ಮೈಸೂರು : ಗುಂಡ್ಲುಪೇಟೆ ಯುವಕನ ಬೆತ್ತಲೆ ಮೆರವಣಿಗೆ ಖಂಡಿಸಿ ನಂಜನಗೂಡು ಪಟ್ಟಣದಲ್ಲಿ ಅರೆಬೆತ್ತಲೆ ಮೆರವಣಿಗೆ ನಡೆಸಲಾಯಿತು.
ಕಳೆದ ವಾರ ಗುಂಡ್ಲುಪೇಟೆ ತಾಲೂಕಿನ ಕೆಬ್ಬೆಗಟ್ಟೆ ಗ್ರಾಮದಲ್ಲಿ ಯುವಕನ ಬೆತ್ತಲೆ ಮೆರವಣಿಗೆ ನಡೆಸಿದ್ದನ್ನ ಖಂಡಿಸಿ ದಲಿತ ಸಂಘಟನೆಯ ಮುಖಂಡರು ಪಟ್ಟಣದ ಎಂಜಿ ರಸ್ತೆಯಿಂದ ಮಿನಿ ವಿಧಾನಸೌಧದವರೆಗೆ ಅರೆ ಬೆತ್ತಲೆ ಮೆರವಣಿಗೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಈ ಕೃತ್ಯವನ್ನು ನಡೆಸಿದವರಿಗೆ ಸರಿಯಾದ ಶಿಕ್ಷೆ ನೀಡಬೇಕೆಂದು ತಹಶೀಲ್ದಾರ್ಗೆ ಮನವಿ ಪತ್ರ ಸಲ್ಲಿಸಿದ್ದಾರೆ.