ETV Bharat / state

ಅಂಗನವಾಡಿ ಕಾರ್ಯಕರ್ತೆಯರಿಗೆ ಸೀಮಂತ ಮಾಡಿ ಶುಭ ಕೋರಿದ ಡಿಸಿ ರೋಹಿಣಿ ಸಿಂಧೂರಿ - DC rohini sindhuri did seemantha

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪೋಷಣ ಪಾಕ್ಷಿಕ ಕಾರ್ಯಕ್ರಮದ ಅಂಗವಾಗಿ ಗ್ರಾಮದ ಅಂಗನವಾಡಿಯಲ್ಲಿ ಇಬ್ಬರು ಗರ್ಭಿಣಿಯರಿಗೆ ಸೀಮಂತ ಕಾರ್ಯಕ್ರಮ ಆಯೋಜಿಸಿದ್ದು, ಅವರಿಗೆ ಅಕ್ಷತೆ ಹಾಕಿ ಶುಭ ಕೋರಲಾಯಿತು.

ಸೀಮಂತ
ಸೀಮಂತ
author img

By

Published : Mar 20, 2021, 8:52 PM IST

ಮೈಸೂರು: ಅಂಗನವಾಡಿ ಕಾರ್ಯಕರ್ತೆಯರಿಗೆ ಸೀಮಂತ ಮಾಡಿ‌ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಶುಭ ಕೋರಿದ್ದಾರೆ.

ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮದ ಅಂಗವಾಗಿ ಹೆಚ್.ಡಿ.ಕೋಟೆ ತಾಲೂಕು ಕಸಬಾ ಹೋಬಳಿಯ ಎಲೆಹುಂಡಿ ಗ್ರಾಮಕ್ಕೆ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಭೇಟಿ ನೀಡಿ, ಗ್ರಾಮದಲ್ಲಿ ಓಡಾಡಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪೋಷಣ ಪಾಕ್ಷಿಕ ಕಾರ್ಯಕ್ರಮದ ಅಂಗವಾಗಿ ಗ್ರಾಮದ ಅಂಗನವಾಡಿಯಲ್ಲಿ ಇಬ್ಬರು ಗರ್ಭಿಣಿಯರಿಗೆ ಸೀಮಂತ ಕಾರ್ಯಕ್ರಮ ಆಯೋಜಿಸಿದ್ದು, ಅವರಿಗೆ ಅಕ್ಷತೆ ಹಾಕಿ ಶುಭ ಕೋರಿದರು.

ಅಂಗನವಾಡಿ ಕಾರ್ಯಕರ್ತೆಯರಿಗೆ ಸೀಮಂತ ಮಾಡಿ ಶುಭ ಕೋರಿದ ಡಿಸಿ

ಬಳಿಕ ಗ್ರಾಮದ ಶ್ರೀ ವರದರಾಜಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ದೇವಾಲಯದ ಆವರಣದಲ್ಲಿ ಎರಡು ಗಿಡ ನೆಟ್ಟು ನೀರು ಎರೆದರು.
ಎಲೆಹುಂಡಿ ಸಮೀಪದ ಭೀಮನಹಳ್ಳಿಯಲ್ಲಿ ಸರ್ಕಾರಿ ಗಿರಿಜನ ಆಶ್ರಮ ಶಾಲೆಗೆ ಭೇಟಿ ನೀಡಿ, ಮಕ್ಕಳೊಂದಿಗೆ ಸಂವಾದ ನಡೆಸಿದರು.

ಶಾಲೆಯ 6ನೇ ತರಗತಿ ವಿದ್ಯಾರ್ಥಿ ಕಿರಣ್ ಮಗ್ಗಿ ಒಪ್ಪಿಸಿದರೆ, 7ನೇ ತರಗತಿ ವಿದ್ಯಾರ್ಥಿನಿ ಅಂಜಲಿ 'ನಂಬಿದೆ ನಿನ್ನ ನಾಗಾಭರಣ, ಕಾಯೋ ಕರುಣಾಮಯ ನನ್ನ' ಗೀತೆ ಹಾಡಿ ಪ್ರತಿಭೆ ಪ್ರದರ್ಶಿಸಿದರು. ಜಿಲ್ಲಾಧಿಕಾರಿಗಳು ಈ ವಸತಿ ಶಾಲೆಯಲ್ಲಿ ಊಟೋಪಚಾರದ ವ್ಯವಸ್ಥೆ, ಮುಂತಾದ ಸೌಲಭ್ಯಗಳ ಬಗ್ಗೆ ಮಕ್ಕಳಿಂದ ಮಾಹಿತಿ ಪಡೆದರು. ಗ್ರಾಮದ ಹಲವರು ತಮ್ಮ ಕುಂದು ಕೊರತೆಗಳ ಅಹವಾಲುಗಳನ್ನು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.