ETV Bharat / state

ಹುಣ್ಣಿಮೆ, ಗ್ರಹಣ ಹಿನ್ನೆಲೆ: ನಂಜುಂಡೇಶ್ವರ ಸ್ವಾಮಿ ದೇಗುಲದಲ್ಲಿ ಭಕ್ತಸಾಗರ - deveotees visited Nanjangudu temple

ಮಂಗಳವಾರ ಹುಣ್ಣಿಮೆಯ ಹಿನ್ನೆಲೆ ಮೈಸೂರಿನ ನಂಜನಗೂಡಿನ ಶ್ರೀ ನಂಜುಡೇಶ್ವರ ದೇವಾಲಯದಲ್ಲಿ ಅಪಾರ ಸಂಖ್ಯೆಯ ಭಕ್ತರು ದೇವರ ದರ್ಶನಕ್ಕೆ ಆಗಮಿಸಿದ್ದರು.

deveotees-visited-nanjangudu-temple
ಹುಣ್ಣಿಮೆ,ಗ್ರಹಣ ಹಿನ್ನಲೆ: ನಂಜುಂಡೇಶ್ವರ ಸ್ವಾಮಿ ದೇಗುಲದಲ್ಲಿ ಭಕ್ತಸಾಗರ
author img

By

Published : Nov 8, 2022, 10:26 PM IST

ಮೈಸೂರು : ಮಂಗಳವಾರ ಹುಣ್ಣಿಮೆ ಪ್ರಯುಕ್ತ ಶ್ರೀ ನಂಜುಂಡೇಶ್ವರ ದೇಗುಲಕ್ಕೆ ಸ್ವಾಮಿಯ ದರ್ಶನ ಪಡೆಯಲು ರಾಜ್ಯದ ವಿವಿಧ ಭಾಗಗಳಿಂದ ಭಕ್ತರು ಆಗಮಿಸಿದ್ದರು. ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಲು ಭಕ್ತರು ಪರ ಊರುಗಳಿಂದ ಸೋಮವಾರ ರಾತ್ರಿ ಬಂದು ದೇವಾಲಯದ ಕೈಸಾಲೆ ಹಾಗೂ ಆವರಣದಲ್ಲಿ ತಂಗಿದ್ದರು. ಬೆಳಗ್ಗೆ 4.30ರಿಂದಲೇ, ಕಪಿಲಾ ನದಿಯ ಸ್ನಾನಘಟ್ಟದಲ್ಲಿ ಪುಣ್ಯಸ್ನಾನ ಮಾಡಿ ದೇವಾಲಯದ ಮುಂದೆ ಸರತಿ ಸಾಲಿನಲ್ಲಿ ನಿಂತಿದ್ದರು.

ದೇವಾಲಯದ ಆಗಮಿಕರಾದ ನಾಗಚಂದ್ರ ದೀಕ್ಷಿತ್ ನೇತೃತ್ವದಲ್ಲಿ ಸ್ವಾಮಿಗೆ ವಿಶೇಷ ಪೂಜೆ, ಮಹಾ ಮಂಗಳಾರತಿ ಸೇವೆಯ ನಂತರ ಭಕ್ತರ ದರ್ಶನಕ್ಕೆ ಅನುವು ಮಾಡಿಕೊಡಲಾಯಿತು. ದೇವಾಲಯದ ಮುಂಭಾಗ ಭಕ್ತರು ಉರುಳು ಸೇವೆ, ಧೂಪ, ದೀಪದ ಸೇವೆಯಲ್ಲಿ ನಿರತರಾಗಿದ್ದರು.

ಹರಕೆ ಮುಡಿ ಸಲ್ಲಿಸಲು, ಮುಡಿಕಟ್ಟೆಯಲ್ಲಿ ಭಕ್ತರ ಸಂದಣಿ ಏರ್ಪಟ್ಟಿತ್ತು. ಟಿಕೆಟ್ ಕೌಂಟರ್ ಹಾಗೂ ಪ್ರಸಾದದ ಕೌಂಟರ್ ನಲ್ಲಿ ಲಾಡು, ಕಲ್ಲು ಸಕ್ಕರೆ ಪ್ರಸಾದಕ್ಕೆ ಸರತಿಸಾಲು ಕಂಡುಬಂತು. ದಾಸೋಹ ಭವನದಲ್ಲಿ ಭಕ್ತರಿಗೆ ಅನ್ನ ದಾಸೋಹದ ವ್ಯವಸ್ಥೆ ಮಾಡಲಾಗಿತ್ತು. ಇದರಿಂದಾಗಿ ನಗರದ ರೈಲು ನಿಲ್ದಾಣ ಹಾಗೂ ಬಸ್ ನಿಲ್ದಾಣಗಳಲ್ಲಿ ಹೆಚ್ಚಿನ ಜನಸಂದಣಿ ಕಂಡುಬಂತು.

ಇದನ್ನೂ ಓದಿ : ಚಂದ್ರ ಗ್ರಹಣದ ನಡುವೆಯೂ ಆತ್ಮಲಿಂಗ ದರ್ಶನಕ್ಕೆ ಅವಕಾಶ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.