ETV Bharat / state

ನಾಳೆ ಸಾಂಸ್ಕೃತಿಕ ನಗರಿಯಲ್ಲಿ ಜಂಬೂ ಸವಾರಿಯ ಸಂಭ್ರಮ

ಜಗತ್ತಿನ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿ ಮೆರವಣಿಗೆ ಅಂಬಾವಿಲಾಸ ಅರಮನೆ ಮುಂಭಾಗದಲ್ಲಿ ನಡೆಯಲಿದೆ. ಈ ಸಂಭ್ರಮಕ್ಕೆ ಸಾಂಸ್ಕೃತಿಕ ನಗರಿ ಸಜ್ಜಾಗಿದ್ದು, ಜಂಬೂಸವಾರಿ ಮೆರವಣಿಗೆ ಹಾಗೂ ಭದ್ರತೆಗೆ ಎಲ್ಲ ರೀತಿಯ ಸಿದ್ಧತೆಯನ್ನು ಮಾಡಿಕೊಳ್ಳಲಾಗಿದೆ.

ನಾಳೆ ಸಾಂಸ್ಕೃತಿಕ ನಗರಿಯಲ್ಲಿ ಜಂಬೂ ಸವಾರಿಯ ಸಂಭ್ರಮ
ನಾಳೆ ಸಾಂಸ್ಕೃತಿಕ ನಗರಿಯಲ್ಲಿ ಜಂಬೂ ಸವಾರಿಯ ಸಂಭ್ರಮ
author img

By

Published : Oct 4, 2022, 8:11 PM IST

Updated : Oct 4, 2022, 9:44 PM IST

ಮೈಸೂರು: ನಾಡಹಬ್ಬ ಮೈಸೂರು ದಸರಾದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿಯ ಸಂಭ್ರಮ ಮನೆ ಮಾಡಿದ್ದು, ಅಕ್ಟೋಬರ್ 05 ರಂದು ಜಂಬೂಸವಾರಿ ನಡೆಯಲಿದೆ.

ಜಗತ್ತಿನ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿ ಮೆರವಣಿಗೆ ಅಂಬಾವಿಲಾಸ ಅರಮನೆ ಮುಂಭಾಗದಲ್ಲಿ ನಡೆಯಲಿದೆ. ಈ ಸಂಭ್ರಮಕ್ಕೆ ಸಾಂಸ್ಕೃತಿಕ ನಗರಿ ಸಜ್ಜಾಗಿದ್ದು, ಜಂಬೂಸವಾರಿ ಮೆರವಣಿಗೆ ಹಾಗೂ ಭದ್ರತೆಗೆ ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ.

750 ಕೆಜಿ ತೂಕದ ಚಿನ್ನದ ಅಂಬಾರಿಯಲ್ಲಿ ವಿರಾಜಮಾನವಾದ ಅಧಿದೇವತೆ ಚಾಮುಂಡೇಶ್ವರಿ ಉತ್ಸವ ಮೂರ್ತಿಯನ್ನು ಚಿನ್ನದ ಅಂಬಾರಿಯಲ್ಲಿ ಇಟ್ಟು ಗಣ್ಯರಿಂದ ಪುಷ್ಪಾರ್ಚನೆ ಮಾಡುವ ಮೂಲಕ ಜಂಬೂಸವಾರಿಗೆ ಚಾಲನೆ ನೀಡಲಾಗುತ್ತದೆ.

ಅದಕ್ಕೂ ಮುನ್ನ ರಾಜಪಥಗಳಲ್ಲಿ ನಾಡಿನ ಸಂಸ್ಕೃತಿ, ಕಲೆ, ವೈಭವಗಳನ್ನು ಹೊತ್ತು 47 ಸ್ತಬ್ಧ ಚಿತ್ರಗಳು, 50 ವಿವಿಧ ಬಗೆಯ ಜನಪದ ಕಲಾ ತಂಡಗಳು, 9 ಆನೆಗಳು ವಿಶ್ವ ವಿಖ್ಯಾತ ಜಂಬೂಸವಾರಿಯಲ್ಲಿ ಪಾಲ್ಗೊಳ್ಳಲಿವೆ.

ಸಂಜೆ ಜಂಬೂಸವಾರಿ: ಸುಮಾರು ವರ್ಷಗಳ ನಂತರ ಜಂಬೂಸವಾರಿಗೆ ಸಂಜೆ ಶುಭಲಗ್ನ ಬಂದಿದ್ದು, ಅದಕ್ಕೂ ಮುನ್ನ ಅರಮನೆಯ ಬಲರಾಮ ದ್ವಾರದ ಕೋಟೆ ಆಂಜನೇಯ ದೇವಾಲಯದ ಮುಂಭಾಗದಲ್ಲಿ ಮದ್ಯಾಹ್ನ 2.36 ರಿಂದ 2.50 ವರೆಗಿನ ಶುಭ ಮಕರ ಲಗ್ನದಲ್ಲಿ ಸಿಎಂ ಬೊಮ್ಮಾಯಿ ಹಾಗೂ ಇತರ ಗಣ್ಯರು ನಂದಿ ಧ್ವಜಕ್ಕೆ ಪೂಜೆ ಸಲ್ಲಿಸುವ ಮೂಲಕ ಜಂಬೂಸವಾರಿಯ ಮೆರವಣಿಗೆಗೆ ಚಾಲನೆ ನೀಡುವರು.

ಬಳಿಕ ಸಂಜೆ ಅರಮನೆ ಮುಂಭಾಗದಲ್ಲಿ 5. 07 ಗಂಟೆಯಿಂದ 5.18 ಗಂಟೆಯ ವರೆಗಿನ ಶುಭ ಮೀನ ಲಗ್ನದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಜಿಲ್ಲಾ ಉಸ್ತುವಾರಿ ಸಚಿವ ಎಸ್. ಟಿ ಸೋಮಶೇಖರ್, ಮೇಯರ್ ಶಿವಕುಮಾರ್ ಸೇರಿದಂತೆ ಗಣ್ಯರಿಂದ ಪುಷ್ಪಾರ್ಚನೆ ಮಾಡುವ ಮೂಲಕ ಅಂಬಾರಿ ಹೊತ್ತ ಅಭಿಮನ್ಯು ಬನ್ನಿ ಮಂಟಪದ ಕಡೆ ಹೆಜ್ಜೆ ಹಾಕಲಿದ್ದಾರೆ.

ಬಿಗಿಯಾದ ಪೊಲೀಸ್ ಬಂದೋಬಸ್ತ್: ಜಂಬೂಸವಾರಿ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ 5485 ಪೊಲೀಸರನ್ನು ನಿಯೋಜನೆ ಮಾಡಲಾಗಿದ್ದು, ನಗರದ ವಿವಿಧ ಭಾಗಗಳಲ್ಲಿ 13140 ಸಿಸಿಟಿವಿ ಕ್ಯಾಮರಾಗಳನ್ನು ಮೈಸೂರು ಅರಮನೆಯಿಂದ ಬನ್ನಿ ಮಂಟಪದ ವರೆಗಿನ ಮೆರವಣಿಗೆಯೆಡೆಗೆ ಸಾಗುವ 110 ಸ್ಥಳಗಳಲ್ಲಿ ಅಳವಡಿಸಲಾಗಿದೆ. ಅರಮನೆ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಹಾಕಲಾಗಿದೆ. ಇದರ ಜೊತೆಗೆ ಮೊಬೈಲ್ ಕಮ್ಯಾಂಡ್ ಸೆಂಟರ್ ಕಾರ್ಯ ನಿರ್ವಹಿಸುತ್ತದೆ. ಯಾವುದೇ ರೀತಿ ಅಹಿತಕರ ಘಟನೆ ನಡೆಯದಂತೆ ಹೆಚ್ಚಿನ ನಿಗಾ ವಹಿಸಲಾಗಿದೆ.

ಓದಿ: ಮೈಸೂರು ಅರಮನೆ ಆಯುಧ ಪೂಜೆ ಕ್ಷಣಗಳನ್ನು ಕಣ್ತುಂಬಿಕೊಳ್ಳಿ

Last Updated : Oct 4, 2022, 9:44 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.