ಮೈಸೂರು: ಕೆಫೆ ಕಾಫಿ ಡೇ ಮಾಲೀಕ ಸಿ.ಜಿ. ಸಿದ್ದಾರ್ಥ್ ಸಾವಿನ ಕುರಿತು ಸುಪ್ರೀಂಕೋರ್ಟ್ನ ನಿವೃತ್ತ ನ್ಯಾಯಾಧೀಶರಿಂದ ಕೇಂದ್ರ ಸರ್ಕಾರವು ತನಿಖೆ ಮಾಡಿಸಬೇಕು ಎಂದು ಸಮಾಜ ಪರಿವರ್ತನಾ ಸಮುದಾಯದ ಅಧ್ಯಕ್ಷ ಎಸ್.ಆರ್. ಹಿರೇಮಠ ಒತ್ತಾಯಿಸಿದ್ದಾರೆ.
ಮೈಸೂರಿನ ಜಿಲ್ಲಾ ಪತ್ರಕರ್ತರ ಭವನದಲ್ಲಿ ಪ್ರತಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಸಿದ್ದಾರ್ಥ್ ಅವರು ಚಾಣಾಕ್ಷ. ಆದರೆ ಅವರು ತೆರಿಗೆ ಕಟ್ಟುವ ವಿಚಾರದಲ್ಲಿ ಸರ್ಕಾರಗಳಿಗೆ ವಂಚನೆ ಮಾಡಿದ್ದಾರೆ. ಅಲ್ಲದೇ ಸಾಕಷ್ಟು ದುರುಪಯೋಗ ಮಾಡಿಕೊಂಡಿದ್ದಾರೆ. ತನಿಖೆಗೆ ಹೆದರಿ ಸಾವಿಗೆ ಶರಣಾಗಿದ್ದಾರೆ. ಇದರ ಬಗ್ಗೆ ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಾಧೀಶರಿಂದ ಸರ್ಕಾರ ಸಮಗ್ರ ತನಿಖೆ ಮಾಡಿಸಬೇಕಿದೆ ಎಂದರು.
ನಿವೃತ್ತಗೊಂಡಿರುವ ಕೌಶಿಕ ಮುಖರ್ಜಿ, ರಾಜ್ಯದ ಮುಖ್ಯ ಕಾರ್ಯದರ್ಶಿಯಾಗಿ ನಿವೃತ್ತಗೊಂಡಿರುವ ರಂಗನಾಥ್, ಜಯರಾಜ್ ಹಾಗೂ ಜಯರಾಜ್ ಪತ್ನಿ ಪೂರ್ಣಿಮ ಅವರ ಮೇಲಿನ ತನಿಖೆ ನಡೆಸಬೇಕಿದೆ ಎಂದರು. ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಹಾಗೂ ಸಿಎಂ ಬಿ.ಎಸ್ .ಯಡಿಯೂರಪ್ಪ ಇಬ್ಬರೂ ಕೂಡ ಭ್ರಷ್ಟಾಚಾರ ಮಾಡಿದ್ದಾರೆ. ರಾಜಕೀಯ ಭ್ರಷ್ಟಚಾರದ ಬಗ್ಗೆ ಸಮಗ್ರ ತನಿಖೆ ಮಾಡಬೇಕು ಎಂದು ಆಗ್ರಹಿಸಿದರು.