ETV Bharat / state

ದಸರಾ 'ಯುವ ಸಂಭ್ರಮ'ಕ್ಕೆ ಸಚಿವ ಹೆಚ್.ಸಿ ಮಹದೇವಪ್ಪ ಚಾಲನೆ: ಸಮಾರಂಭಕ್ಕೆ ಸಿಂಹಪ್ರಿಯಾ ಸಾಕ್ಷಿ

author img

By ETV Bharat Karnataka Team

Published : Oct 7, 2023, 7:09 AM IST

Dasara 2023: ದಸರಾ 'ಯುವ ಸಂಭ್ರಮ'ಕ್ಕೆ ಚಾಲನೆ ಸಿಕ್ಕಿದೆ.

Dasara Yuva Sambrama
ದಸರಾ 'ಯುವ ಸಂಭ್ರಮ'ಕ್ಕೆ ಚಾಲನೆ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಹಿನ್ನೆಲೆ ಸಾಂಸ್ಕೃತಿಕ ನಗರಿಯಲ್ಲಿ ಸಂಭ್ರಮದ ವಾತಾವರಣ ನಿರ್ಮಿಸುವ 'ಯುವ ಸಂಭ್ರಮ' ಕಾರ್ಯಕ್ರಮವನ್ನು ಸಮಾಜ ಕಲ್ಯಾಣ ಇಲಾಖೆ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ ಮಹದೇವಪ್ಪ ಅವರು ಉದ್ಘಾಟಿಸಿದರು. ಮೈಸೂರು ವಿಶ್ವವಿದ್ಯಾನಿಲಯ ಮಾನಸ ಗಂಗೋತ್ರಿಯ ಬಯಲು ರಂಗಮಂದಿರದಲ್ಲಿ ಶುಕ್ರವಾರ ಸಂಜೆ ಗಣ್ಯರು ಹಾಗೂ ಅತಿಥಿಗಳು ನಗಾರಿ, ಕಂಸಾಳೆ, ಡೊಳ್ಳು ಬಾರಿಸುವ ಮೂಲಕ 'ಯುವ ಸಂಭ್ರಮ' ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಅದ್ಧೂರಿಯಾಗಿ ಚಾಲನೆ ನೀಡಿದರು.

Dasara Yuva Sambrama
ಸಮಾರಂಭದ ಮೆರುಗು ಹೆಚ್ಚಿಸಿದ ನೃತ್ಯ ಪ್ರದರ್ಶನ

ಎಂಟು ದಿನಗಳ ಕಾರ್ಯಕ್ರಮ: ಈ ವೇಳೆ ಮಾತನಾಡಿದ ಸಚಿವ ಹೆಚ್.ಸಿ ಮಹದೇವಪ್ಪ, ಯುವ ಸಂಭ್ರಮ ಸಾಂಸ್ಕೃತಿಕ ಕಾರ್ಯಕ್ರಮ ಎಂಟು ದಿನಗಳ ಕಾಲ ವಿವಿಧ ಜಿಲ್ಲೆಗಳ 400 ಕಾಲೇಜಿನ ಸುಮಾರು 12 ಸಾವಿರ ವಿದ್ಯಾರ್ಥಿಗಳಿಂದ ನಡೆಯಲಿದೆ. ಅನೇಕ ಉತ್ತಮ ವಸ್ತುವಿಷಯ ಕುರಿತು ನೃತ್ಯ ರೂಪಕಗಳು ಪ್ರದರ್ಶನಗೊಳ್ಳುವ ಮೂಲಕ ದೇಶಕ್ಕೆ ಉತ್ತಮವಾದ ಸಂದೇಶ ಸಿಗಲಿದೆ ಎಂದು ತಿಳಿಸಿದರು. ದೇಶದ ಒಟ್ಟು ಜನಸಂಖ್ಯೆಯಲ್ಲಿ ಯುವ ಸಮೂಹ ಶೇ.42 ರಷ್ಟಿದೆ. ದೇಶದ ಭವಿಷ್ಯ ನಿಂತಿರುವುದು ಯುವಕರ ಬದುಕಿನ ಮೇಲೆ. ಅವರ ಬದುಕಿಗೆ ಭದ್ರ ಬುನಾದಿಯನ್ನು ಉತ್ತಮ ಸಿದ್ಧಾಂತದ ಮೇಲೆ ನಿರ್ಮಿಸಬೇಕಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

Dasara Yuva Sambrama
ಸಮಾರಂಭದಲ್ಲಿ ಕಂಡು ಬಂದ ಜನಸಮೂಹ

ಯುವಕರಿಗೆ ಕಿವಿಮಾತು: ನಮ್ಮ ದೇಶದ ಚಾರಿತ್ರಿಕ ಹಿನ್ನೆಲೆ, ಸ್ವಾತಂತ್ರ್ಯ ಹೋರಾಟ, ಸಾಂಸ್ಕೃತಿಕ ಬದುಕು, ಪ್ರಜಾಪ್ರಭುತ್ವ ಮತ್ತು ಸಂವಿಧಾನ ಆಶಯದ ಸೈದ್ಧಾಂತಿಕ ಅಡಿಪಾಯದಲ್ಲಿ ಯುವ ಜನರು ಬದುಕನ್ನು ರೂಪಿಸಿಕೊಳ್ಳುವ ಜೊತೆಗೆ ಬುದ್ಧ, ಬಸವ, ಡಾ.ಬಿ.ಆರ್ ಅಂಬೇಡ್ಕರ್‌ರ ಆಶಯದಂತೆ ದೇಶವನ್ನು ಬಲಿಷ್ಠವಾಗಿ ಕಟ್ಟಬೇಕಾದ ಅನಿವಾರ್ಯತೆ ಇದೆ ಎಂದು ಕರೆ ನೀಡಿದರು.

Dasara Yuva Sambrama
ಸಮಾರಂಭದ ಮೆರುಗು ಹೆಚ್ಚಿಸಿದ ನೃತ್ಯ ಪ್ರದರ್ಶನ

ಭಾರತೀಯರಾದ ನಾವೆಲ್ಲರೂ ಒಂದೆ. ಎಲ್ಲ ಧರ್ಮಗಳ ಆಚಾರ, ವಿಚಾರಗಳು ಇಲ್ಲಿ ಮುಕ್ತವಾಗಿವೆ. ಕಷ್ಟಪಟ್ಟು ಪಡೆದ ಸ್ವಾತಂತ್ರ್ಯ ಹಾಗೂ ನಮಗೆ ನಾವೇ ಅರ್ಪಿಸಿಕೊಂಡಿರುವ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಅರ್ಥಪೂರ್ಣವಾಗಿ ಜಾರಿಮಾಡುವ ಮೂಲಕ ಎಲ್ಲರ ಭವಿಷ್ಯ ಮತ್ತು ಹಕ್ಕನ್ನು ರಕ್ಷಣೆ ಮಾಡುವಲ್ಲಿ ಈ ವೇದಿಕೆ ಪ್ರೇರಣೆಯಾಗಲಿ ಎಂದು ಆಶಿಸಿದರು.

Dasara Yuva Sambrama
ಸಮಾರಂಭಕ್ಕೆ ಸಿಂಹಪ್ರಿಯಾ ಸಾಕ್ಷಿ

ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ನೀಡಿದ ಶ್ರೇಷ್ಠ ಆಡಳಿತ, ಜನಪರ ನಿರ್ಧಾರಗಳು ದೇಶದ ಎಲ್ಲ ಸರ್ಕಾರಗಳಿಗೂ ಮಾದರಿ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ನಮ್ಮ ಸರ್ಕಾರ ನಾಡಿನ ಸರ್ವಾಂಗೀಣ ಅಭಿವೃದ್ಧಿಗೆ ಕೆಲಸ ಮಾಡಲು ಬದ್ಧವಿದೆ. ಯುವಕರ ಉತ್ತಮ ಭವಿಷ್ಯದ ನಿರ್ಮಾಣಕ್ಕೂ ನೆರವಾಗಲಿದೆ ಎಂದರು.

ಇದನ್ನೂ ಓದಿ: ಮೈಸೂರು ದಸರಾ: ಕುಶಾಲತೋಪು ಸಿಡಿಸುವ ತಾಲೀಮು- ವಿಡಿಯೋ

ಯುವ ಜನರು ದೇಶ ಕಟ್ಟುವ ಕಾಯಕದಲ್ಲಿ ತೊಡಗಬೇಕು. ಈ ಯುವ ಸಂಭ್ರಮ ವೇದಿಕೆಯಲ್ಲಿ ಸಂಗೀತ, ವಿವಿಧ ಪ್ರಕಾರಗಳ ನೃತ್ಯವನ್ನು ಸವಿಯುವುದರ ಜೊತೆಗೆ ಭವಿಷ್ಯದಲ್ಲಿ ಉತ್ತಮ, ಜವಾಬ್ದಾರಿಯುತ ಪ್ರಜೆಗಳಾಗಬೇಕು ಎಂಬ ಸಂದೇಶ ಈ ಕಾರ್ಯಕ್ರಮದಲ್ಲಿರಲಿದೆ. ನಮ್ಮ ರಾಷ್ಟ್ರೀಯ ಭಾವೈಕ್ಯತೆ ರಕ್ಷಣೆ ಮಾಡುವಂತಾಗಿ ಎಂದು ಯುವಕರಿಗೆ ಕಿವಿಮಾತು ಕೊಟ್ಟರು.

ಇದನ್ನೂ ಓದಿ: 'ಲವ್‍ ಯೂ ಶಂಕರ್' ಚಿತ್ರಕ್ಕೆ ಸಿಕ್ತು ಶ್ರೀ ಸಿದ್ಧಗಂಗಾ ಮಹಾಸ್ವಾಮೀಜಿಗಳ ಆರ್ಶೀವಾದ

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಕನ್ನಡ ಚಿತ್ರರಂಗದ ತಾರಾದಂಪತಿ ವಸಿಷ್ಠಸಿಂಹ‌ - ಹರಿಪ್ರಿಯಾ ಆಗಮಿಸಿದ್ದರು. ಶಾಸಕರಾದ ಕೆ. ಹರೀಶ್‌ಗೌಡ, ರವಿಶಂಕರ್, ಶ್ರೀವತ್ಸ, ವಿಧಾನ ಪರಿಷತ್ ಸದಸ್ಯ ಸಿ.ಎನ್ ಮಂಜೇಗೌಡ, ಮೇಯರ್ ಶಿವಕುಮಾರ್, ಉಪಮೇಯರ್ ಡಾ.ಜಿ ರೂಪ, ಜಿಲ್ಲಾಧಿಕಾರಿ ಡಾ.ಕೆ.ವಿ ರಾಜೇಂದ್ರ, ಜಿಲ್ಲಾ ಪಂಚಾಯತ್ ಸಿಇಒ ಕೆ.ಎಂ ಗಾಯಿತ್ರಿ, ನಗರ ಪೊಲೀಸ್ ಆಯುಕ್ತ ರಮೇಶ್ ಬಾನೂತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕಾರ್, ಮೈಸೂರು ವಿಶ್ವವಿದ್ಯಾಲಯದ ಕುಲಸಚಿವರಾದ ವಿ.ಆರ್ ಶೈಲಜಾ, ಯವ ಸಂಭ್ರಮ ಉಪಸಮಿತಿ ಕಾರ್ಯದರ್ಶಿ ಆರ್ ಪ್ರತಾಪ್, ಸಹ ಕಾರ್ಯದರ್ಶಿ ನಿಂಗರಾಜು, ಡಿಸಿಪಿ ಮುತ್ತುರಾಜ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.