ಮೈಸೂರು: ಲಕ್ಷ್ಮಣ ತೀರ್ಥ ನದಿಯ ಪ್ರವಾಹಕ್ಕೆ ಸಿಲುಕಿ ಕಾಡೆಮ್ಮೆಯೊಂದು ಸಾವನ್ನಪ್ಪಿರುವ ಘಟನೆ ನಾಗರಹೊಳೆ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿ ನಡೆದಿದೆ.
ಕಳೆದ 1 ವಾರದಿಂದ ಸುರಿದ ದಾಖಲೆಯ ಮಳೆಗೆ ಜಲಾಶಯಗಳಲ್ಲಿ ಪ್ರವಾಹ ಉಂಟಾಗಿದೆ. ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ದಾಖಲೆಯ 120 ಮಿ.ಮೀ. ಮಳೆಯಾಗಿದ್ದರಿಂದ ಲಕ್ಷ್ಮಣ ತೀರ್ಥ ನದಿಯಲ್ಲಿ ಪ್ರವಾಹ ಪರಿಸ್ಥಿತಿ ಇದೆ.
ಈ ಪ್ರವಾಹದಲ್ಲಿ ಪ್ರಾಣ ಹಾನಿ, ಆಸ್ತಿ-ಪಾಸ್ತಿ ನಷ್ಟವಾಗಿದೆ. ಲಕ್ಷ್ಮಣ ತೀರ್ಥ ನದಿಯಲ್ಲಿ ಕಾಡೆಮ್ಮೆಯ ಸಾವನ್ನಪ್ಪಿದ್ದು, ಅದರ ಕಳೆಬರ ತೇಲಿಬಂದಿದೆ. ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲಿಸಿದ್ದಾರೆ.