ETV Bharat / state

ರಾಜ್ಯದ ಪ್ರವಾಸಿ ತಾಣಗಳಲ್ಲಿ ಕೊರೊನಾ ಹರಡದಂತೆ ಕ್ರಮ : ಸಚಿವ ಸಿ ಪಿ ಯೋಗೇಶ್ವರ್ - C.P. Yogeshwar

ಇದರಿಂದ ಕೆರೆಯ ನೀರು ಮಲಿನಗೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಕೆರೆಗಳಿಗೆ ಕೆಟ್ಟ ನೀರು ಸೇರದಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸ್ಥಳೀಯ ಸಂಸ್ಥೆಗಳಿಗೆ ಸೂಚನೆ ನೀಡಲಾಗಿದೆ ಎಂದರು. ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಕೆರೆಗಳಲ್ಲಿ, ದೋಣಿ ವಿಹಾರ ಸೇರಿ ಇನ್ನಿತರ ಆಟೋಟಗಳಿಗೆ ಪ್ರೋತ್ಸಾಹ ನೀಡಲಾಗುವುದು..

C.P. Yogeshwar
ಸಿ.ಪಿ.ಯೋಗೇಶ್ವರ್
author img

By

Published : Mar 13, 2021, 7:47 PM IST

ಮೈಸೂರು : ರಾಜ್ಯದ ಪ್ರವಾಸಿ ತಾಣಗಳಲ್ಲಿ ಕೊರೊನಾ ಹರಡದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಪ್ರವಾಸೋದ್ಯಮ ಸಚಿವ ಸಿ ಪಿ ಯೋಗೇಶ್ವರ್ ತಿಳಿಸಿದರು.

ಮೈಸೂರಿನ ಲಿಂಗಾಂಬುದಿ ಕೆರೆಗೆ ಭೇಟಿ ನೀಡಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದಿನೇದಿನೆ ಕೊರೊನಾ ರೋಗಿಗಳ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ನೀಡುವ ನಿಯಮಗಳನ್ನು ಚಾಚು ತಪ್ಪದೇ ಪಾಲಿಸಲಾಗುವುದು ಎಂದರು.

ಪ್ರವಾಸಿ ತಾಣಗಳ ಅಭಿವೃದ್ಧಿ ಬಗ್ಗೆ ಸಚಿವ ಸಿ ಪಿ ಯೋಗೇಶ್ವರ್ ಪ್ರತಿಕ್ರಿಯೆ..

ಪ್ರವಾಸಿ ತಾಣಗಳಲ್ಲಿ ಸಾಮಾಜಿಕ ಅಂತರ ಹಾಗೂ ಕಡ್ಡಾಯ ಮಾಸ್ಕ್ ಮುಂದುವರಿಯಲಿದೆ. ಹೊರ ರಾಜ್ಯದಿಂದ ಬರುವ ಪ್ರವಾಸಿಗರ ಮೇಲೆ ನಿಗಾ ಇರಿಸಲು ಸೂಚನೆ ನೀಡಲಾಗಿದೆ. ಕೊರೊನಾ ರೋಗಿಗಳ ಸಂಖ್ಯೆ ಹೆಚ್ಚಾದಂತೆ ಪ್ರವಾಸಿಗರ ಸಂಖ್ಯೆಯೂ ಇಳಿಮುಖವಾಗಲಿದೆ.

ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ. ಈ ಹಿನ್ನೆಲೆಯಲ್ಲಿ ಪ್ರವಾಸಿ ತಾಣಗಳಲ್ಲಿ ಹೆಚ್ಚಿನ ಮುಂಜಾಗ್ರತೆ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು. ರಾಜ್ಯದ ಪ್ರವಾಸಿ ತಾಣಗಳ ಕೆರೆಗಳಲ್ಲಿ ಕಲುಷಿತ ನೀರು ಹರಿದು ಬರುತ್ತದೆ.

ಇದರಿಂದ ಕೆರೆಯ ನೀರು ಮಲಿನಗೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಕೆರೆಗಳಿಗೆ ಕೆಟ್ಟ ನೀರು ಸೇರದಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸ್ಥಳೀಯ ಸಂಸ್ಥೆಗಳಿಗೆ ಸೂಚನೆ ನೀಡಲಾಗಿದೆ ಎಂದರು. ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಕೆರೆಗಳಲ್ಲಿ, ದೋಣಿ ವಿಹಾರ ಸೇರಿ ಇನ್ನಿತರ ಆಟೋಟಗಳಿಗೆ ಪ್ರೋತ್ಸಾಹ ನೀಡಲಾಗುವುದು.

ಹೆಲಿಟೂರಿಸಂ ಯೋಜನೆ ಅನುಷ್ಠಾನಕ್ಕೆ ಸ್ಥಳೀಯವಾಗಿರುವ ವಿಮಾನ ನಿಲ್ದಾಣಗಳ ಅನುಮತಿ ಪಡೆದು ಆರಂಭಿಸಲಾಗುವುದು ಎಂದು ತಿಳಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.