ETV Bharat / state

ಮೈಸೂರು ಜಿಲ್ಲೆಯಲ್ಲಿ ಈವರೆಗೂ ಹಕ್ಕಿಜ್ವರ ಕಂಡು ಬಂದಿಲ್ಲ : ಜಿಲ್ಲಾಧಿಕಾರಿ ಸ್ಪಷ್ಟನೆ

ಎಲ್ಲೆಲ್ಲಿ ವಲಸೆ ಹಕ್ಕಿಗಳು ಬರುತ್ತವೆಯೋ ಅಲ್ಲಿ ಹಿಕ್ಕೆಗಳ ಸಂಗ್ರಹ ಮಾಡಿ ಲ್ಯಾಬ್‌ಗೆ ಕಳುಹಿಸಲಾಗಿದೆ. ಈವರೆಗೆ ಬಂದಿರುವ ಲ್ಯಾಬ್ ವರದಿಯಲ್ಲಿ ಹಕ್ಕಿಜ್ವರ ಪತ್ತೆಯಾಗಿಲ್ಲ. ಮೃಗಾಲಯಕ್ಕೆ ತಾತ್ಕಾಲಿಕ ಪ್ರವೇಶ ನಿರ್ಬಂಧ ಅಥವಾ ಇತರೆ ನಿರ್ಧಾರಗಳ ಬಗ್ಗೆ ತೀರ್ಮಾನಿಸಿಲ್ಲ. ಹಕ್ಕಿಜ್ವರ ಪತ್ತೆಯಾದ್ರೆ ಮುಂದಿನ ಹಂತದ ನಿರ್ಧಾರ ಮಾಡುತ್ತೇವೆ..

author img

By

Published : Jan 6, 2021, 9:31 PM IST

DC Rohini sindhoori
ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ

ಮೈಸೂರು : ಜಿಲ್ಲೆಯಲ್ಲಿ ಈವರೆಗೆ ಹಕ್ಕಿಜ್ವರ ಕಂಡು ಬಂದಿಲ್ಲ ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸ್ಪಷ್ಟನೆ ನೀಡಿದ್ದಾರೆ. ಕೇರಳ ರಾಜ್ಯದಲ್ಲಿ ಹಕ್ಕಿ ಜ್ವರ ಕಂಡು ಬಂದಿದೆ. ಅಲ್ಲಿ ಕಿಲ್ಲಿಂಗ್ ಆಪರೇಷನ್ ಕೂಡ ನಡೆಯುತ್ತಿದೆ ಎಂದಿದ್ದಾರೆ.

ಕಳೆದ ವರ್ಷ ಮೈಸೂರಿನಲ್ಲಿ ಹಕ್ಕಿ ಜ್ವರದ ಹಿನ್ನೆಲೆ ಕಿಲ್ಲಿಂಗ್ ಆಪರೇಷನ್ ನಡೆದಿತ್ತು. ಮೇಟಗಳ್ಳಿಯ ಫಾರ್ಮ್‌ನಲ್ಲಿದ್ದ 5,000 ಕೋಳಿಗಳನ್ನು ಸಾಯಿಸಲಾಗಿತ್ತು‌. ಈ ಬಾರಿ ಸಾಕಷ್ಟು ಮುನ್ನೆಚ್ಚರಿಕಾ ಕ್ರಮ ವಹಿಸಿದ್ದೇವೆ. ಕೇರಳ ಹಾಗೂ ಮಡಿಕೇರಿ ಗಡಿಯಲ್ಲಿ ಪಕ್ಷಿ ಹಾಗೂ‌‌ ಕೋಳಿ ಸಾಗಾಟ ನಿಷೇಧಿಸಲಾಗಿದೆ. ಆ ರಾಜ್ಯಗಳಿಂದ ಬರುವ ವಾಹನಗಳನ್ನು ಸ್ಯಾನಿಟೈಸ್​ ಮಾಡಲಾಗುತ್ತಿದೆ ಎಂದರು.

ಹಕ್ಕಿಜ್ವರ ಕುರಿತು ಜಿಲ್ಲಾಧಿಕಾರಿ ರೋಹಿನಿ ಸಿಂಧೂರಿ ಸ್ಪಷ್ಟನೆ..

ವಲಸೆ ಹಕ್ಕಿಗಳ ಮೇಲೆ ನಿಗಾ : ಎಲ್ಲೆಲ್ಲಿ ವಲಸೆ ಹಕ್ಕಿಗಳು ಬರುತ್ತವೆಯೋ ಅಲ್ಲಿ ಹಿಕ್ಕೆಗಳ ಸಂಗ್ರಹ ಮಾಡಿ ಲ್ಯಾಬ್‌ಗೆ ಕಳುಹಿಸಲಾಗಿದೆ. ಈವರೆಗೆ ಬಂದಿರುವ ಲ್ಯಾಬ್ ವರದಿಯಲ್ಲಿ ಹಕ್ಕಿಜ್ವರ ಪತ್ತೆಯಾಗಿಲ್ಲ. ಮೃಗಾಲಯಕ್ಕೆ ತಾತ್ಕಾಲಿಕ ಪ್ರವೇಶ ನಿರ್ಬಂಧ ಅಥವಾ ಇತರೆ ನಿರ್ಧಾರಗಳ ಬಗ್ಗೆ ತೀರ್ಮಾನಿಸಿಲ್ಲ. ಹಕ್ಕಿಜ್ವರ ಪತ್ತೆಯಾದ್ರೆ ಮುಂದಿನ ಹಂತದ ನಿರ್ಧಾರ ಮಾಡುತ್ತೇವೆ ಎಂದಿದ್ದಾರೆ.

ಕೊರೊನಾ ಲಸಿಕೆ ಅಭಿಯಾನಕ್ಕೆ ಸಿದ್ಧತೆ ಪೂರ್ಣ : ಪ್ರಾರಂಭಿಕ ಹಂತದಲ್ಲಿ ಮೈಸೂರಿನ 32 ಸಾವಿರ ಕೊರೊನಾ ವಾರಿಯರ್‌ಗಳಿಗೆ ಲಸಿಕೆ ಹಾಕುತ್ತೇವೆ. ಕೋವಿಡ್ ಲಸಿಕೆ ಅಭಿಯಾನ ಸಂಬಂಧ ಮುಖ್ಯ ಕಾರ್ಯದರ್ಶಿ ಅವರು ವಿಡಿಯೋ ಕಾನ್ಫರೆನ್ಸ್​ ನಡೆಸಿದ್ದಾರೆ‌.

ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳುವಂತೆ ಸೂಚನೆ ನೀಡಿದ್ದಾರೆ. ಯಾವ ಲಸಿಕೆ ಕೊಡುತ್ತಾರೆ ಎಂಬುದು ಗೊತ್ತಿಲ್ಲ. ಪ್ರಾಥಮಿಕ ಆರೋಗ್ಯ ಕೇಂದ್ರಗಳೂ ಸೇರಿದಂತೆ 162 ಪಾಯಿಂಟ್ ಮಾಡಿಕೊಂಡಿದ್ದೇವೆ ಎಂದರು.

ಪ್ರತಿ ಕೇಂದ್ರದಲ್ಲಿ 5 ವ್ಯಾಕ್ಸಿನೇಟರ್, ಸ್ಟೋರೇಜ್, ಅಗತ್ಯ ಸೌಕರ್ಯ ಎಲ್ಲವನ್ನೂ ರೆಡಿ ಮಾಡಿಕೊಂಡಿದ್ದೇವೆ. ಕೊರೊನಾ ವಾರಿಯರ್‌ಗಳಾಗಿ ಕೆಲಸ ಮಾಡಿದ 15 ಸಾವಿರ ಸರ್ಕಾರಿ ಹಾಗೂ 17 ಸಾವಿರ ಖಾಸಗಿ ಸಿಬ್ಬಂದಿ ಇದ್ದಾರೆ‌. ಮೊದಲ ಹಂತದಲ್ಲಿ ಇವರಿಗೆ ಮಾತ್ರ ವ್ಯಾಕ್ಸಿನೇಷನ್ ಮಾಡುತ್ತೇವೆ.

100ಕ್ಕಿಂತ ಹೆಚ್ಚು ಜನ ಇರುವ ಖಾಸಗಿ ಆಸ್ಪತ್ರೆಗಳಿಗೆ ಜಿಲ್ಲಾಡಳಿತದ ವತಿಯಿಂದಲೇ ಲಸಿಕೆ ಸರಬರಾಜು ಮಾಡುತ್ತೇವೆ. ಸಾರ್ವಜನಿಕರಿಗೆ ಸದ್ಯ ಲಸಿಕೆ ಹಾಕುವುದಿಲ್ಲ ಎಂದು ಡಿಸಿ ರೋಹಿಣಿ ಸಿಂಧೂರಿ ತಿಳಿಸಿದರು.

ಇದನ್ನೂ ಓದಿ: ದೆಹಲಿ ರೈತ ಪ್ರತಿಭಟನೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಯೋಧ ಹೃದಯಾಘಾತದಿಂದ ಸಾವು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.