ಮೈಸೂರು: ಸರಗಳ್ಳತನ ಮಾಡಿ ಬೈಕ್‌ನಲ್ಲಿ ಪರಾರಿಯಾಗುತ್ತಿದ್ದ ಇಬ್ಬರು ಸರಗಳ್ಳರ ಬೆನ್ನುಹತ್ತಿದ ಪೊಲೀಸರು, ಇಬ್ಬರನ್ನು ಬಂಧಿಸಿದ್ದಾರೆ.
ಮಂಡ್ಯ ಮೂಲದ ಕಿರಣ್ ಹಾಗೂ ಚೇತನ್ ಬಂಧಿತರೆಂದು ತಿಳಿದುಬಂದಿದೆ. ವಿಜಯನಗರದ ಕಾರ್ಪೊರೇಷನ್ ಬ್ಯಾಂಕ್ ಬಳಿ ಸರಗಳ್ಳರಿಂದ ವಿಜಯನಗರ ಪೊಲೀಸರು 3 ಲಕ್ಷ ರೂ ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ.
ಆರೋಪಿಗಳು ಕಾರ್ಪೊರೇಷನ್ ಬ್ಯಾಂಕ್ ಬಳಿ ಸರಗಳ್ಳತನಕ್ಕೆ ಹೊಂಚು ಹಾಕುತ್ತಿದ್ದರು. ಈ ಮಾಹಿತಿ ತಿಳಿದು ಪೊಲೀಸರು ಸ್ಥಳಕ್ಕೆ ಬಂದಿದ್ದಾರೆ. ಪೊಲೀಸರನ್ನು ಕಂಡು ಹೆದರಿದ ಇಬ್ಬರು ಬೈಕ್ ಏರಿ ಪರಾರಿಯಾಗಲು ಯತ್ನಿಸಿದ್ದರು. ತಕ್ಷಣ ಎಚ್ಚೆತ್ತುಕೊಂಡು ಪೊಲೀಸರು ಬೈಕ್ ಚೇಸ್ ಮಾಡಿ ಇಬ್ಬರನ್ನು ಬಂಧಿಸಿದ್ದಾರೆ.