ಮೈಸೂರು: ಪರೀಕ್ಷಾಂಗ ವಿಭಾಗದ ಸಿಬ್ಬಂದಿಗೆ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ 10 ದಿನಗಳ ಕಾಲ ಮೈಸೂರು ವಿವಿಯ ಕ್ರಾಫರ್ಡ್ ಹಾಲ್ ಬಂದ್ ಮಾಡಲಾಗಿದೆ.
ಮೈಸೂರು ವಿವಿ ಪರೀಕ್ಷಾಂಗ ವಿಭಾಗದಲ್ಲಿ ಕೆಲಸ ಮಾಡುತ್ತಿರುವ ಸಿಬ್ಬಂದಿಗೆ ಕೋವಿಡ್ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಕ್ರಾಫರ್ಡ್ ಹಾಲ್ನ ಎಲ್ಲಾ ಆಡಳಿತ ವಿಭಾಗದ ಕಚೇರಿಗಳಿಗೆ ಸ್ಯಾನಿಟೈಸ್ ಮಾಡಿ ಅಗತ್ಯ ಸಿಬ್ಬಂದಿ ಮಾತ್ರ ಕೆಲಸಕ್ಕೆ ಹಾಜರಾಗಬೇಕು. ಉಳಿದ ಸಿಬ್ಬಂದಿ ಮನೆಯಿಂದಲೇ ಕೆಲಸ ನಿರ್ವಹಿಸಿಸಬೇಕೆಂದು ತಿಳಿಸಲಾಗಿದೆ.
ಇಂದಿನಿಂದ ಜುಲೈ 15ರವರೆಗೆ ಕ್ರಾಫರ್ಡ್ ಹಾಲ್ ಬಂದ್ ಮಾಡಲಾಗಿದೆ. ಸೋಂಕಿತ ವ್ಯಕ್ತಿಯ ಸಂಪರ್ಕದಲ್ಲಿದ್ದ ವ್ಯಕ್ತಿಗಳು ಹೋಮ್ ಕ್ವಾರಂಟೈನ್ನಲ್ಲಿ ಇರಬೇಕೆಂದು ತಿಳಿಸಲಾಗಿದೆ ಎಂದು ಮೈಸೂರು ವಿವಿಯ ರಿಜಿಸ್ಟ್ರಾರ್ ಶಿವಪ್ಪ ಈಟಿವಿ ಭಾರತ್ಗೆ ದೂರವಾಣಿ ಮೂಲಕ ತಿಳಿಸಿದರು.