ಮೈಸೂರು: ಇಂದು ಜಿಲ್ಲೆಯಲ್ಲಿ ಯಾವುದೇ ಕೊರೊನಾ ಸೋಂಕಿತ ಕೇಸ್‌ಗಳು ಪತ್ತೆಯಾಗಿಲ್ಲ. 4 ಜನ ಕೋವಿಡ್-19 ಆಸ್ಪತ್ರೆಯಿಂದ ಗುಣಮುಖರಾಗಿ ಮನೆಗೆ ಮರಳಿದ್ದಾರೆ ಎಂದು ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಸ್ಪಷ್ಟಪಡಿಸಿದ್ದಾರೆ.
ಕಳೆದ ಒಂದು ವಾರದಿಂದ ಮೈಸೂರಿನಲ್ಲಿ ಬರೀ 2 ಮಾತ್ರ ಸೋಂಕಿತ ಕೇಸ್ ಪತ್ತೆಯಾಗಿದ್ದವು. ಈವರೆಗೆ ಸೋಂಕಿತರ ಸಂಖ್ಯೆ 90 ಆಗಿದ್ದು, ಅದರಲ್ಲಿ ಇಂದು ಪಿ-270, ಪಿ-321, ಪಿ-365, ಪಿ-366 ಸೋಂಕಿನಿಂದ ಗುಣಮುಖರಾಗಿ ಮನೆಗೆ ಮರಳಿದ್ದಾರೆ.
ಈವರೆಗೆ 62 ಜನ ಕೊರೊನಾ ಸೋಂಕಿತರು ಗುಣಮುಖರಾಗಿದ್ದಾರೆ. ಉಳಿದ 28 ಜನ ಮಾತ್ರ ಕೋವಿಡ್-19 ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ತಿಳಿಸಿದ್ದಾರೆ.