಕ್ಕೆ ಭಾರಿ ಹೊಡೆತ ಬಿದ್ದಿದೆ. ಈಗ ಜಿಲ್ಲೆಯಲ್ಲಿ ಲಾಕ್​ಡೌನ್ ಮಾಡುವ ಪರಿಸ್ಥಿತಿ ಬಂದಿಲ್ಲ. ಪಾಸಿಟಿವ್ ರೇಟ್ ಕಡಿಮೆ ಇರುವುದರಿಂದ ಲಾಕ್​ಡೌನ್ ಮಾಡುವ ಚಿಂತನೆಯಿಲ್ಲ. ನೆರೆ ರಾಜ್ಯಗಳಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗಿವೆ. ಇದರಿಂದ ನಮ್ಮ ಜಿಲ್ಲೆಗೆ ಬರದಂತೆ ನಿಯಂತ್ರಿಸುವ ಸಲುವಾಗಿ ಮುಂಜಾಗ್ರತ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು.

Last Updated : Aug 7, 2021, 6:00 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.