ಮೈಸೂರು: ಕೋವಿಡ್ ಕೇರ್ ಸೆಂಟರ್ ಅವ್ಯವಸ್ಥೆ ಖಂಡಿಸಿ ಆರೋಗ್ಯ ಇಲಾಖೆ ಸಿಬ್ಬಂದಿ ವಿರುದ್ಧ ಸೋಂಕಿತರು ಆಕ್ರೋಶ ವ್ಯಕ್ತಪಡಿಸಿ, ತರಾಟೆಗೆ ತೆಗೆದುಕೊಂಡ ಘಟನೆ ಹೆಚ್.ಡಿ.ಕೋಟೆ ತಾಲೂಕಿನ ಕೋವಿಡ್ ಸೆಂಟರ್ನಲ್ಲಿ ನಡೆದಿದೆ.
ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನಲ್ಲಿರುವ ಕೋವಿಡ್ ಕೇರ್ ಸೆಂಟರ್ನಲ್ಲಿ ಕೊರೊನಾ ಸೋಂಕಿತರಿಗೆ ಸರಿಯಾದ ವ್ಯವಸ್ಥೆ ಇಲ್ಲ, ಶುಚಿತ್ವವಿಲ್ಲ ಹಾಗೂ ತ್ಯಾಜ್ಯಗಳನ್ನು ಎಲ್ಲೆಂದರಲ್ಲಿ ಬಿಸಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೋವಿಡ್ ಸೆಂಟರ್ನಿಂದ ಹೊರಬಂದು ಆರೋಗ್ಯ ಇಲಾಖೆ ಸಿಬ್ಬಂದಿಯೊಂದಿಗೆ ವಾಗ್ವಾದಕ್ಕೆ ಇಳಿದಿದ್ದು, ಇಲ್ಲಿ ಸರಿಯಾದ ಬಿಸಿನೀರಿನ ವ್ಯವಸ್ಥೆ ಇಲ್ಲ, ಸೋಂಕಿತರೆಲ್ಲರಿಗೂ ಒಂದೇ ಕಡೆ ಊಟ ತಿಂಡಿ ನೀಡುತ್ತಾರೆ. ಅದನ್ನು ನಾವೇ ಬಡಿಸಿಕೊಳ್ಳಬೇಕು ಜೊತೆಗೆ ಊಟದ ತ್ಯಾಜ್ಯಗಳನ್ನು ಎಲ್ಲೆಂದರಲ್ಲಿ ಬಿಸಾಡುತ್ತಾರೆ. ಇದನ್ನು ಸ್ವಚ್ಛ ಸಹ ಮಾಡುವುದಿಲ್ಲ ಎಂದು ಆರೋಗ್ಯ ಇಲಾಖೆ ಸಿಬ್ಬಂದಿಗೆ ಸೋಂಕಿತ ವ್ಯಕ್ತಿ ತರಾಟೆಗೆ ತೆಗೆದುಕೊಂಡಿದ್ದರು.
ವಿಷಯ ತಿಳಿದ ಪೊಲೀಸರು ಸ್ಥಳಕ್ಕಾಗಮಿಸಿ ಸೋಂಕಿತರಿಬ್ಬರನ್ನು ಮೈಸೂರು ಜಿಲ್ಲಾ ಕೋವಿಡ್ ಕೇರ್ ಸೆಂಟರ್ಗೆ ಸ್ಥಳಾಂತರಿಸಿದ್ದಾರೆ.