ETV Bharat / state

ಬಿಜೆಪಿಗರು ಮೊದಲು ತಮ್ಮನ್ನು ಜೋಡಿಸಿಕೊಳ್ಳುವ ಕೆಲಸ ಮಾಡಿಕೊಳ್ಳಲಿ: ಡಿಕೆಶಿ ತಿರುಗೇಟು - ಈಟಿವಿ ಭಾರತ್ ಕನ್ನಡ ಸುದ್ದಿ

ಭಾರತ್ ಜೋಡೋಗೆ ಕರ್ನಾಟಕದಲ್ಲಿ ಅಭೂತಪೂರ್ವ ಬೆಂಬಲ ದೊರೆತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಮೈಸೂರಿನಲ್ಲಿ ಹೇಳಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್
ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್
author img

By

Published : Oct 3, 2022, 3:57 PM IST

ಮೈಸೂರು: ಭಾರತ್ ಜೋಡೋ ಬಗ್ಗೆ ಬಿಜೆಪಿಗರು ಕಾಂಗ್ರೆಸ್ ಟೀಕಿಸುವ ಬದಲು ತಮ್ಮನ್ನು ಜೋಡಿಸಿಕೊಳ್ಳುವ ಕೆಲಸ ಮಾಡಿಕೊಳ್ಳಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಮೈಸೂರಿನಲ್ಲಿ ಹೇಳಿಕೆ ನೀಡಿದ್ದಾರೆ.

ಇಂದು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಸ್ವಾಗತಿಸಲು ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ. ಕೆ ಶಿವಕುಮಾರ್, ಭಾರತ್ ಜೋಡೋ ಬಗ್ಗೆ ಬಿಜೆಪಿಗರು ಕಾಂಗ್ರೆಸ್ ಟೀಕಿಸುವ ಬದಲು, ಮೊದಲು ಸಚಿವ ಸ್ಥಾನಕ್ಕಾಗಿ ಈಶ್ವರಪ್ಪ ಒಂದೇ ಸಮನೆ ಕಣ್ಣೀರಿಡುತ್ತಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಮಾತನಾಡಿದರು

ಅವರ ವಿರುದ್ಧ ಪ್ರಕರಣಕ್ಕೆ ಬಿ - ರಿಪೋರ್ಟ್ ಹಾಕಿಸಿದ್ದಾರೆ. ಎಲ್ಲ ಪ್ರಕರಣಗಳಲ್ಲೂ ಯಾವುದೇ ತನಿಖೆ ಮಾಡದೇ ಬಿ-ರಿಪೋರ್ಟ್ ಹಾಕಿಸಿಕೊಳ್ಳುತ್ತಿದ್ದಾರೆ. ಈ ಮಧ್ಯೆ ಸುನೀಲ್ ಕುಮಾರ್ ಕೂಡ ಅದೇನೋ ಕರೆಂಟ್ ಫೈಲ್ ಇದೆ ಎನ್ನುತ್ತಿದ್ದಾರೆ. ಈ ಬಗ್ಗೆ ನಾನು ನಂತರ ಮಾತನಾಡುತ್ತೇನೆ. ಈಗ ಭಾರತ್ ಜೋಡೋ ಯಾತ್ರೆ ಟೀಕಿಸುವ ಬದಲು ಬಿಜೆಪಿಗರು ತಮನ್ನು ಜೋಡಿಸಿಕೊಳ್ಳುವ ಕೆಲಸ ಮಾಡಲಿ ಎಂದು ತಿರುಗೇಟು ನೀಡಿದರು.

ಯಾವಾಗಿನಿಂದ ಭವಿಷ್ಯ ಹೇಳುವುದನ್ನು ಕಲಿತರು: ರಾಹುಲ್ ಗಾಂಧಿ ಹೋದಲ್ಲೆಲ್ಲಾ ಕಾಂಗ್ರೆಸ್ ಸೋಲು ಅನುಭವಿಸುತ್ತಿದೆ. ಅದೇ ರೀತಿ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಹಿನ್ನಡೆ ಆಗಲಿದೆ ಎಂಬ ಬಿಜೆಪಿ ನಾಯಕರ ಟೀಕೆಗೆ ತಿರುಗೇಟು ನೀಡಿದ ಡಿ ಕೆ ಶಿವಕುಮಾರ್, ಬಿಜೆಪಿ ಅವರು ಯಾವಾಗಿನಿಂದ ಭವಿಷ್ಯ ಹೇಳುವುದನ್ನು ಕಲಿತರು. ಅವರು ರಾಜಕೀಯ ಮಾಡುವುದನ್ನು ಬಿಟ್ಟು ಭವಿಷ್ಯ ಹೇಳುವುದನ್ನು ಯಾವಾಗ ಕಲಿತರು? ಎಂದು ವ್ಯಂಗ್ಯವಾಡಿದರು.

ಭಾರತ್ ಜೋಡೋಗೆ ಕರ್ನಾಟಕದಲ್ಲಿ ಅಭೂತಪೂರ್ವ ಬೆಂಬಲ ದೊರೆತಿದೆ. ಸೋನಿಯಾ ಗಾಂಧಿ ಕೂಡ ಭಾರತ್ ಜೋಡೋ ಯಾತ್ರೆಯಲ್ಲಿ ಭಾಗವಹಿಸಲಿದ್ದು, 2 ದಿನಗಳ ಕಾಲ ಮಡಿಕೇರಿಯಲ್ಲಿ ಖಾಸಗಿಯಾಗಿ ವಾಸ್ತವ್ಯ ಹೂಡಲಿದ್ದಾರೆ. ಆದರೆ, ಹವಾಮಾನ ವೈಪರೀತ್ಯ ಕಾರಣ ಮೈಸೂರಿನಲ್ಲೇ ಉಳಿದುಕೊಳ್ಳಲಿದ್ದಾರೆ.

ಅಕ್ಟೋಬರ್ 06 ರಿಂದ ಭಾರತ್ ಜೋಡೋ ಯಾತ್ರೆಯಲ್ಲಿ ಸೋನಿಯಾ ಗಾಂಧಿ ಭಾಗಿಯಾಗಲಿದ್ದು, ಮಲ್ಲಿಕಾರ್ಜುನ ಖರ್ಗೆ ಸಹಾ ಭಾರತ್ ಜೋಡೋ ಯಾತ್ರೆಯಲ್ಲಿ ಭಾಗಿಯಾಗಲಿದ್ದಾರೆ. ಪ್ರಿಯಾಂಕಾ ಗಾಂಧಿ ಭಾರತ್ ಜೋಡೋ ಯಾತ್ರೆಯಲ್ಲಿ ಭಾಗಿಯಾಗುವ ದಿನಾಂಕ ಇನ್ನೂ ನಿಗದಿಯಾಗಿಲ್ಲ ಎಂದರು.

ದೇಶಾದ್ಯಂತ ಸಂಚಲನ ಉಂಟುಮಾಡಿದ ಯಾತ್ರೆ: ಭಾರತ್ ಜೋಡೋ ಯಾತ್ರೆಗೆ ಅಭೂತಪೂರ್ವ ಯಶಸ್ಸು ಸಿಗುತ್ತಿದ್ದು, ಯುವಕರು, ರೈತರು ಹೆಚ್ಚಾಗಿ ಮಳೆ, ಬಿಸಿಲು, ಚಳಿ ಎನ್ನದೇ ಜೋಡೋ ಯಾತ್ರೆಯಲ್ಲಿ ಭಾಗವಹಿಸಿದ್ದು, ಈ ಯಶಸ್ಸು ಕಂಡು ಬಿಜೆಪಿಯವರು ಅತಂತ್ರರಾಗಿದ್ದಾರೆ ಎಂದು ಹೇಳಿದ ಡಿ ಕೆ ಶಿವಕುಮಾರ್, ಯಂಗ್ ಇಂಡಿಯಾಗೆ ನಾವು ಬೆಂಬಲಿಸಿದ್ದು, ನನಗೆ ಅಕ್ಟೋಬರ್ 07 ರಂದು ವಿಚಾರಣೆಗೆ ಬರುವಂತೆ ನೋಟಿಸ್ ನೀಡಲಾಗಿದೆ.

ಆದರೆ, ದಿನಾಂಕ ಬದಲಿಸುವಂತೆ ಇಡಿಗೆ ಮನವಿ ಸಲ್ಲಿಸಿದ್ದೇನೆ ಎಂದರು. ಭಾರತ್ ಜೋಡೋ ಯಾತ್ರೆ ಇಡೀ ದೇಶಾದ್ಯಂತ ಸಂಚಲನ ಉಂಟು ಮಾಡಿದೆ ಎಂದು ಡಿ ಕೆ ಶಿವಕುಮಾರ್ ಹೇಳಿದರು.

ಓದಿ: ಭಾರತ್ ಜೋಡೋ ಯಾತ್ರೆ.. ರಾಹುಲ್ ಗಾಂಧಿಗೆ 10 ಪ್ರಶ್ನೆಗಳ ಸವಾಲೆಸೆದ ರವಿಕುಮಾರ್

ETV Bharat Logo

Copyright © 2025 Ushodaya Enterprises Pvt. Ltd., All Rights Reserved.