ETV Bharat / state

ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ 24 ಗಂಟೆಯೊಳಗೆ ನಾಲೆಗಳಿಗೆ ನೀರು ಬಿಡುವ ಕುರಿತು ತೀರ್ಮಾನ: ಸಚಿವ ಚಲುವರಾಯಸ್ವಾಮಿ - ಕೃಷ್ಣರಾಜಸಾಗರ ಅಚ್ಚುಕಟ್ಟು ಪ್ರದೇಶ

ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜೊತೆಗೆ ಚರ್ಚಿಸಿ 24 ಗಂಟೆಯೊಳಗೆ ಕೆಆರ್​ಎಸ್​ ಜಲಾಶಯದ ಅಚ್ಚುಕಟ್ಟು ಪ್ರದೇಶದ ನಾಲೆಗಳಿಗೆ ನೀರು ಬಿಡುವ ಕುರಿತು ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಸಚಿವ ಚಲುವರಾಯಸ್ವಾಮಿ ಹೇಳಿದರು.

Minister Chaluvarayaswamy
ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ 24 ಗಂಟೆಯೊಳಗೆ ನಾಲೆಗಳಿಗೆ ನೀರು ಬಿಡುವ ಕುರಿತು ತಿರ್ಮಾನ: ಸಚಿವ ಚಲುವರಾಯಸ್ವಾಮಿ
author img

By

Published : Aug 7, 2023, 8:01 PM IST

ಮಂಡ್ಯ: ''ಕೃಷ್ಣರಾಜಸಾಗರ ಅಚ್ಚುಕಟ್ಟು ಪ್ರದೇಶದ ನಾಲೆಗಳಿಗೆ ನೀರು ಬಿಡುಗಡೆ ವಿಚಾರವಾಗಿ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ಜೊತೆಗೆ ಚರ್ಚಿಸಿ ಮುಂದಿನ 24 ಗಂಟೆಯೊಳಗೆ ತೀರ್ಮಾನ ಕೈಗೊಳ್ಳಲಾಗುವುದು'' ಎಂದು ಜಿಲ್ಲಾ ಉಸ್ತುವಾರಿ ಹಾಗೂ ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಮಾಹಿತಿ ನೀಡಿದರು.

ಕೆ ಆರ್ ಎಸ್​ನ ಕಾವೇರಿ ಸಭಾಂಗಣದಲ್ಲಿ ನಡೆದ ನೀರಾವರಿ ಸಲಹಾ ಸಮಿತಿ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ''ಜಲಾಶಯ ಅಚ್ಚಕಟ್ಟು ಪ್ರದೇಶದ ಸಮಸ್ಯೆ ಬಗ್ಗೆ ಸುದೀರ್ಘ ಚರ್ಚೆ ಮಾಡಿದ್ದೇವೆ. ನಾಲೆಗಳಿಗೆ ನೀರು ಬಿಡುವ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಜಲಸಂಪನ್ಮೂಲ ಸಚಿವರು ಆಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಜೊತೆ ಮಾತುಕತೆ ನಡೆಸಿ ನಿರ್ಧಾರ ಕೈಗೊಳ್ಳಲಾಗುವುದು'' ಎಂದರು.

''ಸರ್ಕಾರ ರೈತರ ಪರ ಇರಲಿದೆ. ಈ ಕುರಿತು ಯಾವುದೇ ಆತಂಕ ಬೇಡ. ಮುಂದಿನ ಒಂದು ದಿನದೊಳಗೆ ತೀರ್ಮಾನಿಸಿ ಜನರಿಗೆ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರು ಮತ್ತು ಬೆಳೆದು ನಿಂತಿರುವ ಬೆಳೆಗಳಿಗೆ ರಕ್ಷಣೆಗೆ ಕ್ರಮ ವಹಿಸಲಾಗುವುದು'' ಎಂದು ಅವರು ತಿಳಿಸಿದರು.

ಸಚಿವ ಹೆಚ್.ಸಿ. ಮಹದೇವಪ್ಪ ಮಾಹಿತಿ: ಸಭೆ ಬಳಿಕ ಸಚಿವ ಹೆಚ್.ಸಿ. ಮಹದೇವಪ್ಪ ಮಾತನಾಡಿ, ''ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ನೀರಾವರಿ ಸಲಹಾ ಸಮಿತಿ ಸಭೆ ನಡೆದಿರಲ್ಲಿಲ್ಲ. ಕೃಷಿ ಇಲಾಖೆ ಸಚಿವ ಚಲುವರಾಯಸ್ವಾಮಿ ಅಧ್ಯಕ್ಷರಾಗಿದ್ದಾರೆ. ಕೆಆರ್​ಎಸ್​ ಡ್ಯಾಂ ವ್ಯಾಪ್ತಿಯ ಶಾಸಕರ ಜೊತೆ ಚರ್ಚಿಸಿ ಸಭೆ ಕುಡಿಯುವ ನೀರು ಬೇಕಾಗಿದೆ. ಜಲಾಶಯದಲ್ಲಿ ಸಂಗ್ರಹವಾಗಿರುವ ನೀರು 113 ಅಡಿಯಷ್ಟು ಇದೆ. 35 ಅಡಿಯಷ್ಟು ವ್ಯವಸಾಯಕ್ಕೆ ಲಭ್ಯವಿದೆ. ಪ್ರತಿ ತಿಂಗಳು 2 ಟಿಎಂಸಿ ನೀರು ಕುಡಿಯಲು ಬೇಕಾಗುತ್ತದೆ. ಮುಂದಿನ ಐದಾರು ತಿಂಗಳವರೆಗೆ ಸುಮಾರು 10 ಟಿಎಂಸಿ ನೀರು ಕುಡಿಯಲು ಬೇಕಾಗುತ್ತದೆ. ಜೊತೆಗೆ ಮುಂಬರುವ ದಿನಗಳಲ್ಲಿ ಉತ್ತಮ ಮಳೆಯಾಗುವ ಸಂಭವ ಇದೆ. ಕುಡಿಯಲು ಬೇಕಾಗಿರುವ ನೀರು, ಕೃಷಿ ಅವಶ್ಯವಿರುವ ನೀರು ಹಾಗೂ ನ್ಯಾಷನಲ್​ ವಾಟರ್ ಕಮಿಷನ್ ಮತ್ತು ಸುಪ್ರೀಂ ಕೋರ್ಟ್ ನಿರ್ದೇಶನಗಳನ್ನು ಗಮನದಲ್ಲಿಟ್ಟುಕೊಂಡು ನೀರು ವಿತರಿಸುವ ಬಗ್ಗೆ ಚರ್ಚೆ ನಡೆದಿದೆ. ಈ ವಿಚಾರವನ್ನು ಸಿಎಂ ಗಮನಕ್ಕೆ ತಂದು 24 ಗಂಟೆಯೊಳಗೆ ನಿರ್ಧಾರ ತೆಗೆದುಕೊಳ್ಳುತ್ತೇವೆ'' ಎಂದು ತಿಳಿಸಿದರು.

ಸಭೆಯಲ್ಲಿ ಶಾಸಕರಾದ ಜಿ.ಟಿ. ದೇವೇಗೌಡ, ಪಿ.ಎಂ. ನರೇಂದ್ರಸ್ವಾಮಿ, ರವಿಕುಮಾರ್, ರಮೇಶ್ ಬಾಬು ಬಂಡೀಸಿದ್ದೇಗೌಡ, ಉದಯ್, ಹೆಚ್.ಟಿ. ಮಂಜು, ವಿಧಾನ ಪರಿಷತ್ ಸದಸ್ಯರಾದ ಮಧು ಜಿ. ಮಾದೇಗೌಡ, ಮರಿತಿಬ್ಬೇಗೌಡ, ದಿನೇಶ್ ಗೂಳಿಗೌಡ, ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ, ಮೈಸೂರು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಸೇರಿದಂತೆ ಅಧಿಕಾರಿಗಳು ಭಾಗಿಯಾಗಿದ್ದರು.

ಇದನ್ನೂ ಓದಿ: ಶಾಸಕರ ಶಿಫಾರಸ್ಸು ಪತ್ರ ಪರಿಶೀಲಿಸಿ ವಾರದೊಳಗೆ ಪೊಲೀಸರ ವರ್ಗಾವಣೆ: ಗೃಹ ಸಚಿವ ಜಿ. ಪರಮೇಶ್ವರ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.