ETV Bharat / state

ಮೈಸೂರು ಭೀಕರ ಅಪಘಾತ ಪ್ರಕರಣ: ಚಿಕಿತ್ಸೆ ಪಡೆಯುತ್ತಿದ್ದ ಮತ್ತೊಬ್ಬ ಸಾವು... ಮೃತರ ಸಂಖ್ಯೆ 11ಕ್ಕೆ ಏರಿಕೆ

ಮೈಸೂರಿನ ಕೊಳ್ಳೇಗಾಲದ ಕುರುಬೂರು ಗ್ರಾಮದ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ ಇದೀಗ 11ಕ್ಕೇರಿದೆ. ಅಪಘಾತವಾದ ದಿನದಂದೇ ಕಾರು ಚಾಲಕ ಸೇರಿದಂತೆ 10 ಜನ ಮೃತಪಟ್ಟಿದ್ದರು.

Mysuru road accident
Mysuru road accident
author img

By

Published : Jun 2, 2023, 3:29 PM IST

ಮೈಸೂರು: ಟಿ.ನರಸೀಪುರದ ಬಳಿಯ ಕುರುಬೂರು ಗ್ರಾಮದ ಹೆದ್ದಾರಿಯಲ್ಲಿ ಮೇ 29 (ಸೋಮವಾರ) ರಂದು ಖಾಸಗಿ ಬಸ್ ಹಾಗೂ ಇನ್ನೋವಾ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಮತ್ತೊಬ್ಬ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಇಂದು ಕೆಆರ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಈ ಮೂಲಕ ಸಾವಿನ ಸಂಖ್ಯೆ ಇದೀಗ 11ಕ್ಕೆ ಏರಿಕೆಯಾಗಿದೆ. ಮತ್ತಿಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಅವರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಆಸ್ಪತ್ರೆಯ ವೈದ್ಯರು ಮಾಹಿತಿ ನೀಡಿದ್ದಾರೆ.

ಕಳೆದ ಮೂರು ದಿನಗಳ ಹಿಂದೆ ಮೈಸೂರು ಜಿಲ್ಲೆಯ ಟಿ.ನರಸೀಪುರದ ಬಳಿಯ ಕುರುಬೂರು ಗ್ರಾಮದ ಹೆದ್ದಾರಿಯಲ್ಲಿ ಇನ್ನೋವಾ ಕಾರು ಮತ್ತು ಖಾಸಗಿ ಬಸ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿತ್ತು. ಈ ದುರಂತದಲ್ಲಿ ಅವತ್ತೇ ಮೈಸೂರಿನ ಕಾರು ಚಾಲಕ ಸೇರಿದಂತೆ ಬಳ್ಳಾರಿ ಮೂಲದ 9 ಜನ ಮೃತಪಟ್ಟಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಮೂವರು ಕೆಆರ್ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಅದರಲ್ಲಿ ತಲೆಗೆ ಪೆಟ್ಟಾಗಿದ್ದ 45 ವರ್ಷದ ಸಂದೀಪ್ ಎಂಬ ಬಳ್ಳಾರಿ ಮೂಲದ ವ್ಯಕ್ತಿ ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಬೆಳಗ್ಗೆ ಸಂದೀಪ್ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಇನ್ನಿಬ್ಬರ (ಬಸ್​ನಲ್ಲಿದ್ದವರು) ಚಿಕಿತ್ಸೆ ಮುಂದುವರೆದಿದ್ದು, ಅವರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

Mysuru road accident
ಮೃತ ವ್ಯಕ್ತಿ

ಮೇ 27ರಂದು ಮೂರು ಕುಟುಂಬಗಳ 12 ಸದಸ್ಯರು ಪ್ರವಾಸಕ್ಕೆಂದು ಬಳ್ಳಾರಿಯಿಂದ ಮೈಸೂರಿಗೆ ಆಗಮಿಸಿದ್ದರು. ಮಲೆ ಮಾದೇಶ್ವರ ದರ್ಶನಕ್ಕೆ ಹೋಗಿ ಮೈಸೂರು ನಗರಕ್ಕೆ ವಾಪಸ್​ ಆಗುತ್ತಿರುವ ವೇಳೆ ಈ ದುರಂತ ಸಂಭವಿಸಿತ್ತು. ಅಪಘಾತವಾದ ದಿನದಂದೇ ಸಂದೀಪ್ (24), ಕೊಟ್ರೇಶ್(45), ಸುಜಾತಾ (40) ಮಂಜುನಾಥ (35), ಪೂರ್ಣಿಮಾ(30), ರ್ತಿಕ್ (08), ಪವನ್ (10), ಗಾಯತ್ರಿ(35), ಶ್ರಾವ್ಯ(3) ಮೃತಪಟ್ಟಿದ್ದರು. ಇದೀಗ ಸಂದೀಪ್ (45) ಎಂಬಾತ ಕೂಡ ಮೃತಪಟ್ಟಿದ್ದಾರೆ.

ಈ ದುರಂತದ ಬಗ್ಗೆ ಅಂದೇ ಟ್ವೀಟ್ ಮಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ​ಮೃತ ಕುಟುಂಬಗಳಿಗೆ ತಲಾ ಎರಡು ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದ್ದರು. ಅಪಘಾತದಲ್ಲಿ 10 ಮಂದಿ ಸಾವಿಗೀಡಾದ ಸುದ್ದಿ ಕೇಳಿ ಸಂಕಟವಾಯಿತು‌. ಮೃತರ ಆತ್ಮಕ್ಕೆ ಶಾಂತಿ ಕೋರುತ್ತೇನೆ. ದುರ್ಘಟನೆಯಲ್ಲಿ ಸಾವಿಗೀಡಾದವರ ಕುಟುಂಬಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ತಲಾ ರೂ. 2 ಲಕ್ಷ ಪರಿಹಾರ ನೀಡಲಾಗುವುದು. ಅಪಘಾತದಲ್ಲಿ ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆಯ ವ್ಯವಸ್ಥೆ ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಟ್ವೀಟ್​​ ಮಾಡಿದ್ದರು.

ಕಾಡಾನೆ ದಾಳಿಯಿಂದ ವ್ಯಕ್ತಿ ಸಾವು: ಕಾಡಾನೆ ದಾಳಿಯಿಂದ ಬೆಳೆ ರಕ್ಷಣೆ ಮಾಡಲು ಕಾವಲಿಗೆ ತೆರಳಿದ ವ್ಯಕ್ತಿಯೊಬ್ಬ ಕಾಡಾನೆ ದಾಳಿಯಿಂದ ಸ್ಥಳದಲ್ಲೇ ಮೃತಪಟ್ಟ ಘಟನೆ ಸರಗೂರು ತಾಲೂಕಿನ ಬಿ.ಮಟಗೆರೆ ಗ್ರಾಮದಲ್ಲಿ ನಡೆದಿದೆ. ರವಿಕುಮಾರ್ ಮೃತ ದುರ್ದೈವಿ. ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

ಮೃತ ರೈತನಿಗೆ ಸರ್ಕಾರದಿಂದ ಬರಬೇಕಾದ ಪರಿಹಾರವನ್ನು ಕೊಡಿಸುವ ಭರವಸೆಯನ್ನು ಅರಣ್ಯಾಧಿಕಾರಿಗಳು ನೀಡಿದ್ದಾರೆ. ಈ ಸಂಬಂಧ ಸರಗೂರು ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ರೈತನ ಮೃತದೇಹವನ್ನು ಕುಟುಂಬದವರಿಗೆ ನೀಡಿದ್ದಾರೆ.

ಇದನ್ನೂ ಓದಿ: ಮೈಸೂರು: ಖಾಸಗಿ ಬಸ್ ಮತ್ತು ಇನ್ನೋವಾ ಕಾರ್ ನಡುವೆ ಭೀಕರ ಅಪಘಾತ.. 10 ಮಂದಿ ಸಾವು, ತಲಾ 2 ಲಕ್ಷ ಪರಿಹಾರ ಘೋಷಿಸಿದ ಸಿಎಂ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.