ETV Bharat / state

ಕಾರ್ಮಿಕರಿಗೆ ಕಡ್ಡಾಯವಾಗಿ ಕೋವಿಡ್ ಪರೀಕ್ಷೆ ಮಾಡಿಸಿ: ಡಿಸಿ ರೋಹಿಣಿ ಸಿಂಧೂರಿ ಸೂಚನೆ - dc rohini sindhuri orders to do corona test for company employees

ಮೈಸೂರು ಜಿಲ್ಲೆಯ ಕೈಗಾರಿಕೆಗಳಲ್ಲಿ ಕೆಲಸ ಮಾಡುತ್ತಿರುವ ಎಲ್ಲಾ ಕಾರ್ಮಿಕರಿಗೆ ಕಡ್ಡಾಯವಾಗಿ ಕೊರೊನಾ ಟೆಸ್ಟ್​​ ಮಾಡಿಸುವಂತೆ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ತಿಳಿಸಿದ್ದಾರೆ ಹಾಗೂ ಕೈಗಾರಿಕೆಗಳಲ್ಲಿ ಕೆಲಸ ಮಾಡುತ್ತಿರುವ 50 ವರ್ಷ ಮೇಲ್ಪಟ್ಟ ಕಾರ್ಮಿಕರ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವಂತೆ ಸೂಚಿಸಿದ್ದಾರೆ.

mysore dc order to do corona test for every employee of industries
ಕಾರ್ಮಿಕರಿಗೆ ಕಡ್ಡಾಯವಾಗಿ ಕೋವಿಡ್ ಪರೀಕ್ಷೆಗೆ ಸೂಚನೆ
author img

By

Published : Oct 30, 2020, 3:56 PM IST

ಮೈಸೂರು: ಜಿಲ್ಲೆಯ ಕೈಗಾರಿಕೆಗಳಲ್ಲಿ ಕೆಲಸ ಮಾಡುತ್ತಿರುವ ಎಲ್ಲಾ ಕಾರ್ಮಿಕರಿಗೆ ಕಡ್ಡಾಯವಾಗಿ ಆಗಾಗ್ಗೆ ಕೋವಿಡ್-19 ಪರೀಕ್ಷೆ ಮಾಡಿಸಬೇಕು ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸೂಚಿಸಿದ್ದಾರೆ.

mysore dc order to do corona test for every employee of industries
ಕಾರ್ಮಿಕರಿಗೆ ಕಡ್ಡಾಯವಾಗಿ ಕೋವಿಡ್ ಪರೀಕ್ಷೆಗೆ ಸೂಚನೆ

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮೈಸೂರು ಜಿಲ್ಲೆಯ ಕೈಗಾರಿಕೆಗಳ ಸಂಘದ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಕಾರ್ಮಿಕರಿಗೆ ಕೋವಿಡ್ ಪರೀಕ್ಷೆ ಮಾಡಿಸುವಲ್ಲಿ ಕೈಗಾರಿಕೋದ್ಯಮಿಗಳು ಸಹಕರಿಸಬೇಕು ಎಂದು ಹೇಳಿದ್ರು.

ಕಾರ್ಮಿಕರಿಗೆ ಕೋವಿಡ್ ಪರೀಕ್ಷೆ ಮಾಡಿಸಲು ಕೈಗಾರಿಕಾ ಸಂಘದವರು ನಿಗದಿತ ಜಾಗವನ್ನು ಗುರುತಿಸಿ ತಿಳಿಸಿದರೆ, ಜಿಲ್ಲಾಡಳಿತದಿಂದ ಉಚಿತವಾಗಿ ಪರೀಕ್ಷೆ ಮಾಡಲಾಗುತ್ತದೆ. ಈ ಬಗ್ಗೆ ಕೂಡಲೇ ಮಾಹಿತಿ ನೀಡಬೇಕು ಎಂದರು. ಜಿಲ್ಲೆಯ ಅನೇಕ ಕೈಗಾರಿಕೆಗಳಲ್ಲಿ ಕೆಲಸ ಮಾಡುತ್ತಿರುವ 50 ವರ್ಷ ಮೇಲ್ಪಟ್ಟ ಕಾರ್ಮಿಕರ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ಅವರಿಗೆ ಸೋಂಕಿನ ಲಕ್ಷಣ ಕಂಡುಬಂದರೆ ಕೂಡಲೇ ಪರೀಕ್ಷೆ ಮಾಡಿಸಲು ಮುಂದಾಗಬೇಕು ಎಂದು ತಿಳಿಸಿದರು.

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.