ಮೈಸೂರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿಯಿಂದ 77 ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಈ ಹುದ್ದೆ ನೇಮಕಾತಿ ನಡೆಯಲಿದೆ. ಗುತ್ತಿಗೆ ಆಧಾರದ ಮೇಲೆ ಈ ನೇಮಕಾತಿ ನಡೆಯಲಿದೆ. ಈ ಹುದ್ದೆಯಲ್ಲಿ ಆಸಕ್ತಿ ಹೊಂದಿರುವ ವೈದ್ಯಕೀಯ ಕ್ಷೇತ್ರದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆ: ಪೆಥಾಲಜಿ ವೈದ್ಯರು, ಆಯುಷ್ ವೈದ್ಯರು, ಮೆಡಿಕಲ್ ಆಫೀಸರ್, ಫಿಜಿಯೋಥೆರಪಿಸ್ಟ್, ಸ್ಟಾಫ್ ನರ್ಸ್, ಲ್ಯಾಬ್ ಟೆಕ್ನಿಶಿಯನ್, ಪ್ರಾಥಮಿಕ ಆರೋಗ್ಯ ಕೇಂದ್ರದ ಅಧಿಕಾರಿ, ಹೆಲ್ತ್ ಇನ್ಸ್ಪೆಕ್ಟರ್ ಆಫೀಸರ್, ಡಿಸ್ಟ್ರಿಕ್ ಪ್ರೋಗ್ರಾಂ ಕೊಆರ್ಡಿನೇಟರ್, ಕನ್ಸಲಟಂಟ್ ಮೆಡಿಸಿನ್, ಒಟಿ ಟೆಕ್ನಿಶಿಯನ್, ಲ್ಯಾಬ್ ಟೆಕ್ನಿಶಿಯನ್ ಸೇರಿದಂತೆ ಒಟ್ಟು 77 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಹತೆ: ವೈದ್ಯರ ಹುದ್ದೆಗೆ ಎಂಬಿಬಿಎಸ್ ಪದವಿಯನ್ನು ಪೂರ್ಣಗೊಳಿಸಿರಬೇಕು, ಸ್ಟಾಫ್ ನರ್ಸ್ ಹುದ್ದೆಗೆ ಬಿಎಸ್ಸಿ ಅಥವಾ ಎಂಎಸ್ಸಿ ನರ್ಸಿಂಗ್ ಆಗಿರಬೇಕು. ಲ್ಯಾಬ್ ಟೆಕ್ನಿಶಿಯನ್ ಹುದ್ದೆಗೆ ಪಿಯುಸಿ, ಅಥವಾ ಡಿಪ್ಲೊಮಾ ಇನ್ ಎಂಎಲ್ಟಿ ಆಗಿರಬೇಕು.
ವಯೋಮಿತಿ: ಅಭ್ಯರ್ಥಿಗಳು ವಿವಿಧ ಹುದ್ದೆಗೆ ಅನುಗುಣವಾಗಿ ವಯೋಮಿತಿ ಹೊಂದಿದ್ದು, ಗರಿಷ್ಠ ವಯೋಮಿತಿ 60 ವರ್ಷ ಆಗಿದೆ. ಪರಿಶಿಷ್ಟ ಜಾತಿ ಮತ್ತು ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಪ್ರವರ್ಗ 2 ಎ, 2ಬಿ, ಮತ್ತು 3ಬಿಗೆ 3 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗುವುದು.
ಈ ಹುದ್ದೆಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ಮಾಡಲಾಗುವುದು. ಈ ಹುದ್ದೆಗಳಿಗೆ ಅನುಸಾರವಾಗಿ 12,303 ರಿಂದ 50,000 ರೂ.ವರೆಗೆ ವೇತನವನ್ನು ನಿಗದಿಸಲಾಗಿದೆ.
ಅರ್ಜಿ ಸಲ್ಲಿಕೆ: ಈ ಹುದ್ದೆಗೆ ಅಭ್ಯರ್ಥಿಗಳು ಜಿಲ್ಲಾಡಳಿತದ ಅಧಿಕೃತ ಜಾಲತಾಣದ ಮೂಲಕ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಿದೆ. ಅರ್ಜಿ ಸಲ್ಲಿಕೆಗೆ ಯಾವುದೇ ಅರ್ಜಿ ಶುಲ್ಕ ನಿಗದಿಸಿಲ್ಲ. ಈ ಹುದ್ದೆಗಳು ಸಂಪೂರ್ಣವಾಗಿ ಗುತ್ತಿಗೆ ಆಧಾರಿತವಾಗಿದೆ. ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯಲ್ಲಿ ಅರ್ಜಿ ಭರಿಸಬೇಕಿದೆ.
ಅರ್ಜಿ ಸಲ್ಲಿಕೆ ಆಗಸ್ಟ್ 23 ರಿಂದ ಆರಂಭವಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಆಗಸ್ಟ್ 31 ಆಗಿದೆ.
ಈ ಹುದ್ದೆ ಕುರಿತು ಹೆಚ್ಚಿನ ಮಾಹಿತಿ ಸೇರಿದಂತೆ ಅಧಿಕೃತ ಅಧಿಸೂಚನೆಗೆ ಅಭ್ಯರ್ಥಿಗಳು mysore.nic.in ಈ ಜಾಲತಾಣಕ್ಕೆ ಭೇಟಿ ನೀಡಬಹುದಾಗಿದೆ.
ಇದನ್ನೂ ಓದಿ: Hescom Recruitment: ಹೆಸ್ಕಾಂನಲ್ಲಿ 248 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ