ETV Bharat / state

ದಸರಾ ಉತ್ಸವ ನಾಡಿನ ಗೌರವದ ಸಂಕೇತ: ಸಚಿವ ಸೋಮಶೇಖರ್ - ದಸರಾ ಉತ್ಸವ

ನಾಡಹಬ್ಬ ಹಬ್ಬ ಮೈಸೂರು ದಸರಾ ಮಹೋತ್ಸವದ ಉದ್ಘಾಟನಾ ಸಮಾರಂಭಕ್ಕೆ ಆಗಮಿಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಭಾಗವಹಿಸಿದ್ದ ಎಲ್ಲಾ ಗಣ್ಯರಿಗೆ ಸಚಿವ ಎಸ್​.ಟಿ.ಸೋಮಶೇಖರ್​ ಸ್ವಾಗತ ಕೋರಿದರು.

dasara festival
ದಸರಾ ಉತ್ಸವ ನಾಡಿನ ಗೌರವದ ಸಂಕೇತ: ಸಚಿವ ಎಸ್​. ಟಿ. ಸೋಮಶೇಖರ್
author img

By

Published : Oct 17, 2020, 12:25 PM IST

ಮೈಸೂರು: ದಸರಾ ಮಹೋತ್ಸವ ಈ ನಾಡಿಗೆ ಅತ್ಯಂತ ಸಂಭ್ರಮದ ಹಾಗೂ ಗೌರವದ ಸಂಕೇತ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.

dasara festival
ದಸರಾ ಮಹೋತ್ಸವಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಚಾಲನೆ

ದಸರಾ ಉದ್ಘಾಟನೆಯಲ್ಲಿ ಮಾತನಾಡಿದ ಅವರು, ನಾಡಹಬ್ಬ ಹಬ್ಬ ಮೈಸೂರು ದಸರಾ ಮಹೋತ್ಸವದ ಉದ್ಘಾಟನಾ ಸಮಾರಂಭಕ್ಕೆ ಆಗಮಿಸಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಈ ಸಮಾರಂಭದಲ್ಲಿ ಭಾಗವಹಿಸಿರುವ ಎಲ್ಲಾ ಗಣ್ಯರಿಗೆ ಸ್ವಾಗತ ಕೋರುತ್ತೇನೆ. ಮೈಸೂರು ದಸರಾ ಮಹೋತ್ಸವ ಈ ನಾಡಿಗೆ ಅತ್ಯಂತ ಸಂಭ್ರಮದ ಹಾಗೂ ಗೌರವದ ಸಂಕೇತ. ಹಂಪಿಯ ಮಹಾನವಮಿ ದಿಬ್ಬದಲ್ಲಿ ವಿಜಯನಗರ ಸಾಮ್ರಾಜ್ಯದ ಅರಸರು ಆಚರಿಸುತ್ತಿದ್ದ ದಸರಾ ಉತ್ಸವವನ್ನು ಮೈಸೂರಿನ ಅರಸರು ಮುಂದುವರೆಸಿದರು. ರಾಜ ಪ್ರಭುತ್ವದ ನಂತರ ಈ ಸಂಪ್ರದಾಯವನ್ನು ಕರ್ನಾಟಕ ಸರ್ಕಾರ ಆಚರಿಸಿಕೊಂಡು ಬಂದಿದೆ.

dasara festival
ದಸರಾ ಮಹೋತ್ಸವದ ಉದ್ಘಾಟನಾ ಸಮಾರಂಭಕ್ಕೆ ಆಗಮಿಸಿರುವ ಸಿಎಂ ಬಿಎಸ್​ವೈ

ನಾಡಿನ ಅಧಿದೇವತೆ ಶ್ರೀ ಚಾಮುಂಡೇಶ್ವರಿ ದೇವಿಯ ಸನ್ನಿಧಿಯಲ್ಲಿ ಶ್ರೀ ಚಾಮುಂಡೇಶ್ವರಿಗೆ ಅಗ್ರಪೂಜೆ ಸಲ್ಲಿಸಿ, ಈ ನಾಡಿಗೆ, ರಾಜ್ಯಕ್ಕೆ ಒಳಿತಾಗಲಿ. ದಸರಾ ಕೈಂಕಾರ್ಯಗಳು ನಿರ್ವಿಘ್ನವಾಗಿ ಸಾಗಲಿ ಎಂಬ ಪ್ರಾರ್ಥನೆಯೊಂದಿಗೆ ದಸರಾ ಮಹೋತ್ಸವವನ್ನು ಚಾಮುಂಡಿ ಬೆಟ್ಟದಲ್ಲಿ ಉದ್ಘಾಟಿಸುವುದು ಸಂಪ್ರದಾಯವಾಗಿದೆ. ಮೈಸೂರು ದಸರಾ ವಿಶ್ವವಿಖ್ಯಾತಿಯಾದುದು. ದಸರಾ ಎಂದರೆ ಎಲ್ಲೆಡೆ ಸಂಭ್ರಮ-ವೈಭವ ಮನೆ ಮಾಡಿರುತ್ತದೆ. ಆದರೆ ಈ ಬಾರಿ ಕೊರೊನಾ ಹಿನ್ನೆಲೆಯಲ್ಲಿ ಅತ್ಯಂತ ಸರಳವಾಗಿ, ಸಾಂಪ್ರದಾಯಿಕವಾಗಿ ಆಚರಿಸಬೇಕಾದ ಅನಿವಾರ್ಯತೆ ಬಂದಿದೆ ಎಂದರು.

ಜಾಗತಿಕವಾಗಿ ಸಮಸ್ಯೆ ಉಂಟು ಮಾಡಿರುವ ಕೊರೊನಾ ಸೋಂಕು ಹರಡುವುದನ್ನು ನಿಯಂತ್ರಿಸಬೇಕಾದ ಅನಿವಾರ್ಯತೆ ಇರುವುದರಿಂದ ದಸರಾ ಮಹೋತ್ಸವದ ಹಲವಾರು ಕಾರ್ಯಕ್ರಮಗಳನ್ನು ಈ ಬಾರಿ ಆಯೋಜಿಸುತ್ತಿಲ್ಲ. ಆದರೆ ದಸರಾ ಮಹೋತ್ಸವದ ಸಂಪ್ರದಾಯ ಮತ್ತು ಪರಂಪರೆಯನ್ನು ನಿಲ್ಲಿಸಬಾರದು ಎಂಬ ಉದ್ದೇಶದಿಂದ ಧಾರ್ಮಿಕ ವಿಧಿ ವಿಧಾನಗಳಿಗೆ ಸೀಮಿತವಾಗಿ ಚಾಮುಂಡಿ ಬೆಟ್ಟದಲ್ಲಿ ಉದ್ಘಾಟನಾ ಕಾರ್ಯಕ್ರಮ ಹಾಗೂ ಅರಮನೆ ಆವರಣದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು, ನಂದಿ ಧ್ವಜ ಪೂಜೆ ಹಾಗೂ ಜಂಬೂ ಸವಾರಿ ಕಾರ್ಯಕ್ರಮಗಳನ್ನು ಮಾತ್ರ ಆಚರಿಸಲಾಗುತ್ತಿದೆ.

ದಸರಾ ಮಹೋತ್ಸವವನ್ನು ಅದ್ಧೂರಿಯಾಗಿ ಆಚರಿಸುವ ಮೂಲಕ ಪ್ರವಾಸೋದ್ಯಮ, ವಾಣಿಜ್ಯ- ಕೈಗಾರಿಕೋದ್ಯಮಕ್ಕೆ ಉತ್ತೇಜನ ನೀಡಬೇಕೆಂಬ ಅಭಿಪ್ರಾಯಗಳು ಹಲವರಿಂದ ವ್ಯಕ್ತವಾಗಿದ್ದವು. ಆದರೆ ವಿಶ್ವ ಆರೋಗ್ಯ ಸಂಸ್ಥೆ ಮತ್ತು ಭಾರತ ಸರ್ಕಾರವು ಕಾಲ ಕಾಲಕ್ಕೆ ನೀಡುವ ಕೋವಿಡ್ ಮಾರ್ಗಸೂಚಿಗಳನ್ನು ಗಮನದಲ್ಲಿಟ್ಟುಕೊಂಡು, ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ದಸರಾ ಉನ್ನತಾಧಿಕಾರ ಸಮಿತಿ ಸಭೆಯಲ್ಲಿ ಎಲ್ಲಾ ಜನಪ್ರತಿನಿಧಿಗಳ ಸಲಹೆ ಪಡೆದು ಈ ಬಾರಿಯ ದಸರಾ ಮಹೋತ್ಸವನ್ನು ಸರಳವಾಗಿ ಹಾಗೂ ಸಾಂಪ್ರದಾಯಿಕವಾಗಿ ಸೀಮಿತಗೊಳಿಸಿ ಆಚರಿಸಲು ತೀರ್ಮಾನಿಸಲಾಯಿತು ಎಂದರು.

ಕೋವಿಡ್ ಸೋಂಕಿನ ವಿರುದ್ಧ ಹೋರಾಡುತ್ತಿರುವ ಕೊರೊನಾ ವಾರಿಯರ್​​ಗಳಿಗೆ ಗೌರವ ಸಲ್ಲಿಸುವ ಸಲುವಾಗಿ ಈ ಬಾರಿ ಕೊರೊನಾ ವಾರಿಯರ್​​ಗಳಿಂದ ದಸರಾ ಉದ್ಘಾಟಿಸಬೇಕು ಹಾಗೂ ಕೊರೊನಾ ವಾರಿಯರ್​ಗಳಿಗೆ ಗೌರವಿಸಬೇಕು ಎಂದು ತೀರ್ಮಾನಿಸಲಾಯಿತು. ಅದರಂತೆ ಖ್ಯಾತ ವೈದ್ಯರು ಹಾಗೂ ಜಯದೇವ ಆಸ್ಪತ್ರೆಯ ನಿರ್ದೇಶಕರಾದ ಡಾ. ಸಿ.ಎನ್.ಮಂಜುನಾಥ್ ಅವರನ್ನು ದಸರಾ ಉದ್ಘಾಟಿಸಲು ಆಹ್ವಾನಿಸಲಾಯಿತು. ಅವರು ಸಂತೋಷದಿಂದ ಒಪ್ಪಿಕೊಂಡು ಬಂದಿದ್ದಾರೆ. ಅದಕ್ಕಾಗಿ ಅವರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದರು.

ರಾಜ್ಯದಲ್ಲಿ ಸುರಕ್ಷಿತ ದಸರಾ ಆಚರಿಸುವ ಸಲುವಾಗಿ ಕೋವಿಡ್ ರಾಜ್ಯಮಟ್ಟದ ಸಲಹಾ ಸಮಿತಿಯ ಅಧ್ಯಕ್ಷರನ್ನು ಒಳಗೊಂಡ ತಾಂತ್ರಿಕ ಸಲಹಾ ಸಮಿತಿಯನ್ನು ಮೈಸೂರಿಗೆ ಕಳುಹಿಸಲಾಗಿತ್ತು. ಈ ಸಮಿತಿ ಹಾಗೂ ಕೇಂದ್ರ ಸರ್ಕಾರದ ಮಾರ್ಗಸೂಚಿಗಳು ಹಾಗೂ ಸಲಹೆಗಳನ್ವಯ ಈಗ ದಸರಾವನ್ನು ಆಚರಿಸಲಾಗುತ್ತಿದೆ. ಸರಳವಾಗಿ ಹಾಗೂ ಸಾಂಪ್ರದಾಯಿಕವಾಗಿ ನಡೆಯುವ ಈ ಬಾರಿಯ ದಸರಾ ಕಾರ್ಯಕ್ರಮವನ್ನು ವರ್ಚುವಲ್ ಆಗಿ ಪ್ರಸಾರ ಮಾಡಲಾಗುತ್ತಿದ್ದು, ಸಾರ್ವಜನಿಕರು ಟಿವಿ ಹಾಗೂ ಸೋಷಿಯಲ್ ಮೀಡಿಯಾ ಮೂಲಕ ನೇರಪ್ರಸಾರ ವೀಕ್ಷಿಸಲು ಕೋರಿದರು.

ಸಾರ್ವಜನಿಕರು ಮಾಸ್ಕ್ ಹಾಕಿಕೊಂಡು, ಸ್ಯಾನಿಟೈಸರ್ ಬಳಸಿ ಸುರಕ್ಷತೆ ಕಾಪಾಡಿಕೊಳ್ಳಬೇಕು. ಅನಗತ್ಯವಾಗಿ ಹೊರಗಡೆ ಓಡಾಡದೆ ಮನೆಯಲ್ಲೇ ಇದ್ದು, ದಸರಾ ಆಚರಿಸಬೇಕು ಎಂದು ಸಚಿವರು ಮನವಿ ಮಾಡಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.