ETV Bharat / state

ದಸರಾ-2021 : ದಸರಾ ಆಚರಣೆಗೆ 6 ಉಪಸಮಿತಿಗಳನ್ನ ನೇಮಕ ಮಾಡಿದ ಜಿಲ್ಲಾಧಿಕಾರಿಗಳು

ಉಪ ಸಮಿತಿಗಳು ಎಲ್ಲಾ ಕಾರ್ಯಕ್ರಮಗಳ ರೂಪುರೇಷೆಗಳನ್ನು ಸಿದ್ಧಪಡಿಸಿಕೊಂಡು ಕಾರ್ಯಕ್ರಮ ಆಯೋಜಿಸುವುದು, ದಸರಾ ಕಾರ್ಯಕ್ರಮದಲ್ಲಿ ವೆಚ್ಚ ಮಾಡಿದ ಅನುದಾನಕ್ಕೆ ಅಡಿಟ್ ಮಾಡಿಸಿ ಓಚರ್ ಮತ್ತು ಉಪಯುಕ್ತ ಪತ್ರ ಸಮೇತ ಸಲ್ಲಿಸಬೇಕು. ಕಾರ್ಯಕ್ರಮಗಳಲ್ಲಿ ಸರ್ಕಾರದ ಶಿಷ್ಟಾಚಾರ ಉಲ್ಲಂಘನೆಯಾಗದಂತೆ ನೋಡಿಕೊಳ್ಳಬೇಕೆಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ..

District Collector appoints 6 subcommittees for Dasara celebration
6 ಉಪಸಮಿತಿಗಳ ನೇಮಕ ಮಾಡಿದ ಜಿಲ್ಲಾಧಿಕಾರಿ
author img

By

Published : Sep 14, 2021, 4:58 PM IST

ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ-2021 ಸರಳ ಆಚರಣೆಗೆ ಉಪ ಸಮಿತಿ ರಚಿಸಿ ಅಧಿಕೃತ ಜ್ಞಾಪನಾ ಪತ್ರವನ್ನು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಹೊರಡಿಸಿದ್ದಾರೆ.

ದಸರಾ ಕಾರ್ಯಕಾರಿ ಸಮಿತಿ ಸಭೆಯ ತೀರ್ಮಾನದಂತೆ 6 ಉಪ ಸಮಿತಿಗಳನ್ನು ರಚಿಸಿ ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್ ಆದೇಶಿಸಿದ್ದಾರೆ. ಸ್ವಾಗತ ಮತ್ತು ಆಮಂತ್ರಣ ಸಮಿತಿ, ದೀಪಾಲಂಕಾರ ಸಮಿತಿ, ಮೆರವಣಿಗೆ ಸಮಿತಿ, ಸಾಂಸ್ಕೃತಿಕ ದಸರಾ ಸಮಿತಿ, ಸ್ವಚ್ಛತೆ ಮತ್ತು ವ್ಯವಸ್ಥೆ ಸಮಿತಿ, ಸ್ತಬ್ಧಚಿತ್ರ ಸಮಿತಿ ರಚನೆ ಮಾಡಿ ಆದೇಶ ಹೊರಡಿಸಲಾಗಿದೆ.

ಸಮಿತಿಗಳಿಗೆ ಉಪ ವಿಶೇಷಾಧಿಕಾರಿ ಕಾರ್ಯಾಧ್ಯಕ್ಷರು ಹಾಗೂ ಕಾರ್ಯದರ್ಶಿಗಳಾಗಿ ವಿವಿಧ ಇಲಾಖೆಯ ಅಧಿಕಾರಿಗಳನ್ನು ನೇಮಕ ಮಾಡಿ, ಉಪ ಸಮಿತಿಗಳಿಗೆ ಕಾರ್ಯಗಳ ನಿಯೋಜನೆ ಮಾಡಲಾಗಿದೆ.

ಎಲ್ಲಾ ಉಪ ಸಮಿತಿಗಳು ದಸರಾ ಉನ್ನತ ಮಟ್ಟದ ಸಮಿತಿ ಹಾಗೂ ಕಾರ್ಯಕಾರಿ ಸಮಿತಿಯ ತೀರ್ಮಾನಗಳಿಗೆ ಬದ್ಧರಾಗಿ ಕಾರ್ಯ ನಿರ್ವಹಿಸಬೇಕು. ‌ಉಪ ಸಮಿತಿಗಳು ಬಿಡುಗಡೆ ಮಾಡಿದ ದಸರಾ ಅನುದಾನವನ್ನು ನಿಯಮಾನುಸಾರ ಪಾರದರ್ಶಕತೆಯಿಂದ ವೆಚ್ಚ ಮಾಡಬೇಕೆಂದು ಅಧಿಕೃತ ಜ್ಞಾಪನಾ ಪತ್ರದಲ್ಲಿ ತಿಳಿಸಿರುವ ಜಿಲ್ಲಾಧಿಕಾರಿಗಳು, ಎಲ್ಲಾ ಸದಸ್ಯರು ತಮಗೆ ವಹಿಸಿದ ಕಾರ್ಯಗಳನ್ನು ಯಾವುದೇ ಲೋಪಕ್ಕೆ ಅವಕಾಶ ನೀಡದಂತೆ ನಿರ್ವಹಿಸಬೇಕೆಂದು ತಿಳಿಸಿದ್ದಾರೆ.

ಉಪ ಸಮಿತಿಗಳು ಎಲ್ಲಾ ಕಾರ್ಯಕ್ರಮಗಳ ರೂಪುರೇಷೆಗಳನ್ನು ಸಿದ್ಧಪಡಿಸಿಕೊಂಡು ಕಾರ್ಯಕ್ರಮ ಆಯೋಜಿಸುವುದು, ದಸರಾ ಕಾರ್ಯಕ್ರಮದಲ್ಲಿ ವೆಚ್ಚ ಮಾಡಿದ ಅನುದಾನಕ್ಕೆ ಅಡಿಟ್ ಮಾಡಿಸಿ ಓಚರ್ ಮತ್ತು ಉಪಯುಕ್ತ ಪತ್ರ ಸಮೇತ ಸಲ್ಲಿಸಬೇಕು. ಕಾರ್ಯಕ್ರಮಗಳಲ್ಲಿ ಸರ್ಕಾರದ ಶಿಷ್ಟಾಚಾರ ಉಲ್ಲಂಘನೆಯಾಗದಂತೆ ನೋಡಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ತಿಳಿಸಿದ್ದಾರೆ.

ಇದನ್ನೂ ಓದಿ:ರಿಲ್ಯಾಕ್ಸ್ ಮೂಡ್​​ನಲ್ಲಿ ಗಜಪಡೆ: 8 ಗಜಪಡೆಗಳ ತೂಕ ಎಷ್ಟು ಅಂತೀರಾ?

ETV Bharat Logo

Copyright © 2024 Ushodaya Enterprises Pvt. Ltd., All Rights Reserved.