ETV Bharat / state

ನಾಳೆ ನಾಡಹಬ್ಬ ದಸರಾಗೆ ಚಾಲನೆ: ಎಸ್.ಟಿ. ಸೋಮಶೇಖರ್​​ ಸ್ಥಳ ಪರಿಶೀಲನೆ

author img

By

Published : Oct 16, 2020, 12:59 PM IST

Updated : Oct 16, 2020, 1:13 PM IST

ಚಾಮುಂಡಿ ಬೆಟ್ಟದಲ್ಲಿ ನಾಡಹಬ್ಬ ದಸರಾಗೆ ನಾಳೆ ಚಾಲನೆ ದೊರೆಯಲಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್​​ ಭೇಟಿ ನೀಡಿ ಪರಿಶೀಲಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್​​ ಸ್ಥಳ ಪರಿಶೀಲನೆ

ಮೈಸೂರು: ನಾಳೆ ನಾಡಹಬ್ಬ ದಸರಾಗೆ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕ ಡಾ. ಸಿ.ಎನ್.​ ಮಂಜುನಾಥ್​ ಅವರು ಚಾಲನೆ ನೀಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಪರಿಶೀಲನೆ ನಡೆಸಿದರು.

ನಾಳೆ ಚಾಮುಂಡಿ ಬೆಟ್ಟದಲ್ಲಿ ನಾಡಹಬ್ಬ ದಸರಾಗೆ ವಿದ್ಯುಕ್ತ ಚಾಲನೆ ದೊರಕಲಿದ್ದು, ಇಂದು ಸಚಿವ ಎಸ್.ಟಿ ಸೋಮಶೇಖರ್ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ್ದರು. ಈ ವೇಳೆ ಅರಮನೆಗೆ ಭೇಟಿ ನೀಡಿ ಸಾಂಸ್ಕೃತಿಕ ಕಾರ್ಯಕ್ರಮದ ವೇದಿಕೆ ಹಾಗೂ ಗಜಪಡೆ ವಾಸ್ತವ್ಯ ಹೂಡಿರುವ ಸ್ಥಳಕ್ಕಾಗಮಿಸಿ ಗಜಪಡೆಗೆ ಬೆಲ್ಲ ಹಾಗೂ ಕಬ್ಬನ್ನು ನೀಡಿದರು.

ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಾಳೆ ದಸರಾ ಉದ್ಘಾಟನೆ ನೆರವೇರಲಿದ್ದು, ಈ ಹಿನ್ನೆಲೆಯಲ್ಲಿ ಇಂದು ಸಂಜೆ ಸಿಎಂ ಮೈಸೂರಿಗೆ ಆಗಮಿಸುತ್ತಾರೆ. ಕೋವಿಡ್ ಸಂಬಂಧ ಹಿರಿಯ ಅಧಿಕಾರಿಗಳ ಸಭೆ ನಡೆಸುತ್ತಾರೆ. ಬೆಳಗ್ಗೆ ಚಾಮುಂಡಿ ಬೆಟ್ಟದಲ್ಲಿ ಸರಳ ದಸರಾಗೆ ಚಾಲನೆ ನೀಡಲಿದ್ದು, ಈ ಬಾರಿ ಎಲ್ಲರಿಗೂ ಆಹ್ವಾನ ಪತ್ರಿಕೆಗಳನ್ನು ಕಳುಹಿಸಲಾಗಿದೆ. ಕೋವಿಡ್ ಇರುವ ಕಾರಣ 3-4 ಸಚಿವರು ಮಾತ್ರ ಆಗಮಿಸುತ್ತಾರೆ. ಎಕ್ಸ್​ಪರ್ಟ್ ಕಮಿಟಿ ಪ್ರಕಾರ 200 ಜನ ಮಾತ್ರ ಭಾಗವಹಿಸಬೇಕೆಂದು ಹೇಳಲಾಗಿದೆ. ನಾಳೆ ಬರುವ ಎಲ್ಲರೂ ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳಬೇಕು. ಜಂಬೂ ಸವಾರಿಗೂ 300 ಜನಕ್ಕೆ ಮಾತ್ರ ಅವಕಾಶವಿದ್ದು, ಎಲ್ಲರೂ ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳಬೇಕು ಎಂದರು.

ಪ್ರವಾಸಿ ತಾಣಗಳು ಎರಡು ಮೂರು ದಿನ ಬಂದ್​ ಆಗಲಿದ್ದು, ಜಂಬೂ ಸವಾರಿ ಸಂದರ್ಭದಲ್ಲಿ ಪ್ರವಾಸಿ ಸಾರ್ವಜನಿಕರಿಗೆ ಮುಕ್ತವಾಗಿರುವುದಿಲ್ಲ ಎಂದು ಸಚಿವರು ತಿಳಿಸಿದರು.

ದಸರಾ ಮುಗಿದ ನಂತರ ಆರ್​ಆರ್ ನಗರದಲ್ಲಿ ಮುನಿರತ್ನ‌ ಪರ ಪ್ರಚಾರ ಮಾಡಲು ಹೋಗುತ್ತೇನೆ. ಸರ್ಕಾರದ 800 ಕೋಟಿ ಅನುದಾನದಿಂದ ಮುನಿರತ್ನ 10,000 ಕ್ಕೂ ಹೆಚ್ಚು ಮನೆಗಳನ್ನು ಆರ್​ಆರ್ ನಗರದಲ್ಲಿ ನಿರ್ಮಾಣ ಮಾಡಿದ್ದಾರೆ. ಮುನಿರತ್ನ ಗೆಲುವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇನ್ನು ನೀತಿ ಸಂಹಿತೆ ಉಲ್ಲಂಘನೆ ಅಡಿ ಕಾಂಗ್ರೆಸ್​ ಅಭ್ಯರ್ಥಿ ಕುಸುಮಾ ಹನುಮಂತರಾಯಪ್ಪ ವಿರುದ್ಧ ಎಫ್ಐಆರ್ ದಾಖಲಿಸಲಾಗಿದ್ದು, ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸರ್ಕಾರದ ವಿರುದ್ಧ ವಾಗ್ದಾಳಿ ಮಾಡುವುದು ಸರಿಯಲ್ಲ. ಆರ್.ಆರ್. ನಗರದಲ್ಲಿ ಕಾಂಗ್ರೆಸ್ ಗೆಲ್ಲುವುದಕ್ಕೆ ಆಗಲ್ಲ. ಅದಕ್ಕೆ ಪಿಳ್ಳೆ ನೆವ ಹುಡುಕುತ್ತಿದ್ದಾರೆ. ನೀತಿ ಸಂಹಿತೆ ಉಲ್ಲಂಘನೆ ಮಾಡಿದವರ ವಿರುದ್ಧ ಯಾರೇ ಆಗಲಿ ಎಫ್ಐಆರ್ ದಾಖಲಿಸುವ ಕ್ರಮ ಸರಿ ಇದೆ ಎಂದು ಟಾಂಗ್ ನೀಡಿದರು.

Last Updated : Oct 16, 2020, 1:13 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.