ಮೈಸೂರು : ಅಗತ್ಯ ಕ್ರಮಗಳನ್ನು ಕೈಗೊಂಡು ಶಾಲೆಗಳು ಎಂದಿನಂತೆ ಆರಂಭಿಸಲು ಶಿಕ್ಷಣಾಧಿಕಾರಿಗಳು ನಿರ್ಧಾರ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್ ಸೂಚನೆ ಕೊಟ್ಟಿದ್ದಾರೆ.
ದಿನಾಂಕ 24ರಿಂದ ಜಿಲ್ಲೆಯ ಸರ್ಕಾರಿ, ಅನುದಾನಿತ, ಅನುದಾನ ರಹಿತ ಶಾಲೆಗಳು, ವಸತಿ ಶಾಲೆಗಳು, ಪ್ರಾಥಮಿಕ ಶಾಲೆಗಳು, ಪ್ರೌಢಶಾಲೆಗಳೆಲ್ಲವೂ ತೆರೆಯಲು ಸೂಚನೆ ಕೊಟ್ಟಿದ್ದಾರೆ.
ತಾಲೂಕಿನ ವೈದ್ಯಾಧಿಕಾರಿ, ಕ್ಷೇತ್ರ ಶಿಕ್ಷಣಾಧಿಕಾರಿ, ತಹಶೀಲ್ದಾರ್ ಅವರ ತ್ರಿಸದಸ್ಯ ಸಮಿತಿ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ, ಡಿಡಿಪಿಐ, ಸಂಬಂಧಿಸಿದ ಶಿಕ್ಷಣಾಧಿಕಾರಿಗೆ, ಕೋವಿಡ್ ಮುಂಜಾಗ್ರತಾ ಕ್ರಮಗಳನ್ನ ಪಾಲಿಸಿ, ಭೌತಿಕ ತರಗತಿ ನಡೆಸಲು ಸೂಚಿಸಿದ್ದಾರೆ.
ಜಾಹಿರಾತು :ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ