ಮೈಸೂರು: ಕೊರೊನಾ ಪಾಸಿಟಿವ್ ರಿಪೋರ್ಟ್ ಬಂದ ಹಿನ್ನೆಲೆಯಲ್ಲಿ ಆತಂಕಗೊಂಡ ವ್ಯಕ್ತಿವೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹುಣಸೂರು ತಾಲೂಕಿನ ಹಂದನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಕುಮಾರ್ (50) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಕಳೆದ ಎರಡು ದಿನಗಳ ಹಿಂದೆ ಕೋವಿಡ್ ಟೆಸ್ಟ್ ಮಾಡಿಸಿದ್ದರು. ಇಂದು ಪಾಸಿಟಿವ್ ಎಂದು ಮೆಸೇಜ್ ಬರುತ್ತಿದ್ದಂತೆ ಜಮೀನಿನಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಘಟನೆ ಕುರಿತು ಬಿಳಿಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:FB ರಿಕ್ವೆಸ್ಟ್ ಅಕ್ಸೆಪ್ಟ್ ಮಾಡೋ ಮುನ್ನ ಎಚ್ಚರ... ಯಾಕೆ ಅಂತಾ ಇಲ್ಲಿ ನೋಡಿ!