ETV Bharat / state

ಕಡಿಮೆಯಾದ ಕೊರೊನಾ ಅಬ್ಬರ: ಪ್ರಯಾಣಿಕರ ಸಂಚಾರಕ್ಕೆ ಅಣಿಯಾಗುತ್ತಿದೆ ಮೈಸೂರು ಬಸ್ ನಿಲ್ದಾಣ

ಮೈಸೂರಲ್ಲಿ ಕೊರೊನಾ ಪ್ರಕರಣಗಳು ಕಡಿಮೆಯಾಗಿವೆ. ಈ ಹಿನ್ನೆಲೆಯಲ್ಲಿ ಎಲ್ಲಾ ಕ್ಷೇತ್ರಗಳ ಚಟುವಟಿಕೆಗಳು ಗರಿಗೆದರುತ್ತಿದ್ದು, ಸರ್ಕಾರಿ ಬಸ್ ಸಂಚಾರಕ್ಕೆ ಅನುಮತಿ ಸಿಗಬಹುದೆಂಬ ನಿರೀಕ್ಷೆಯಲ್ಲಿ ನಗರ ಬಸ್ ನಿಲ್ದಾಣವನ್ನು ಅಣಿಗೊಳಿಸಲಾಗುತ್ತಿದೆ.

author img

By

Published : May 17, 2020, 12:24 PM IST

preparation started in bus stand
ಪ್ರಯಾಣಿಕರ ಸಂಚಾರಕ್ಕೆ ಅಣಿಯಾಗುತ್ತಿರುವ ಬಸ್ ನಿಲ್ದಾಣ

ಮೈಸೂರು: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಪ್ರಕರಣಗಳು ಕಡಿಮೆಯಾಗಿದ್ದು, ಎಲ್ಲಾ ಕ್ಷೇತ್ರಗಳ ಚಟುವಟಿಕೆಗಳು ಗರಿಗೆದರಿವೆ. ಸರ್ಕಾರಿ ಬಸ್ ಸಂಚಾರಕ್ಕೆ ಅನುಮತಿ ಸಿಗಬಹುದೆಂಬ ನಿರೀಕ್ಷೆಯಲ್ಲಿ ನಗರ ಬಸ್ ನಿಲ್ದಾಣವನ್ನು ಸೇವೆಗೆ ಅಣಿಗೊಳಿಸಲಾಗುತ್ತಿದೆ.

ಕಳೆದ 50 ದಿನಗಳಿಂದ ಬಸ್ ಸಂಚಾರವಿಲ್ಲದೆ ಪ್ರಯಾಣಿಕರು ಪರದಾಡುತ್ತಿದ್ದಾರೆ. ಜನರ ಅನುಕೂಲಕ್ಕಾಗಿ ಬಸ್ ಸಂಚಾರ ಆರಂಭಿಸಬೇಕೆಂದು ಸರ್ಕಾರವು ನಗರ ಸಾರಿಗೆ ಉಪವಿಭಾಗಕ್ಕೆ ಸೂಚನೆ ನೀಡುತ್ತಿದ್ದಂತೆ ಬಸ್ ಸಂಚಾರ ಆರಂಭಗೊಳ್ಳಲಿದೆ. ಅದಕ್ಕಾಗಿ ಬಸ್ ನಿಲ್ದಾಣದಲ್ಲಿ ಈಗಾಗಲೇ ಸಿದ್ಧತೆಗಳು ಚುರುಕುಗೊಂಡಿವೆ.

ಈ ಸಂಬಂಧ ಈಟಿವಿ ಭಾರತದೊಂದಿಗೆ ಮಾತನಾಡಿದ ನಗರ ಸಾರಿಗೆ ಉಪವಿಭಾಗ ನಿಯಂತ್ರಣಾಧಿಕಾರಿ ಎಸ್.ಪಿ. ನಾಗರಾಜ್ ಅವರು, ಬಸ್ ನಿಲ್ದಾಣಕ್ಕೆ ಆಗಮಿಸುವ ಪ್ರಯಾಣಿಕರಿಗೆ ಆರೋಗ್ಯ ತಪಾಸಣೆ, ಸ್ಯಾನಿಟೈಸರ್​ ಬಳಕೆ, ಚಾಲಕ ಮತ್ತು ನಿರ್ವಾಹಕರಿಗೆ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವುದನ್ನು ಕಡ್ಡಾಯಗೊಳಿಸಲಾಗಿದೆ. ಅಲ್ಲದೆ ಪ್ರಯಾಣಿಕರ ನಡುವೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಬಸ್​ಗಳಲ್ಲಿ ಕೇವಲ 20 ರಿಂದ 30 ಜನರಿಗೆ ಮಾತ್ರ ಪ್ರಯಾಣ ಬೆಳೆಸಲು ಅನುವು ಮಾಡಿಕೊಡಲಾಗುತ್ತದೆ ಎಂದರು.

ಬಸ್ ನಿಲ್ದಾಣದಲ್ಲಿ ಎಲ್ಲಾ ಪ್ರವೇಶ ದ್ವಾರಗಳನ್ನು ಬಂದ್​ ಮಾಡಿ ಒಂದೇ ಮಾರ್ಗದಲ್ಲಿ ಬರುವಂತೆ ಹಾಗೂ ಮತ್ತೊಂದು ಮಾರ್ಗದಲ್ಲಿ ಹೋಗುವ ವ್ಯವಸ್ಥೆ ಮಾಡಲಾಗಿದೆ. ಪ್ರಯಾಣಿಕರಿಗೆ ಎರಡು ಕಡೆ ಸ್ವಯಂಚಾಲಿತ ಸ್ಯಾನಿಟೈಸರ್ ಹಾಗೂ ಆರೋಗ್ಯ ತಪಾಸಣೆ ನಡೆಯಲಿದೆ ಎಂದು ಮಾಹಿತಿ ನೀಡಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.