ಮೈಸೂರು: ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಡಿಸಿ ಡಾ. ಬಗಾದಿ ಗೌತಮ್ ಅವರು ಹೊಸ ಆದೇಶ ಹೊರಡಿಸಿದ್ದಾರೆ.
ರೋಹಿಣಿ ಸಿಂಧೂರಿ ಅವರು ಶನಿವಾರ (ಜೂನ್ 5) ರಾತ್ರಿ ಮೈಸೂರಿನಿಂದ ವರ್ಗಾವಣೆಗೂ ಮುನ್ನ ಜೂ.14ರವರೆಗೆ ಸೋಮವಾರ, ಬುಧವಾರ ಹಾಗೂ ಶುಕ್ರವಾರ ಬೆಳಗ್ಗೆ 6ರಿಂದ 10ರವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಿದ್ದರು. ಆದರೆ, ಭಾನುವಾರ ನೂತನ ಡಿಸಿಯಾಗಿ ಅಧಿಕಾರ ಸ್ವೀಕರಿಸಿದ ಡಾ. ಬಗಾದಿ ಗೌತಮ್ ಅವರು ನಾಳೆಯಿಂದ ಜೂ.14ರವರೆಗೆ ಪ್ರತಿದಿನ ಬೆಳಗ್ಗೆ 6ರಿಂದ 10ರವರೆಗೆ ಅಗತ್ಯ ವಸ್ತುಗಳ ಅಂಗಡಿ ತೆರೆಯಲು ಅವಕಾಶ ನೀಡಿ ಆದೇಶ ಹೊರಡಿಸಿದ್ದಾರೆ.
ಓದಿ: ಮೈಸೂರು: ಆತ್ಮಹತ್ಯೆಗೆ ಯತ್ನಿಸಿದ ದಂಪತಿ; ಪತಿ ಸಾವು, ಪತ್ನಿ ಸ್ಥಿತಿ ಗಂಭೀರ