ಮೈಸೂರು: ಕೊರೊನಾ ಹಾಗೂ ಡೆಲ್ಟಾ ಪ್ಲಸ್ ಪ್ರಕರಣಗಳು ಹೆಚ್ಚಾದ ಹಿನ್ನೆಲೆ ಕರ್ನಾಟಕದ ಗಡಿ ಭಾಗdಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಜಿಲ್ಲೆಯ ಬಾವಲಿ ಚೆಕ್ ಪೋಸ್ಟ್ನಲ್ಲಿ ತಪಾಸಣೆಯನ್ನು ತೀವ್ರಗೊಳಿಸಲಾಗಿದೆ.
ಕೇರಳ ಹಾಗೂ ಮೈಸೂರು ಜಿಲ್ಲೆಯ ಗಡಿ ಭಾಗ ಹೆಚ್.ಡಿ.ಕೋಟೆ ತಾಲೂಕಿನ ಬಾವಲಿ ಚೆಕ್ಪೋಸ್ಟ್ನಲ್ಲಿ ಕೋವಿಡ್ ಹಾಗೂ ಡೆಲ್ಟಾ ಪ್ರಕರಣ ಹೆಚ್ಚಾದ ಹಿನ್ನೆಲೆ ಕೇರಳದಿಂದ ಕರ್ನಾಟಕಕ್ಕೆ ಬರುವ ಪ್ರತಿಯೊಂದು ವಾಹನಗಳನ್ನು ಮತ್ತು ವ್ಯಕ್ತಿಗಳನ್ನು ತಪಾಸಣೆಗೆ ಒಳಪಡಿಸಲಾಗುತ್ತಿದೆ. 72 ಗಂಟೆ ಒಳಗಿನ RTPCR ನೆಗಟಿವ್ ವರದಿಯನ್ನು ತರಬೇಕಾಗಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ರವಿ ಕುಮಾರ್ ತಿಳಿಸಿದ್ದಾರೆ.
ಓದಿ: ರಾಜ್ಯದಲ್ಲಿ Corona ಲಸಿಕೆ ಕೊರತೆ ಇಲ್ಲ: ಸಚಿವ ಸುಧಾಕರ್ ಸ್ಪಷ್ಟನೆ