ಮೈಸೂರು: ಕೊರೊನಾ ಸೋಂಕಿಗೆ ವೈದ್ಯನೋರ್ವ ಸಾವನ್ನಪ್ಪಿರುವ ಘಟನೆ ಜಯಪುರದಲ್ಲಿ ನಡೆದಿದೆ.
ಜಿಲ್ಲೆಯಲ್ಲಿ ಕೊರೊನಾ ಸೋಂಕಿತ ಪ್ರಕರಣಗಳು ದಿನೇ ದಿನೆ ಉಲ್ಬಣವಾಗುತ್ತಿದ್ದು, ವೈದ್ಯರಲ್ಲೂ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಜಯಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ 53 ವರ್ಷದ ವೈದ್ಯ ಸೋಂಕಿನಿಂದ ಮೃತಪಟ್ಟಿದ್ದಾರೆ. ಜಯಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಇವರಿಗೆ ಸೋಂಕು ದೃಢಪಟ್ಟಿತ್ತು.
ನಂತರ ಅವರನ್ನು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ.