ಮೈಸೂರು : ಜಿಲ್ಲಾ ವರಿಷ್ಠಾಧಿಕಾರಿ ಕಚೇರಿಗೆ ಡಿಜಿ-ಐಜಿಪಿ ಪ್ರವೀಣ್ ಸೂದ್ ಅವರು ಭೇಟಿ ನೀಡಿ ಜಿಲ್ಲೆಯ ಅಪರಾಧ ಪ್ರಕರಣಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು.
ರಾಜ್ಯ ಪೊಲೀಸ್ ಮಹಾನಿರ್ದೇಶಕರು ಮತ್ತು ಪೊಲೀಸ್ ಮಹಾನಿರೀಕ್ಷಕರರಾದ ಪ್ರವೀಣ್ ಸೂದ್ ಅವರು ಜಿಲ್ಲಾ ವರಿಷ್ಠಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಮೈಸೂರು ಜಿಲ್ಲಾ ಪೊಲೀಸ್ ಘಟಕ ಹಾಗೂ ಇತರ ವಿಶೇಷ ಘಟಕಗಳ ಪರಾಮರ್ಶೆ ಸಭೆ ನಡೆಸಿದರು.
ಜಿಲ್ಲೆಯಲ್ಲಿ ಹೆಚ್ಚಾಗುತ್ತಿರುವ ಅಪರಾಧ ಪ್ರಕರಣ ಹಾಗೂ ಕಾಡಂಚಿನ ಗ್ರಾಮಗಳಲ್ಲಿ ಗಾಂಜಾ ಬೆಳೆ ಪ್ರಕರಣ ಹೆಚ್ಚಳವಾಗುತ್ತಿರುವುದರಿಂದ, ಇಂತಹ ಪ್ರಕರಣ ಮರುಕಳಿಸದಂತೆ ಕಾನೂನು ಕ್ರಮ ಬಿಗಿಗೊಳಿಸಬೇಕು ಎಂದು ಸೂಚನೆ ನೀಡಿದರು.
ದಕ್ಷಿಣ ವಲಯ ಐಜಿಪಿ ವಿಪುಲ್ ಕುಮಾರ್, ಜಿಲ್ಲಾ ಪೊಲೀಸ್ ಅಧೀಕ್ಷಕ ಸಿ ಬಿ ರಿಷ್ಯಂತ್, ಅಪರ ಪೊಲೀಸ್ ಅಧೀಕ್ಷಕರಾದ ಆರ್ ಶಿವಕುಮಾರ್, ವಿಶೇಷ ಘಟಕಗಳ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.